ಬೆಂಗಳೂರು: ನನ್ನ ವಿರುದ್ಧ ಟಾರ್ಗೆಟ್ ಮಾಡೋರ ಬಗ್ಗೆ ನಾನು ತಲೆಕೆಡಿಸಿಕೊಳ್ಳಲ್ಲ ಎಂದು ಯತ್ನಾಳ್‌ಗೆ (Basanagouda Patil Yatnal) ಬಿಜೆಪಿ (BJP) ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ತಿರುಗೇಟು ಕೊಟ್ಟಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ನನ್ನನ್ನು ಟಾರ್ಗೆಟ್ ಮಾಡೋರು ಮಾಡಿಕೊಳ್ಳಲಿ. ನನ್ನ ಟಾರ್ಗೆಟ್ ಮಾಡೋರ ಬಗ್ಗೆ ನಾನು ತಲೆ ಕೆಡಿಸಿಕೊಳ್ಳಲ್ಲ. ನಾನು ಕೆಲಸ ಮಾಡಲು ಬಂದಿದ್ದೇನೆ. ಕೆಲಸ ಮಾಡಿಕೊಂಡು ಹೋಗುತ್ತಾರೆ. ಕೆಲಸ ಇಲ್ಲದೇ ಇರೋರು ಮಾತನಾಡುತ್ತಾರೆ, ಮಾತನಾಡಲಿ. ಅವರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ಕಾರ್ಮಿಕರ ಹಲ್ಲೆ ಖಂಡನೀಯ, ಆರೋಪಿಗಳ ಬಂಧನಕ್ಕೆ ಸೂಕ್ತ ಕ್ರಮ – ಎಂ.ಬಿ ಪಾಟೀಲ್
Advertisement
Advertisement
ಯತ್ನಾಳ್ ವಿರುದ್ಧ ಕ್ರಮದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಯಾರು ಕ್ರಮ ಕೈಗೊಳ್ಳಬೇಕೋ ಅವರು ತೆಗೆದುಕೊಳ್ಳುತ್ತಾರೆ. ಫೆಬ್ರವರಿ ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆ ಇದೆ. ಪಕ್ಷದ ಇವತ್ತಿನ ಬೆಳವಣಿಗೆಗಳ ಬಗ್ಗೆ ಕಾರ್ಯಕರ್ತರ ನೋವು ಇದೆ. ಆ ನೋವು ಏನು ಎಂದು ಅರ್ಥ ಆಗುತ್ತೆ. ಇದೆಲ್ಲದಕ್ಕೂ ಇತಿಶ್ರೀ ಹಾಡೋ ಕೆಲಸ ಹೈಕಮಾಂಡ್ ಮಾಡುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಕೋಲ್ಕತ್ತಾ ಟ್ರೈನಿ ವೈದ್ಯೆ ರೇಪ್ ಕೇಸ್ – ಅಪರಾಧಿ ಸಂಜಯ್ ರಾಯ್‌ಗೆ ಜೀವಾವಧಿ ಶಿಕ್ಷೆ
Advertisement