ಹಾಸನ: ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್‍ರವರ ರಾಜೀನಾಮೆಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅಂಗೀಕರಿಸುತ್ತಾರೋ ಅಥವಾ ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ ಜೊತೆ ಮಾತಾನಾಡಿ ಬಗೆಹರಿಸುತ್ತಾರೋ ಎನ್ನುವ ಮಾಹಿತಿ ತಿಳಿದಿಲ್ಲವೆಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ.
ಸಚಿವ ಎನ್.ಮಹೇಶ್ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿದ ಅವರು, ಶಿಕ್ಷಣ ಸಚಿವರ ರಾಜೀನಾಮೆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಅಲ್ಲದೇ ಖುದ್ದು ಅವರೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರಿಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಹೀಗಾಗಿ ಯಾರೂ ಗಾಬರಿ ಪಡುವ ಅಗತ್ಯವಿಲ್ಲ. ನಾನು ಬೆಂಗಳೂರಿಗೆ ಹೋಗಿ ಮಾಹಿತಿ ಪಡೆದ ನಂತರ ಈ ಬಗ್ಗೆ ಮಾತನಾಡುತ್ತೇನೆ ಎಂದು ತಿಳಿಸಿದರು.
Advertisement
Advertisement
ಎನ್.ಮಹೇಶ್‍ರವರ ರಾಜೀನಾಮೆ ಅವರ ಪಕ್ಷದ ತೀರ್ಮಾನ ಇರಬಹುದು. ಹೀಗಾಗಿ ಸಿಎಂ ಕುಮಾರಸ್ವಾಮಿಯವರು ಸಚಿವರ ರಾಜೀನಾಮೆಯನ್ನು ಅಂಗೀಕರಿಸುತ್ತಾರೋ ಅಥವಾ ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿಯವರೊಂದಿಗೆ ಮಾತನಾಡುತ್ತಾರೋ ಎನ್ನುವ ಮಾಹಿತಿ ಗೊತ್ತಿಲ್ಲ. ಮೊದಲ ಬಾರಿ ಗೆದ್ದು ಸಚಿವರಾಗಿದ್ದ ಒಳ್ಳೆಯ ರಾಜಕಾರಣಿ ಅವರು. ಅವರು ರಾಜೀನಾಮೆ ನೀಡದೆ, ತಮ್ಮ ಸ್ಥಾನದಲ್ಲೇ ಮುಂದುವರಿಯುವಂತೆ ಹೇಳುತ್ತೇನೆ ಎಂದು ಹೇಳಿದರು.
Advertisement
ರಾಜೀನಾಮೆ ಬಗ್ಗೆ ಎನ್.ಮಹೇಶ್‍ರ ಸ್ಪಷ್ಟನೆ ಏನು?
ನಾನು ನನ್ನ ಕ್ಷೇತ್ರಗಳಿಗೆ ಭೇಟಿ ಆಗೋದಕ್ಕೆ ಸಮಯ ಸಿಗುತ್ತಿಲ್ಲ. ಹಾಗಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಕ್ಷೇತ್ರದ ಅಭಿವೃದ್ಧಿಗಾಗಿ ಕೆಲಸ ಮಾಡಲಿದ್ದೇನೆ. ನನ್ನನ್ನು ಸಚಿವರನ್ನಾಗಿ ಮಾಡಿದ್ದ ಮಾನ್ಯ ಸಿಎಂ ಕುಮಾರಸ್ವಾಮಿ ಅವರ ಧನ್ಯವಾದ ತಿಳಿಸುತ್ತೇನೆ. ಮುಂದೆ ಸರ್ಕಾರದ ಭಾಗವಾಗಿ ಇರಲ್ಲ, ಕೇವಲ ಕುಮಾರಸ್ವಾಮಿ ನೇತೃತ್ವ ಸರ್ಕಾರದ ಬೆಂಬಲಿಗನಾಗಿ ಇರುತ್ತೇನೆ. ನನ್ನ ಸಂಪೂರ್ಣ ಬೆಂಬಲ ಕುಮಾರಸ್ವಾಮಿ ಅವರಿಗಿದ್ದು, ಉಪ ಚುನಾವಣೆಯಲ್ಲಿ ಜೆಡಿಎಸ್ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಹೇಳಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv