ಬೆಂಗಳೂರು: ಸಿಎಂ ಸಲಹೆಗಾರ ಶಾಸಕ ಬಿ.ಆರ್.ಪಾಟೀಲ್ ರಾಜೀನಾಮೆ ಯಾಕೆ ಕೊಟ್ಟಿದ್ದಾರೆ ಎಂದು ನನಗೆ ಗೊತ್ತಿಲ್ಲ. ಸಿಎಂ ಅವರು ಬಿ.ಆರ್. ಪಾಟೀಲ್ ಜೊತೆ ಮಾತನಾಡುತ್ತಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ಹೇಳಿದರು.ಇದನ್ನೂ ಓದಿ: ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಹೊಸ ಮಸೂದೆ – ಸುಗ್ರೀವಾಜ್ಞೆಗೆ ಸಿಎಂ ಒಪ್ಪಿಗೆ
Advertisement
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಲಹೆಗಾರ ಬಿ.ಆರ್ ಪಾಟೀಲ್ ರಾಜೀನಾಮೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರ ರಾಜೀನಾಮೆ ವಿಚಾರ ಗೊತ್ತಿಲ್ಲ. ಸಿಎಂ ಮತ್ತು ಅವರಿಗೆ ಬಿಟ್ಟ ವಿಚಾರ ಅದು. ಸಿಎಂ ಅವರು ಪಾಟೀಲ್ ಅವರ ಜೊತೆ ಮಾತಾಡ್ತಾರೆ. ಸಿಎಂ ಅವರು ಏನು ಹೇಳುತ್ತಾರೆ ನೋಡೋಣ ಎಂದರು.
Advertisement
ಗ್ಯಾರಂಟಿಗಳಿಂದ ಅನುದಾನ ಸಿಗುತ್ತಿಲ್ಲ ಎಂಬ ಬಿ.ಆರ್.ಪಾಟೀಲ್ ಆರೋಪದ ಬಗ್ಗೆ ನನಗೆ ಗೊತ್ತಿಲ್ಲ. ಸಿಎಲ್‌ಪಿ ಸಭೆ ಆದ ಮೇಲೆ ಸಿಎಂ ಅವರು ಎಲ್ಲಾ ಶಾಸಕರಿಗೆ 10 ಕೋಟಿ ರೂ. ಅನುದಾನ ರಿಲೀಸ್ ಮಾಡಿದ್ದರು. ಅದಾದ ಬಳಿಕ ಅನುದಾನದ ವಿಚಾರವನ್ನು ಯಾರು ಮಾತಾಡಿರಲಿಲ್ಲ. ಈಗ ಬಿ.ಆರ್ ಪಾಟೀಲ್ ಮಾತನಾಡಿರುವ ಬಗ್ಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು.ಇದನ್ನೂ ಓದಿ: Invest Karnataka 2025 ಜಾಗತಿಕ ಹೂಡಿಕೆದಾರರ ಸಮಾವೇಶ; 10 ಲಕ್ಷ ಕೋಟಿಗೂ ಹೆಚ್ಚು ಬಂಡವಾಳ ನಿರೀಕ್ಷೆ: ಡಿಕೆಶಿ