ಬೆಂಗಳೂರು: ಮುಡಾ (MUDA) ಮಹಾಯುದ್ಧದ ಮಧ್ಯೆ ಸದ್ಯ ಸಿಎಂ ಕುರ್ಚಿಯೇ ರಾಜ್ಯ ರಾಜಕಾರಣದ ಕೇಂದ್ರ ಬಿಂದುವಾಗಿದೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯ (Satish Jarkiholi) ಭೇಟಿ ಪರ್ವ ಹಲವು ಅನುಮಾನಗಳಿಗೆ ಎಡೆಮಾಡಿಕೊಡುತ್ತಿದೆ.
ಪ್ರಭಾವಿ ನಾಯಕ ಸತೀಶ್ ಜಾರಕಿಹೊಳಿ ಹೈಕಮಾಂಡ್ ನಾಯಕರ ಭೇಟಿ ಬೆನ್ನಲ್ಲೇ ರಾಜ್ಯದ ಪ್ರಮುಖರನ್ನು ಭೇಟಿಯಾಗುತ್ತಿದ್ದಾರೆ. ಇವತ್ತು ಮೈಸೂರಿನಲ್ಲಿ (Mysuru) ಸಚಿವ ಮಹದೇವಪ್ಪ, ಶಾಸಕ ಹರೀಶ್‌ಗೌಡ, ರವಿಶಂಕರ್ ಸೇರಿ ಹಲವರನ್ನು ಭೇಟಿ ಮಾಡಿ ಕುತೂಹಲ ಮೂಡಿಸಿದ್ದಾರೆ. ಇದನ್ನೂ ಓದಿ: Jammu Kashmir Election Results| ಉಗ್ರರಿಂದ ಹತ್ಯೆಯಾಗಿದ್ದ ವ್ಯಕ್ತಿಯ ಮಗಳಿಗೆ ಒಲಿದ ಜಯ
Advertisement
Advertisement
ಸಿದ್ದರಾಮಯ್ಯ(Siddaramaiah) ಅವರೇ ನಮ್ಮ ಮುಖ್ಯಮಂತ್ರಿ ಎನ್ನುತ್ತಲೇ, ಅವರು ಐದು ವರ್ಷ ಇರ್ತಾರೋ? ಮೂರು ವರ್ಷ ವರ್ಷ ಇರ್ತಾರೋ ಗೊತ್ತಿಲ್ಲ. ನೀವು ಅದನ್ನ ಹೈಕಮಾಂಡ್ ಜೊತೆಯೇ ಕೇಳಿ ಎಂದು ಹೇಳಿಕೆ ನೀಡಿದ್ದು ಭಾರೀ ಸಂಚಲನಕ್ಕೆ ಕಾರಣವಾಗಿದೆ. ಇದನ್ನೂ ಓದಿ: Jammu Kashmir Results | ಚುನಾವಣೆಯಲ್ಲಿ ಸೋತರೂ ಮತಗಳಿಕೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿ
Advertisement
ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿಗಳು. ಇದರಲ್ಲಿ ಬೇರೆ ಯಾವುದೇ ಪ್ರಶ್ನೆ ಇಲ್ಲ. ನಾನು ಅವರ ಜೊತೆಯಲ್ಲಿ ಸಚಿವನಾಗಿ ಕೆಲಸ ಮಾಡುತ್ತೇನೆ. ಸಿಎಂ ಬದಲಾವಣೆ ಪ್ರಶ್ನೆಯೇ ಉದ್ಭವಿಸಲ್ಲ. ಬೆಂಬಲಿಗರು ಘೋಷಣೆ ಕೂಗೋದು ಸಾಮಾನ್ಯ ಅಂತಾನೂ ಜಾರಕಿಹೊಳಿ ತಿಳಿಸಿದ್ದಾರೆ.
Advertisement
ಇಬ್ಬರು ಕಾಫಿ ಪೇ ಚರ್ಚಾ ಮಾಡಿದ ಮಾತ್ರಕ್ಕೆ ಸಿಎಂ ಬದಲಾಗಲ್ಲ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಮತ್ತೊಂದ್ಕಡೆ, ಸಿದ್ದರಾಮಯ್ಯ ಪರವಾಗಿ ಸಚಿವ ಕೃಷ್ಣಬೈರೇಗೌಡ, ಜಮೀರ್ ಅಹ್ಮದ್ ಸೇರಿ ಹಲವರು ಬ್ಯಾಟ್ ಬೀಸಿದ್ದಾರೆ. ಪರೋಕ್ಷವಾಗಿ ಜಾರಕಿಹೊಳಿಗೆ ಟಕ್ಕರ್ ಕೊಡುವ ಕೆಲಸ ಮಾಡಿದ್ದಾರೆ.