ಕನ್ನಡದ ‘ಐರಾವತ’ ನಟಿ ಊರ್ವಶಿ ರೌಟೇಲಾ (Urvashi Rautela) ಸದಾ ಒಂದಲ್ಲಾ ಒಂದು ವಿಚಾರವಾಗಿ ಟ್ರೋಲ್ (Troll) ಆಗುತ್ತಲೇ ಇರುತ್ತಾರೆ. ಇತ್ತೀಚೆಗೆ ಕಾನ್ಸ್ ಫೆಸ್ಟಿವಲ್‌ನಲ್ಲಿ ದೀಪಿಕಾ ಪಡುಕೋಣೆ (Deepika Padukone) ಸ್ಟೈಲ್ ಅನ್ನು ಕಾಪಿ ಮಾಡಿದ್ದಾರೆ ಊರ್ವಶಿ ಎಂದು ಟ್ರೋಲ್ ಆಗಿದ್ದರು. ಹಾಗಾಗಿ ಟ್ರೋಲ್ ಮಾಡುವವರಿಗೆ ನಟಿ ಈಗ ಖಡಕ್ ಉತ್ತರ ನೀಡಿದ್ದಾರೆ.
ಇತ್ತೀಚಿನ ಸಂದರ್ಶನವೊಂದರಲ್ಲಿ ಟ್ರೋಲ್ ಅನ್ನು ನಟಿ ಎದುರಿಸುತ್ತಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಮೊದಲು ಟ್ರೋಲ್ ಅನ್ನು ನಿಭಾಯಿಸುವುದನ್ನು ಅರಿತಿರಬೇಕು ಎಂದಿದ್ದಾರೆ. ಅಲ್ಲದೇ ನನ್ನ ಬಿಡುವಿಲ್ಲದ ಶೆಡ್ಯೂಲ್‌ನಲ್ಲಿ ಇದರ ಬಗ್ಗೆ ಯೋಚನೆ ಮಾಡಲು ಕೂಡ ಸಮಯ ಇಲ್ಲ ಎಂದಿದ್ದಾರೆ.
ನೀವು ಟ್ರೋಲ್ ಬಗ್ಗೆ ಗಮನ ಕೊಡದೇ ಇದ್ದಾಗ, ಟ್ರೋಲ್ ಆಗುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಈ ಮೂಲಕ ತಾವು ಟ್ರೋಲ್ ಬಗ್ಗೆ ಚಿಂತೆ ಮಾಡಲ್ಲ ಎಂದು ನಟಿ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ:ಬರೋಬ್ಬರಿ 90 ಕೆಜಿಯಿಂದ ಕೆಲವೇ ತಿಂಗಳಲ್ಲಿ 30 ಕೆಜಿ ದೇಹದ ತೂಕ ಇಳಿಸಿಕೊಂಡ ಸೋನಾಕ್ಷಿ
ಊರ್ವಶಿ ರೌಟೇಲಾ ಸದ್ಯ ಬಹುಭಾಷಾ ನಟಿಯಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಕನ್ನಡದ ಜೊತೆ ಪರಭಾಷೆಗಳಲ್ಲಿಯೂ ನಟಿಗೆ ಡಿಮ್ಯಾಂಡ್ ಇದೆ.