ನವದೆಹಲಿ: ಕೆಂಪೇಗೌಡ ಜಯಂತಿ (Kempegowda Jayanti) ಆಹ್ವಾನ ಪತ್ರಿಕೆಯಲ್ಲಿ ಹೆಸರು ಕೈಬಿಟ್ಟ ವಿಚಾರವನ್ನು ನಾನು ಗಂಭೀರವಾಗಿ ಪರಿಗಣಿಸುವುದಿಲ್ಲ. ನಾನು ಯಾವಾಗಲೂ ಸಹ ಯಾವುದೇ ಕಾರ್ಯಕ್ರದಲ್ಲೂ ನನ್ನ ಹೆಸರು ಹಾಕಿಲ್ಲ ಎಂದು ದೂರುವುದಿಲ್ಲ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.
ದೆಹಲಿಯಲ್ಲಿ (New Delhi) ಈ ಬಗ್ಗೆ ಮಾತನಾಡಿದ ಅವರು, ನಾಡಪ್ರಭು ಕೆಂಪೇಗೌಡರು ಯಾರ ಸ್ವತ್ತು ಅಲ್ಲ. ಅವರು ಕನ್ನಡದ ಸ್ವತ್ತು. ನಾಳೆಯ ಸರ್ಕಾರದ ಕಾರ್ಯಕ್ರಮದಲ್ಲಿ ದೇವೇಗೌಡರು, ನನ್ನ ಹೆಸರು ಹಾಕಿಲ್ಲ ಎಂದು ಹೇಳಿದರು ನಾನು ಈ ವಿಚಾರಕ್ಕೆ ಬಹಳ ಮಹತ್ವ ಕೊಡುವುದಿಲ್ಲ. ನಾನು ಯಾವಾಗಲೂ ಸಹ ಯಾವುದೇ ಕಾರ್ಯಕ್ರಮದಲ್ಲೂ ನನ್ನ ಹೆಸರು ಹಾಕಿಲ್ಲ ಎಂದು ಹೇಳುವುದಿಲ್ಲ ಎಂದರು. ಇದನ್ನೂ ಓದಿ: ರೇಣುಕಾಸ್ವಾಮಿ ಕುಟುಂಬಕ್ಕೆ ಧನ ಸಹಾಯ ಮಾಡಿದ ಧ್ರುವ ಸರ್ಜಾ ಫ್ಯಾನ್ಸ್
ಕೆಂಪೇಗೌಡರ ಜಯಂತಿಯನ್ನು ಬೇರೆಬೇರೆ ರೀತಿಯಲ್ಲಿ ಆಚರಣೆ ಮಾಡುತ್ತಾರೆ. ಸರ್ಕಾರ ಒಂದು ರೀತಿಯಲ್ಲಿ ಆಚರಣೆ ಮಾಡಿದರೆ, ದೇವನಹಳ್ಳಿ ಭಾಗದಲ್ಲಿ ಮನೆ ಮನೇಲೂ ಫೋಟೋ ಇಟ್ಟು ಪೂಜೆ ಮಾಡಿ ಆಚರಣೆ ಮಾಡುತ್ತಾರೆ. ಬೆಂಗಳೂರು ನಗರದ ಬಗ್ಗೆ ಇವತ್ತು ವಿಶ್ವದಲ್ಲೇ ಚರ್ಚೆ ಆಗುತ್ತಿದೆ. ಅದಕ್ಕೆ ಕಾರಣರಾದವರು ಕೆಂಪೇಗೌಡರು ಎಂದು ಹೇಳಿದರು. ಇದನ್ನೂ ಓದಿ: ಮೊದಲ ಕೇಸ್‌ನಲ್ಲೇ ಪ್ರಜ್ವಲ್ ರೇವಣ್ಣಗೆ ಶಾಕ್ – ಹೊಳೆನರಸೀಪುರ ಪ್ರಕರಣದ ಜಾಮೀನು ಅರ್ಜಿ ವಜಾ
ಕೆಂಪೇಗೌಡ ಕಟ್ಟಿರುವ ಕೆರೆಗಳನ್ನು ಈಗಿನ ದಿನಗಳಲ್ಲಿ ಸ್ವಾರ್ಥಕ್ಕೆ ಕೆಲವರು ನುಂಗಿದ್ದಾರೆ. ಈಗಲಾದರೂ ಇರುವ ಕೆರೆಗಳನ್ನು ಕಾಪಾಡುವ ಕೆಲಸ ಮಾಡಬೇಕಿದೆ. ಮೇಕೆದಾಟು ಕಟ್ಟಬೇಕು, ಕುಡಿಯೋ ನೀರು ಅಂತೆಲ್ಲ ಹೇಳುತ್ತಾರೆ. ಈಗಲೇ ಕುಡಿಯೋಕೆ ನೀರಿಲ್ಲದೆ ಕಷ್ಟದ ಪರಿಸ್ಥಿತಿ ಇದೆ. ಮುಂದಿನ 15 ವರ್ಷ ಆದಮೇಲೆ ಏನಾಗುತ್ತೋ ಗೊತ್ತಿಲ್ಲ. ಸರ್ಕಾರ ನ್ಯಾಯಯುತವಾಗಿ ಜಯಂತಿ ಆಚರಣೆ ಮಾಡೋದಾದರೆ ಆ ಕೆರೆಗಳನ್ನು ರಕ್ಷಣೆ ಮಾಡುವಂತಹ ಕೆಲಸ ಮಾಡಿ ಮಳೆ ನೀರನ್ನು ಸರಿಯಾಗಿ ಬಳಸಿಕೊಳ್ಳುವತ್ತ ಚಿಂತನೆ ಮಾಡಲಿ. ಇಷ್ಟು ಮಾಡಿದರೆ ನಾನು ಸರ್ಕಾರಕ್ಕೆ ಸಲ್ಯೂಟ್ ಮಾಡುತ್ತೇನೆ ಎಂದರು. ಇದನ್ನೂ ಓದಿ: ಮೋದಿಯವರ ಸುಳ್ಳಾಟ ಬಯಲಿಗೆ ಎಳೆಯಲು ಒಳ್ಳೆಯ ಅವಕಾಶವಿದೆ: ಸಂತೋಷ್ ಲಾಡ್
ನಾನು ಎರಡು ಬಾರಿ ಮುಖ್ಯಮಂತ್ರಿ ಆದಾಗಲೂ ಸಹ ಆ ನಗರಕ್ಕೆ ಕೊಡುಗೆ ಕೊಟ್ಟಿದ್ದೇನೆ. ನಾನು ಕೆಂಪೇಗೌಡರಿಗೆ ಯಾವ ರೀತಿ ಗೌರವ ಸಲ್ಲಿಸಬೇಕು ಅದನ್ನು ಮಾಡುತ್ತೇನೆ. ಇವತ್ತು ನನ್ನ ಹೆಸರು ಹಾಕಿದರೂ ನಾಳೆ ನಾನು ಹೋಗಲು ಸಾಧ್ಯವಿಲ್ಲ. ನಾಳೆ ರಾಷ್ಟ್ರಪತಿಗಳು ಜಂಟಿ ಭಾಷಣ ಮಾಡುತ್ತಾರೆ. ನಾನು ಇಲ್ಲಿ ಇರಬೇಕು, ಅದಕ್ಕೆ ನಾನು ಇಲ್ಲೇ ಗೌರವ ಸಲ್ಲಿಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ನನ್ನ ಹನಿಟ್ರ್ಯಾಪ್ ನಡೆದಿಲ್ಲ: ಶಾಸಕ ಹರೀಶ್ ಗೌಡ ಸ್ಪಷ್ಟನೆ