ಬೆಂಗಳೂರು: ನಾನು ಕಾಂಗ್ರೆಸ್‌ನಲ್ಲಿ (Congress) ಸಚಿವ ಸ್ಥಾನ, ವಿಪಕ್ಷ ಸ್ಥಾನ, ಕೆಪಿಸಿಸಿ (KPCC) ಅಧ್ಯಕ್ಷ ಸ್ಥಾನ ಸೇರಿ ಎಲ್ಲಾ ಅಧಿಕಾರ ಅನುಭವಿಸಿದ್ದೇನೆ. ಮಂತ್ರಿ ಮಾಡೋದು, ಬಿಡೋದು ಸಿಎಂ ಸಿದ್ದರಾಮಯ್ಯಗೆ (CM Siddaramaiah) ಬಿಟ್ಟ ವಿಚಾರ ಎಂದು ಮಾಜಿ ಸಚಿವ ಆರ್.ವಿ ದೇಶಪಾಂಡೆ (RV Deshpande) ತಿಳಿಸಿದರು.ಇದನ್ನೂ ಓದಿ:ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಮಾಡ್ತಿರೋ ಬಿಜೆಪಿಯವ್ರು ರೈತ ವಿರೋಧಿಗಳು: ಡಿಕೆಶಿ
ಸಿಎಂ, ಡಿಸಿಎಂ ದೆಹಲಿ ಪ್ರವಾಸ ಕೈಗೊಂಡ ಹಿನ್ನೆಲೆ ಸಚಿವ ಸಂಪುಟ ಪುನರ್ ರಚನೆ ಆಗುವ ಬಗ್ಗೆ ವಿಧಾನಸೌಧದ ಬಳಿ ಪ್ರತಿಕ್ರಿಯೆ ನೀಡಿದ ಅವರು, ನಾನು ಕರ್ನಾಟಕ (Karnataka) ವಿಧಾನಸಭೆಯಲ್ಲಿ ಅತ್ಯಂತ ಹಿರಿಯ ಸದಸ್ಯ. 1983ರಿಂದ ಶಾಸಕ ಆಗಿದ್ದೇನೆ. ಹಲವಾರು ಬಾರಿ ಸಚಿವ ಆಗಿದ್ದೆ, ವಿಪಕ್ಷ ನಾಯಕ, ಕೆಪಿಸಿಸಿ ಅಧ್ಯಕ್ಷ ಸೇರಿ ಎಲ್ಲಾ ಅಧಿಕಾರ ಅನುಭವಿಸಿದ್ದೇನೆ. ಕ್ಯಾಬಿನೆಟ್ ಪುನರ್ ರಚನೆಗೆ ಸಿಎಂ ಹೋಗಿದ್ದಾರೋ ನನಗೆ ಗೊತ್ತಿಲ್ಲ. ಸಚಿವ ಮಾಡೋದು, ಬಿಡೋದು ಸಿಎಂಗೆ ಬಿಟ್ಟ ವಿಚಾರ ಎಂದು ಹೇಳಿದರು.
ದೆಹಲಿಯಲ್ಲಿ (Delhi) ಕರ್ನಾಟಕ ಭವನ ಉದ್ಘಾಟನೆಗಾಗಿ ಸಿಎಂ ಸಿದ್ದರಾಮಯ್ಯ ಹೋಗಿದ್ದಾರೆ. ನನಗೆ ಸಚಿವ ಸ್ಥಾನ ಕೊಡುವ ಬಗ್ಗೆ ಗೊತ್ತಿಲ್ಲ. ನಾನು ನಿರೀಕ್ಷೆ ಮಾಡಿಲ್ಲ. ನನ್ನ ಆಸೆಯನ್ನು ನಿಮಗೆ ಯಾಕೆ ಹೇಳಬೇಕು? ಎಲ್ಲಾ ಭಗವಂತನ ಕೃಪೆ 8 ಸಿಎಂಗಳ ಜೊತೆ ನಾನು ಕೆಲಸ ಮಾಡಿದ್ದೇನೆ. ಮಂತ್ರಿ ಮಾಡುವುದು ಸಿಎಂ ವಿವೇಚನೆ. ಅವರ ನಿರ್ಧಾರಕ್ಕೆ ನಾವು ಬದ್ಧ ಎಂದು ತಿಳಿಸಿದರು.ಇದನ್ನೂ ಓದಿ:ಅರ್ಥಶಾಸ್ತ್ರದ ಬಗ್ಗೆ ಗೊತ್ತಿರೋರು ಬೆಲೆ ಏರಿಕೆ ವಿರೋಧ ಮಾಡಲ್ಲ: ಆರ್.ವಿ.ದೇಶಪಾಂಡೆ