ನವದೆಹಲಿ: ಇಂದು ದೆಹಲಿಯ ಕೆಂಪುಕೋಟೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಲಾಯಿತು. ಬಳಿಕ ಪ್ರಧಾನಿ ನರೇಂದ್ರ ಮೋದಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸ್ವಾತಂತ್ರ್ಯೋತ್ಸವವನ್ನುದ್ದೇಶಿಸಿ ಮಾತನಾಡಿದರು.
ಇದೇ ವೇಳೆ ಕೇಂದ್ರ ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರು, ಕೇಂದ್ರ ಸರ್ಕಾರ ತನ್ನ ರಾಜಕೀಯ ಪ್ರಚಾರವನ್ನು ಹೆಚ್ಚಿಸಲು ಕಾಂಗ್ರೆಸ್ ನಾಯಕರನ್ನ ಗುರಿಯಾಗಿಸಿದೆ. ನೆಹರು ಅವರನ್ನ ಕಡೆಗಣಿಸಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ರಾವ್ ಪೊಲೀಸರ ವಶಕ್ಕೆ
ಇಲ್ಲಿ ಸತ್ಯವೆಂದರೆ ಸಾವರ್ಕರ್ ಎರಡು ರಾಷ್ಟ್ರದ ಸಿದ್ಧಾಂತಗಳನ್ನು ಹುಟ್ಟುಹಾಕಿದರು. ಮೊಹಮದ್ ಅಲಿ ಜಿನ್ನಾ ಅದನ್ನು ಪೂರ್ಣಗೊಳಿಸಿದರು. ಅಂದು ನಾವು ದೇಶ ವಿಭಜನೆಯನ್ನು ಒಪ್ಪಿಕೊಳ್ಳದೇ ಇದ್ದಿದ್ದರೆ ಭಾರತವು ಹಲವಾರು ಭಾಗಗಳಾಗಿ ಛಿದ್ರವಾಗುತ್ತಿತ್ತು ಎಂದು ಸರ್ದಾರ್ ಪಟೇಲ್ ಅವರ ಹೇಳಿಕೆಯನ್ನು ಸೋನಿಯಾ ಗಾಂಧಿ ಪುನರುಚ್ಚರಿಸಿದ್ದಾರೆ.
ಸ್ವಾತಂತ್ರ‍್ಯ ಹೋರಾಟದ ಸಂದರ್ಭದಲ್ಲಿ ಭಾರತೀಯ ಸೇನೆಗಳು ಮಾಡಿದ ತ್ಯಾಗವನ್ನು ಸಂಕುಚಿತಗೊಳಿಸಲಾಗಿದೆ. ಐತಿಹಾಸಿಕ ಸತ್ಯಗಳನ್ನು ಸುಳ್ಳು ಮಾಡಲು ಗಾಂಧಿ, ನೆಹರು, ಆಜಾದ್ ಚಂದ್ರಶೇಖರ್, ಸರ್ದಾರ್ ವಲ್ಲಬಾಯ್ ಪಟೇಲ್ ಅವರಂತಹ ದಕ್ಷ ನಾಯಕರನ್ನು ಕಡೆಗಣಿಸಿದೆ. ಸರ್ಕಾರದ ಈ ನಡೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: Bigg Boss-ಕಿಚ್ಚ ಸುದೀಪ್ ಅವರನ್ನು ಕ್ಷಮೆ ಕೇಳಿದ ಸೋನು ಶ್ರೀನಿವಾಸ್ ಗೌಡ
76ನೇ ಸ್ವಾತಂತ್ರ‍್ಯ ದಿನಾಚರಣೆಯ ಸಂದರ್ಭದಲ್ಲಿ ದೇಶಕ್ಕೆ ಶುಭ ಹಾರೈಸಿದ ಸೋನಿಯಾ ಗಾಂಧಿ, ಕಳೆದ 75 ವರ್ಷಗಳಲ್ಲಿ, ಹೆಚ್ಚು ಪ್ರತಿಭಾವಂತ ಭಾರತೀಯರು ವಿಜ್ಞಾನ, ಶಿಕ್ಷಣ, ಆರೋಗ್ಯ ಮತ್ತು ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳಲ್ಲಿ ದೇಶವನ್ನು ಪ್ರಗತಿಯ ಹಾದಿಯತ್ತ ಮುನ್ನಡೆಸಿದ್ದಾರೆ. ಭಾರತವೂ ಸಹ ತನ್ನ ವೈವಿಧ್ಯತೆ, ಸಂಸ್ಕೃತಿ ಹಾಗೂ ಭಾಷೆಯ ಗತವೈಭವದ ರಾಷ್ಟ್ರವಾಗಿ ತನ್ನ ತನವನ್ನು ಉಳಿಸಿಕೊಂಡಿದೆ ಎಂದು ಶ್ಲಾಘಿಸಿದರು.
ಇಂದು ದೆಹಲಿಯ ಕೆಂಪುಕೋಟೆಯಲ್ಲಿ ಭ್ರಷ್ಟಾಚಾರ ಸ್ವಜನಪಕ್ಷಪಾತ, ಕುಟುಂಬ ರಾಜಕಾರಣದ ವಿರುದ್ಧ ಸಮರ ಸಾರಿದ ಪ್ರಧಾನಿ ಮೋದಿ ಭಾರತದ ಪ್ರತಿಭೆಗಳನ್ನು ಮರೆಮಾಚಿದ್ದಾರೆ ಎಂದು ಟೀಕಿಸಿದ್ದಾರೆ.
Live Tv