ಮೈಸೂರು: ನರೇಂದ್ರ ಮೋದಿ (Narendra Modi) ಅವರು ಪ್ರಧಾನಿ ಆದ ಕಾರಣವೇ ನನಗೆ ಪದ್ಮಭೂಷಣ (Padma Bhushan) ಪ್ರಶಸ್ತಿ ಬಂತು. ಇಲ್ಲದೆ ಇದ್ದರೆ ಬರುತ್ತಿರಲಿಲ್ಲ ಎಂದು ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ (S. L. Bhyrappa) ಹೇಳಿದರು.
Advertisement
ಮೈಸೂರಿನ ಕುವೆಂಪು ನಗರದಲ್ಲಿರುವ ಎಸ್.ಎಲ್. ಭೈರಪ್ಪ ಅವರ ನಿವಾಸದಲ್ಲಿ ಶಾಸಕ ರಾಮದಾಸ್ ಅವರಿಂದ ಸನ್ಮಾನ ಸ್ವೀಕರಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಇದನ್ನೂ ಓದಿ: ರಾಷ್ಟ್ರಪತಿ ಏನು ಬೇಡ ನಾನು ನಮ್ಮ ಊರಾಗ ಆರಾಮ ರಾಣಿ ಹಂಗೆ ಇದ್ದೀನಿ: ಸುಧಾಮೂರ್ತಿ
Advertisement
Advertisement
ನನ್ನ ಕಾದಂಬರಿಗಳ ಮೂಲ ಭಾರತದ ಸಂಸ್ಕೃತಿ. ಈ ಸಂಸ್ಕೃತಿ ಏಕ ರೂಪದಲ್ಲಿ ಬೆಳೆದಿದೆ. ಗಣರಾಜ್ಯ ಮೊದಲಿಂದಲ್ಲೂ ಇತ್ತು. ಸಂವಿಧಾನದ ಬಹುಭಾಗ ನಮ್ಮ ಮೊದಲಿದಂಲೂ ಇತ್ತು. ಎಷ್ಟೋ ದೇಶದಲ್ಲಿ ಸ್ವಾತಂತ್ರ್ಯ ಪಡೆದಿದ್ದಾರೆ. ಆದರೆ ಅಲ್ಲಿ ಸ್ವಾತಂತ್ರ್ಯ ಉಳಿದುಕೊಂಡಿಲ್ಲ. ನಮ್ಮಲ್ಲಿ ಸಂವಿಧಾನ ಇದೆ. ಈ ದೇಶವನ್ನು ಕಾಪಾಡುತ್ತದೆ ಎಂದರು.
Advertisement
ಗಣರಾಜ್ಯದ ಉತ್ಸವ ಬಹಳ ಮಹತ್ತರವಾದದ್ದು. ಇಲ್ಲೇ ಕೂತಿದ್ದೇನೆ. ಇಲ್ಲೇ ಬರೆದಿದ್ದಾನೆ. ಮೋದಿ ಅವರು ಪ್ರಧಾನಿ ಆದ ಕಾರಣವೇ ನನಗೆ ಈ ಪ್ರಶಸ್ತಿ ಬಂತು. ಇಲ್ಲದೆ ಇದ್ದರೆ ಬರುತ್ತಿರಲಿಲ್ಲ. ಲೇಖಕ ಸತ್ತೇ ಸಾಯುತ್ತಾನೆ. ಆದರೆ ಅವನ ಬರೆದ ಪುಸ್ತಕ ಎಷ್ಟು ದಿನ ಪ್ರಸ್ತುತ ಇರುತ್ತದೋ ಅಲ್ಲಿಯವರೆಗೆ ಲೇಖಕ ಸದಾ ಜೀವಂತ. ನನ್ನ ಕೃತಿಗಳಿಗೆ ಅಂತಹ ಶಕ್ತಿ ಇದ್ದರೆ ನನಗೆ ಸಂತೋಷ ಎಂದು ತಿಳಿಸಿದರು. ಇದನ್ನೂ ಓದಿ: ಎಸ್.ಎಂ. ಕೃಷ್ಣ, ಎಸ್‍ಎಲ್ ಭೈರಪ್ಪ, ಸುಧಾಮೂರ್ತಿ ಸೇರಿ ರಾಜ್ಯದ 8 ಮಂದಿಗೆ ಪದ್ಮ ಪ್ರಶಸ್ತಿ
2023ನೇ ಸಾಲಿನ ಪದ್ಮಶ್ರೀ (Padmashree), ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಕೇಂದ್ರ ಸರ್ಕಾರ ಬುಧವಾರ ಪ್ರಕಟಿಸಿದೆ. ಈ ಬಾರಿ ರಾಜ್ಯದ 8 ಮಂದಿಗೆ ಪದ್ಮ ಪ್ರಶಸ್ತಿ ಲಭಿಸಿದೆ. ಒಬ್ಬರಿಗೆ ಪದ್ಮವಿಭೂಷಣ, ಇಬ್ಬರಿಗೆ ಪದ್ಮಭೂಷಣ, 5 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಸಿಕ್ಕಿದೆ. ಇದನ್ನೂ ಓದಿ: ಮಾದನಾಯಕನಹಳ್ಳಿ ಇನ್ಸ್‌ಪೆಕ್ಟರ್ ಮಂಜುನಾಥ್‌ಗೆ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k