ನರೇಂದ್ರ ಮೋದಿ (Narendra Modi) ಅವರು ಪ್ರಧಾನಿ ಆದ ಕಾರಣವೇ ನನಗೆ ಪದ್ಮಭೂಷಣ (Padma Bhushan) ಪ್ರಶಸ್ತಿ ಬಂದಿದೆ. ಇಲ್ಲದೆ ಇದ್ದರೆ ಈ ಬರುತ್ತಿರಲಿಲ್ಲ ಸಾಹಿತಿ ಎಸ್.ಎಲ್. ಭೈರಪ್ಪ (S. L. Bhyrappa) ಅವರು ಬಹಿರಂಗವಾಗಿಯೇ ಹೇಳಿದ್ದರು.
2023ರಲ್ಲಿ ಭೈರಪ್ಪನವರ ಹೆಸರು ಪದ್ಮಭೂಷಣ ಪ್ರಶಸ್ತಿ ಪಡೆದವರ ಪಟ್ಟಿಯಲ್ಲಿ ಪ್ರಕಟವಾದ ನಂತರ ಮೈಸೂರಿನಲ್ಲಿ ಅಭಿನಂದಿಸಲಾಯಿತು. ಈ ವೇಳೆ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದ ಅವರು ಗಣರಾಜ್ಯದ ಉತ್ಸವ ಬಹಳ ಮಹತ್ತರವಾದದ್ದು. ಇಲ್ಲೇ ಕೂತಿದ್ದೇನೆ, ಇಲ್ಲೇ ಬರೆದಿದ್ದಾನೆ. ಮೋದಿ ಅವರು ಪ್ರಧಾನಿ ಆದ ಕಾರಣದಿಂದ ನನಗೆ ಈ ಪ್ರಶಸ್ತಿ ಬಂದಿದೆ. ಇಲ್ಲದೆ ಇದ್ದರೆ ಬರುತ್ತಿರಲಿಲ್ಲ. ಲೇಖಕ ಸತ್ತೇ ಸಾಯುತ್ತಾನೆ. ಆದರೆ ಅವನು ಬರೆದ ಪುಸ್ತಕ ಎಷ್ಟು ದಿನ ಪ್ರಸ್ತುತ ಇರುತ್ತದೋ ಅಲ್ಲಿಯವರೆಗೆ ಲೇಖಕ ಸದಾ ಜೀವಂತ. ನನ್ನ ಕೃತಿಗಳಿಗೆ ಅಂತಹ ಶಕ್ತಿ ಇದ್ದರೆ ನನಗೆ ಸಂತೋಷ ಎಂದಿದ್ದರು. ಇದನ್ನೂ ಓದಿ: ತಿಂಗಳಿಗೆ 5 ರೂ. ಸಂಬಳಕ್ಕೆ ಸಿನಿಮಾ ಟಾಕೀಸ್‌ನಲ್ಲಿ ಗೇಟ್ ಕೀಪರ್ ಆಗಿದ್ರು ಭೈರಪ್ಪ
ನನ್ನ ಕಾದಂಬರಿಗಳ ಮೂಲ ಭಾರತದ ಸಂಸ್ಕೃತಿ. ಈ ಸಂಸ್ಕೃತಿ ಏಕ ರೂಪದಲ್ಲಿ ಬೆಳೆದಿದೆ. ಗಣರಾಜ್ಯ ಮೊದಲಿಂದಲ್ಲೂ ಇತ್ತು. ಸಂವಿಧಾನದ ಬಹುಭಾಗ ನಮ್ಮ ಮೊದಲಿದಂಲೂ ಇತ್ತು. ಎಷ್ಟೋ ದೇಶ ಸ್ವಾತಂತ್ರ್ಯ ಪಡೆದುಕೊಂಡಿದೆ. ಆದರೆ ಅಲ್ಲಿ ಸ್ವಾತಂತ್ರ್ಯ ಉಳಿದುಕೊಂಡಿಲ್ಲ. ನಮ್ಮಲ್ಲಿ ಸಂವಿಧಾನ ಇದೆ. ಈ ದೇಶವನ್ನು ಕಾಪಾಡುತ್ತದೆ ಎಂದು ಹೇಳಿದ್ದರು. ಇದನ್ನೂ ಓದಿ: ಭೈರಪ್ಪನವರ ಬದುಕು ಕೊನೆಯಿಲ್ಲದ ʻಯಾನʼ – ನಟ ಅನಂತನಾಗ್ ಭಾವುಕ