ರಾಂಚಿ: ಜಾರ್ಖಂಡ್ (Jharkhand) ಮುಖ್ಯಮಂತ್ರಿ ಹೇಮಂತ್ ಸೊರೆನ್ (Hemant Soren) ಸಹೋದರ, ಶಾಸಕ ಬಸಂತ್ ಸೊರೆನ್ (Basant Soren) ಅವರು ನೀಡಿದ ಹೇಳಿಕೆಯೊಂದು ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ.
Advertisement
ಜಾರ್ಖಂಡ್ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದರೂ ನೀವು ಯಾಕೆ ಕಾಣಿಸಿಕೊಳ್ಳುತ್ತಿಲ್ಲ ಎಂದು ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಬಸಂತ್ ನೀಡಿರುವ ಉತ್ತರ ವ್ಯಾಪಕ ಟೀಕೆಗೆ ಗುರಿಯಾಗಿದೆ. ಪತ್ರಕರ್ತನ ಪ್ರಶ್ನೆಗೆ ಬಸಂತ್ ಉತ್ತರ ಹೀಗಿತ್ತು. ನನ್ನ ಒಳಉಡುಪುಗಳು ಖಾಲಿಯಾಗಿದ್ದವು. ಹೀಗಾಗಿ ಒಳ ಉಡುಪುಗಳನ್ನು ಖರೀದಿ ಮಾಡಲೆಂದೇ ದೆಹಲಿಗೆ ಹೋಗಿದ್ದೇನೆ ಎಂದು ತಿಳಿಸಿದ್ದರು. ಈ ವೀಡಿಯೋ ಸದ್ಯ ಸೋಶಿಯಲ್ ಮೀಡಿಯಾ (Social Media) ದಲ್ಲಿ ಭಾರೀ ವೈರಲ್ ಆಗಿದ್ದು, ಟೀಕೆ ವ್ಯಕ್ತವಾಗುತ್ತಿದೆ.
Advertisement
#WATCH | Dumka: “I had run out of undergarments, so I went to Delhi to purchase them. I get them from there,” says JMM MLA and Jharkhand CM Hemant Soren’s brother, Basant Soren when asked about his visit to Delhi amid recent political unrest in the state.
(07.09.2022) pic.twitter.com/GBiNWZaLzr
— ANI (@ANI) September 8, 2022
ದೆಹಲಿ ಪ್ರವಾಸದಿಂದ ಹಿಂದಿರುಗಿದ್ದ ಬಳಿಕ ಶಾಸಕ ಬಸಂತ್ ಸೊರೆನ್ ಇತ್ತೀಚೆಗೆ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತ ಯುವತಿಯರ ಕುಟುಂಬಗಳನ್ನು ಭೇಟಿಯಾಗಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಿರುವಾಗ ಬಸಂತ್ ಈ ಮಾತುಗಳನ್ನಾಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಇದನ್ನೂ ಓದಿ: ಆತ್ಮಹತ್ಯೆ ಮಾಡ್ಕೊಂಡ ರೈತನ ಬಗ್ಗೆ ಹಗುರ, ಅವಾಚ್ಯ ಪದ ಬಳಸಿದ ಕೆ.ಬಿ ಕೋಳಿವಾಡ
Advertisement
Advertisement
ಇದೇ ವೇಳೆ ಜಾರ್ಖಂಡ್ ನಲ್ಲಿ ಉಂಟಾಗಿದ್ದ ರಾಜಕೀಯ ಅಶಾಂತಿಯ ಬಗ್ಗೆ ಸಹ ಸುದ್ದಿಗಾರರು ಅವರನ್ನು ಪ್ರಶ್ನಿಸಿದರು. ಆಗ ಬಸಂತ್, ರಾಜಕೀಯ ಅಶಾಂತಿ ಉಂಟಾಗಿದ್ದು ಹೌದು. ಆದರೆ ಇದೀಗ ಎಲ್ಲ ಶಾಂತಿಗೊಂಡಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೋಟ್ಯಧಿಪತಿಯಾಗಿದ್ರೂ ಬಿಪಿಎಲ್ ಕಾರ್ಡ್ – ಜೆಡಿಎಸ್ ನಾಯಕನ ನಗರ ಸಭೆ ಸದಸ್ಯತ್ವ ರದ್ದು
ಇತ್ತೀಚೆಗೆ ಜಾರ್ಖಂಡ್‍ನಲ್ಲಿ ನಡೆದ ಭಾರೀ ರಾಜಕೀಯ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತು ಮಾಡಿದ್ದಾರೆ. 81 ಶಾಸಕರ ಪೈಕಿ ವಿಧಾನಸಭೆಯಲ್ಲಿ 48 ಶಾಸಕರು ಮುಖ್ಯಮಂತ್ರಿ ಪರ ಮತ ಚಲಾಯಿಸಿದ್ದಾರೆ. ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (AOO) ನೇತೃತ್ವದ ಒಕ್ಕೂಟವು ಸರ್ಕಾರವನ್ನು ಬೀಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂಬ ಆರೋಪದ ನಡುವೆ ಈ ವಿಶ್ವಾಸಮತ ಯಾಚನೆ ನಡೆದಿತ್ತು.