ರಜನಿಕಾಂತ್ ಸೇರಿದಂತೆ ಸಾಕಷ್ಟು ಸ್ಟಾರ್ ನಟರ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿರುವ ನಿರ್ದೇಶಕ ಕೆ.ಎಸ್ ರವಿಕುಮಾರ್ ಕುಮಾರ್, ಇದೀಗ ಯಶ್ ಸಿನಿಮಾ ಕುರಿತಂತೆ ಮಾತನಾಡಿದ್ದಾರೆ. ಯಶ್ ಗೆ ಒಪ್ಪುವಂಥ ಕಥೆಯು ನನ್ನ ಬಳಿ ಇದ್ದು, ಅವರು ಒಪ್ಪಿದೆ ಅವರಿಗಾಗಿ ಸಿನಿಮಾ ಮಾಡುವುದಾಗಿ ಅವರು ಹೇಳಿದ್ದಾರೆ. ಈ ವಿಷಯ ಯಶ್ ಕಿವಿಗೆ ಬಿದ್ದು, ರವಿಕುಮಾರ್ (KS Ravikumar) ಮತ್ತು ಯಶ್ ಮೀಟ್ ಮಾಡ್ತಾರಾ ಕಾದು ನೋಡಬೇಕು.
ಯಶ್ ಸದ್ಯ ಟಾಕ್ಸಿಕ್ (Toxic) ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾ ಕುರಿತಂತೆ ದಿನಕ್ಕೊಂದು ಸುದ್ದಿ ಬರುತ್ತಿವೆ. ಟಾಕ್ಸಿಕ್ ಸಿನಿಮಾಗೆ ಮತ್ತೋರ್ವ ಸ್ಟಾರ್ ನಟಿ ಎಂಟ್ರಿ ಆಗಲಿದೆ ಎನ್ನುವ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ. ಲೇಡಿ ಸೂಪರ್ ಸ್ಟಾರ್ ಎಂದೇ ಖ್ಯಾತರಾಗಿರುವ ನಯನತಾರಾ (Nayanthara) ಅವರು ಎರಡನೇ ಬಾರಿ ಕನ್ನಡ ಸಿನಿಮಾ ರಂಗಕ್ಕೆ ಬರಲಿದ್ದಾರೆ. ಈ ಹಿಂದೆ ಅವರು ಉಪೇಂದ್ರ ನಟನೆಯ ಚಿತ್ರದಲ್ಲಿ ನಟಿಸಿದ್ದರು. ಇದೀಗ ಟಾಕ್ಸಿಕ್ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಲಿದ್ದಾರೆ ಎನ್ನಲಾಗುತ್ತಿದೆ.
ರಾಕಿಂಗ್ ಸ್ಟಾರ್ ಯಶ್ (Yash) ನಟನೆಯ ‘ಟಾಕ್ಸಿಕ್’ (Toxic) ಸಿನಿಮಾದಲ್ಲಿ ಬಾಲಿವುಡ್ ನಟಿ ಕರೀನಾ ಕಪೂರ್ (Kareena Kapoor) ನಟಿಸಲಿದ್ದಾರೆ ಎಂದು ಸುದ್ದಿ ಆಗಿತ್ತು. ಯಶ್ ಈ ಸಿನಿಮಾದ ನಾಯಕ, ಗೀತಾ ಮೋಹನ್ ದಾಸ್ ನಿರ್ದೇಶಕಿ, ಯಶ್ ಮತ್ತು ಕೆವಿಎನ್ ಪ್ರೊಡಕ್ಷನ್ ನಿರ್ಮಾಪಕರು ಎನ್ನುವ ವಿಷಯದ ಹೊರತಾಗಿ ಮತ್ತೊಂದು ಮಾಹಿತಿಯನ್ನೂ ಚಿತ್ರತಂಡ ಹಂಚಿಕೊಂಡಿರಲಿಲ್ಲ. ಆದರೂ, ಹಲವು ವಿಷಯಗಳು ಹರಿದಾಡುತ್ತಲೇ ಇದ್ದವು.
ಬಾಲಿವುಡ್ ನ ಬಹುಬೇಡಿಕೆ ನಟಿ ಈ ಸಿನಿಮಾದ ನಾಯಕಿಯಾಗಲಿದ್ದಾರೆ ಎನ್ನುವುದರ ಜೊತೆಗೆ ಕರೀನಾ ಕಪೂರ್ ಪ್ರಮುಖ ಪಾತ್ರ ಮಾಡಲಿದ್ದಾರೆ ಎಂದು ಬಿಟೌನ್ ಮಾತನಾಡಿಕೊಂಡಿತ್ತು. ಇದ್ಯಾವುದೋ ಅಧಿಕೃತ ಮಾಹಿತಿ ಆಗಿರಲಿಲ್ಲ. ಆದರೂ, ಸುದ್ದಿಯಂತೂ ಭರ್ಜರಿ ಸೇಲ್ ಆಗಿತ್ತು. ಈಗ ಕರೀನಾ ಸಿನಿಮಾದಲ್ಲಿ ಇರಲ್ಲ ಎನ್ನುವ ಮತ್ತೊಂದು ಸುದ್ದಿ ಇದೆ. ಯಶ್ ಅವರ ಸಹೋದರಿಯಾಗಿ ಈ ಸಿನಿಮಾದಲ್ಲಿ ಕರೀನಾ ನಟಿಸಬೇಕಿತ್ತು. ಆದರೆ, ಡೇಟ್ ಹೊಂದಾಣಿಕೆಯ ಕಾರಣದಿಂದಾಗಿ ಅವರು ಚಿತ್ರದಿಂದ ಹಿಂದೆ ಸರಿದಿದ್ದಾರೆ ಎಂದು ಹೇಳಲಾಗುತ್ತಿದೆ. ಒಡಹುಟ್ಟಿದವರ ಕಥೆಯನ್ನು ಇದು ಒಳಗೊಂಡಿದ್ದರಿಂದ ಯಶ್ ಅವರ ಸರಿಸಮಾನಾಗಿ ಡೇಟ್ ಬೇಕಿತ್ತಂತೆ. ಆದರೆ, ಅಷ್ಟೊಂದು ಸಮಯ ಕರೀನಾ ಬಳಿ ಇಲ್ಲವಂತೆ.