ಹಾವೇರಿ: ಮುಖ್ಯಮಂತ್ರಿ ಆಗಬೇಕು ಅನ್ನೋ ಆಸೆ ಎಲ್ಲರಿಗೂ ಇದೆ. ಒಕ್ಕಲಿಗರ ಮತಗಳನ್ನು ಸೆಳೆಯಲು ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನನಗೂ ಅವಕಾಶವಿದೆ. ಒಕ್ಕಲಿಗರೆಲ್ಲ ಕಾಂಗ್ರೆಸ್ ಗೆ ಬನ್ನಿ ಅನ್ನೋ ಕರೆ ಕೊಟ್ಟಿದ್ದಾರೆ. ಡಿಕೆಶಿಯವರ ಮೂಲ ಉದ್ದೇಶ ಜೆಡಿಎಸ್ ಅನ್ನು ಬಿಟ್ಟು ಒಕ್ಕಲಿಗರೆಲ್ಲ ಕಾಂಗ್ರೆಸ್ ಬನ್ನಿ ಅನ್ನೋದು. ಮುಖ್ಯಮಂತ್ರಿ ಆಗಬೇಕು ಅನ್ನೋದು ಎಲ್ಲರಿಗೂ ಆಸೆ ಇರುತ್ತೆ ಎಂದು ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಹೇಳಿದ್ದಾರೆ.
Advertisement
ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ನಿವಾಸದಲ್ಲಿ ಮಾತನಾಡಿದ ಅವರು, ಸಿಎಂ ಆಗಬೇಕು ಅನ್ನೋದು ಶಿವಕುಮಾರ್, ಸಿದ್ದರಾಮಯ್ಯ, ಪರಮೇಶ್ವರ್‍ಗೆ ಆಸೆ ಇದ್ದರೆ ತಪ್ಪಿಲ್ಲ. ಆಗಬೇಕು ಅಂತಿದೆ ಪಕ್ಷ ಅಧಿಕಾರಕ್ಕೆ ಬರಬೇಕು, ಬಹುಮತ ಬರಬೇಕು. ಒಕ್ಕಲಿಗರ ಮತಗಳನ್ನು ಜೆಡಿಎಸ್ ನಿಂದ ಕಸಿದುಕೊಳ್ಳಬೇಕು. ಒಕ್ಕಲಿಗರ ಮತಗಳೆಲ್ಲ ಕಾಂಗ್ರೆಸ್ ಬರಬೇಕು ಅಂದಿದ್ದಾರೆ. ಎಲ್ಲರೂ ಕೂಡಿ ಪ್ರಯತ್ನ ಮಾಡೋಣ ಎಂದರು.
Advertisement
Advertisement
ಶಿಕಾರಿಪುರವನ್ನು ಬಿಎಸ್ ವೈ ಮಗನಿಗೆ ಬಿಟ್ಟುಕೊಟ್ಟ ವಿಚಾರ, ಮೊದಲು ಎಂಎಲ್‍ಸಿ ಚುನಾವಣೆಗೆ ಟಿಕೆಟ್ ಕೊಡಬೇಕು ಅಂತಾ ಹೈಕಮಾಂಡ್ ಗೆ ಶಿಫಾರಸ್ಸು ಮಾಡಿದ್ದರು. ಹೈಕಮಾಂಡ್ ಅದನ್ನು ತಿರಸ್ಕಾರ ಮಾಡಿತ್ತು. ಇವತ್ತು ಯಡಿಯೂರಪ್ಪನವರು ಹೇಳಿದ್ದಾರೆ. ಅವರ ಅಭಿಪ್ರಾಯಕ್ಕೆ ಅವರ ಹೈಕಮಾಂಡ್ ಸಹಮತ ವ್ಯಕ್ತಪಡಿಸಿದರೆ ಶಿಕಾರಿಪುರ ನಿಲ್ಲುತ್ತಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮೂರು ತಲೆಮಾರಿಗಾಗುವಷ್ಟು ಲೂಟಿ ಮಾಡಿದ್ದೇವೆಂದಿರೋ ರಮೇಶ್ ಕುಮಾರ್ ಸತ್ಯವಂತರು :ಜೋಶಿ ಲೇವಡಿ
Advertisement
ರಾಣೆಬೆನ್ನೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾದ ವಾತಾವರಣವಿದೆ. ನಾನು ರಾಜ್ಯದಲ್ಲಿನ ಚುನಾವಣೆಗೆ ನಿಲ್ಲೋದಿಲ್ಲ.ನನ್ನ ಮಗ ಪ್ರಕಾಶ್ ಕೋಳಿವಾಡಗೆ ಟಿಕೆಟ್ ಕೊಡುವಂತೆ ಹೈಕಮಾಂಡ್ ಗೆ ಕೇಳಿದ್ದೇನೆ. ಅವರು ಕೊಟ್ಟರೆ ಖಂಡಿತ ಪ್ರಕಾಶ್ ಆರಿಸಿ ಬರುತ್ತಾರೆ. ಹೈಕಮಾಂಡ್ ನವರೇ ನನಗೆ ಮಗನನ್ನು ನಿಲ್ಲಿಸುವಂತೆ ಹೇಳಿದ್ದಾರೆ. ಹೈಕಮಾಂಡ್ ನವರು ಎಲ್ಲರೂ ಹೇಳಿದ್ದರಿಂದ ನಾನು ಒಪ್ಪಿಕೊಂಡಿದ್ದೇನೆ. ರಾಜ್ಯದ ಚುನಾವಣಾ ಕ್ಷೇತ್ರದಿಂದ ಹಿಂದಕ್ಕೆ ಸರಿದು ನನ್ನ ಮಗನನ್ನು ಮುಂದಕ್ಕೆ ತರಲು ಪ್ರಯತ್ನ ಮಾಡುತ್ತಿದ್ದೇನೆ. ಹೈಕಮಾಂಡ್ ನಿಂದಲೆ ಆ ಪ್ರಪೋಸಲ್ ಬಂದಿದೆ ಎಂದು ಹೇಳಿದರು.
ಲೋಕಸಭೆ, ರಾಜ್ಯಸಭೆ ಯಾವುದೇ ಬಂದರೂ ಪಕ್ಷ ಹೇಳಿದರೆ ನಾನು ನಿಲ್ಲುತ್ತೇನೆ. ಪಕ್ಷ ಟಿಕೆಟ್ ಕೊಟ್ಟರೆ ನಾನು ನಿಲ್ಲುತ್ತೇನೆ.ಅವಕಾಶ ಬಂದರೆ ನಾನೂ ಕೇಳುತ್ತೇನೆ, ಅವರು ಕೊಟ್ಟರೆ ನಿಲ್ಲುತ್ತೇನೆ. ರಾಜ್ಯದ ರಾಜಕಾರಣದಿಂದ ನಾನು ನಿವೃತ್ತಿ ಆಗಿದ್ದೇನೆ.ಹೈಕಮಾಂಡ್ ನವರು ಕೊಟ್ಟರೆ ಮುಂದಿನ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸ್ಟೀಕರ್ ಕೆ.ಬಿ.ಕೋಳಿವಾಡ ಹೇಳಿದ್ದಾರೆ.