ಬೆಳಗಾವಿ: ಕೇದಾರದಿಂದ ಕರ್ನಾಟಕದ ಬೆಳಗಾವಿವರೆಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಆಶೀರ್ವಾದ ಮಾಡಲು ಬಂದಿದ್ದೇನೆ ಎಂದು ಕೇದಾರ ಪೀಠದ ಜಗದ್ಗುರು ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿಕೆ ಕೊಟ್ಟಿದ್ದಾರೆ.
Advertisement
ಕೇದಾರ ಪೀಠದ ಜಗದ್ಗುರು ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಕೇದಾರದಿಂದ ಕರ್ನಾಟಕದ ಬೆಳಗಾವಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಮನೆಗೆ ಬಂದಿದ್ದೇವೆ. ಕೇದಾರನಾಥ ಕಳಿಸಿಕೊಟ್ಟಿದ್ದಕ್ಕೆ ನಾವು ಬಂದಿದ್ದೇವೆ. ನಾಲ್ಕು ತಿಂಗಳ ಕಾಲ ನಾವು ಕೇದಾರನಾಥದಲ್ಲೇ ಇರಬೇಕಾಗುತ್ತದೆ. ಆನಂತರ ಆರು ತಿಂಗಳು ನಿಯೋಜಿತ ಕಾರ್ಯಕ್ರಮಗಳಾಗುತ್ತವೆ ಎಂದು ತಿಳಿಸಿದ್ದಾರೆ.
Advertisement
Advertisement
ಕೇದಾರನಾಥ ನಮಗೆ ಇಲ್ಲಿ ಕಳಿಸಿದ್ದಾನೆ ಇದೇ ಮುಖ್ಯ ಉದ್ದೇಶ. ರಾಜಕೀಯ ಭವಿಷ್ಯ ಹೇಳುವವರು ರಾಜಗುರುಗಳು. ಧರ್ಮದ ಭವಿಷ್ಯ ಹೇಳುವವರು ನಾವು ಧರ್ಮಗುರುಗಳು. ರಾಜ್ಯದಲ್ಲಿ ಮಾತನಾಡೋದು ಆ ರಾಜ್ಯಗಳಿಗೆ ಬಿಟ್ಟಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಂತ್ಯದವರೆಗೆ ಒಳ್ಳೆಯದಾಗಲಿ ಎಂದು ಆಶೀರ್ವಾದ ಮಾಡ್ತೇವೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಲಕ್ಕಿಡಿಪ್‍ನಲ್ಲಿ ಗೆದ್ದರೂ, ಸೋತರೂ ಅಳುತ್ತೇನೆ ನಾನ್ಯಾರು ಬಲ್ಲಿರಾ!? – ನಾನೇ ಲಕ್ಕಿಡಿಪ್ ಸಿಎಂ ಹೆಚ್‍ಡಿಕೆ: ಬಿಜೆಪಿ
Advertisement
ರಾಯಚೂರು ಜಿಲ್ಲೆಯಲ್ಲಿ ಮಹಾಪೂಜೆ ಮುಗಿಸಿ, ತುಮಕೂರು, ಚಿತ್ರದುರ್ಗದಲ್ಲಿ ಕಾರ್ಯಕ್ರಮವಿದೆ. ಬೆಳಗಾವಿ ಜಿಲ್ಲೆಯ ಮುತ್ನಾಳ ಮಠಕ್ಕೆ ಬರಬೇಕು ಎಂದು ಹಠ ಹಿಡಿದಿದ್ರು. ಭಕ್ತರ ಮನೆಗೆ ಕರೆದುಕೊಂಡು ಹೋಗಬೇಕು ಎಂದು ಹಠ ಹಿಡಿದಿದ್ರು. ಲಕ್ಷ್ಮೀ ಹೆಬ್ಬಾಳ್ಕರ್ ಭಕ್ತಿಯಿಂದ ತಮ್ಮನ್ನು ತಾವು ಅರ್ಪಣೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.