ರಾಮನಗರ: ರಾಮನಗರ (Ramanagara) ಜಿಲ್ಲೆಗೆ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇವೆ. ಕನಕಪುರ ಕ್ಷೇತ್ರದಲ್ಲಿ ಸೋಲಾರ್ ಪ್ಲಾಂಟ್ ತಂದಿದ್ದೇನೆ. ಅದರ ಪಕ್ಕದಲ್ಲಿ ವಿದ್ಯಾರ್ಥಿ ವಸತಿ ನಿಲಯಕ್ಕೆ ಜಮೀನು ನೀಡಿದ್ದೇನೆ. ನಮ್ಮ ಅಜ್ಜಿ ಹೆಸರಿನಲ್ಲಿ ಖರೀದಿ ಮಾಡಿದ್ದ ಜಮೀನನ್ನು ಶಾಲೆಗೆ ಬರೆದುಕೊಟ್ಟಿದ್ದೇನೆ. ಕುಮಾರಸ್ವಾಮಿ (HD Kumaraswamy) ಅಥವಾ ಸಂಸದ ಮಂಜುನಾಥ್ (Dr Manjunath) ಅವರು ರಾಜ್ಯದಲ್ಲಿ ಯಾರಿಗಾದರೂ ಒಂದು ಎಕರೆ ದಾನ ಮಾಡಿದ್ದಾರಾ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಪ್ರಶ್ನಿಸಿದರು.
ಕನಕಪುರ ತಾಲೂಕಿನ ದೊಡ್ಡಾಲಹಳ್ಳಿ ಗ್ರಾಮದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಸಿ ಮಾತನಾಡಿದ ಅವರು, ನೀವು ನನ್ನನ್ನು ಬೆಳೆಸಿದ್ದೀರಿ. ಜಿಲ್ಲಾ ಪಂಚಾಯಿತಿ ಸದಸ್ಯ, ಶಾಸಕ, ಮಂತ್ರಿ ಹಾಗೂ ಉಪಮುಖ್ಯಮಂತ್ರಿ ಮಾಡಿದ್ದೀರಿ. ಸುರೇಶ್ ಅವರನ್ನು ಸಂಸದರನ್ನಾಗಿ ಮಾಡಿದ್ದೀರಿ ಎಂಬ ಕಾರಣಕ್ಕೆ ನಿಮ್ಮ ಋಣ ತೀರಿಸಲು ನಾನು ಈ ಕೆಲಸ ಮಾಡಿದ್ದೇನೆ. ನಮ್ಮ ಜೊತೆಯಲ್ಲಿದ್ದುಕೊಂಡು ತಟ್ಟೆಮರೆ ಏಟು ಕೊಟ್ಟವರಿಗೆ ನೀವು ಈ ವಿಚಾರ ತಿಳಿಸಿ. ಮುಂದೆ ನೀವು ಆತ್ಮಸಾಕ್ಷಿಗೆ ಮತ ಹಾಕುವಂತೆ ಹೇಳಬೇಕು ಎಂದರು. ಇದನ್ನೂ ಓದಿ: ಹಸುಗಳ ಮೇಲೆ ಪೈಶಾಚಿಕ ಕೃತ್ಯ ನಡೆಸಿದವರನ್ನು ಎನ್‍ಕೌಂಟರ್ ಮಾಡಿ ಬಿಸಾಕಿ: ರೇಣುಕಾಚಾರ್ಯ
Advertisement
Advertisement
ಸುರೇಶ್ ಅವರು ಸಂಸದರಾಗಿದ್ದಾಗ ಅವರ ಕ್ಷೇತ್ರದಲ್ಲಿ ಹೆಚ್ಚು ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ. ನಮ್ಮ ತಾಲೂಕಿನಲ್ಲಿ 120ಕ್ಕೂ ಹೆಚ್ಚು ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ. ಈ ಭಾಗದ ಜನರಲ್ಲಿ ಹೆಚ್ಚು ಕ್ಯಾನ್ಸರ್ ರೋಗ ಪತ್ತೆಯಾಗುತ್ತಿದೆ ಎಂದು ವೈದ್ಯರು ಹೇಳಿದಾಗ ಇದನ್ನು ತಪ್ಪಿಸಲು ಈ ಕುಡಿಯುವ ನೀರಿನ ಘಟಕ ಸ್ಥಾಪಿಸಿದೆವು. ನಾನು ಇಂಧನ ಸಚಿವನಾಗಿದ್ದಾಗ, ಸುರೇಶ್ ಸಂಸದರಾಗಿದ್ದಾಗ ಈ ಭಾಗದ ಪ್ರತಿ ಇಬ್ಬರು ರೈತರಿಗೆ ಪ್ರತ್ಯೇಕವಾಗಿ ಟ್ರಾನ್ಸ್ಫಾರ್ಮ್ ಅಳವಡಿಸಿದ್ದೆವು. ಈ ಲೋಕಸಭಾ ಕ್ಷೇತ್ರದಲ್ಲಿ ಮಾತ್ರ ಇಂತಹ ಯೋಜನೆ ಮಾಡಲಾಗಿದ್ದು, ರಾಜ್ಯದ ಬೇರೆ ಯಾವುದೇ ಜಿಲ್ಲೆಯಲ್ಲಿ ಹಾಗೂ ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ದೇಶದಲ್ಲಿ ಎಲ್ಲಿಯೂ ಇಂತಹ ಯೋಜನೆ ಮಾಡಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: IPL 2025: ಮಾರ್ಚ್ 23 ರಿಂದ ಐಪಿಎಲ್ ಆರಂಭ: ಬಿಸಿಸಿಐ ಉಪಾಧ್ಯಕ್ಷ ಘೋಷಣೆ
Advertisement
15-20 ವರ್ಷಗಳ ಹಿಂದೆ ಈ ಭಾಗದಲ್ಲಿ ಜಮೀನಿನ ಬೆಲೆ ಎಷ್ಟಿತ್ತು? ಈಗ ಎಷ್ಟು ಆಗಿದೆ? ನಿಮಗೆ ನೇರವಾಗಿ ಹಣ ನೀಡಲಾಗದಿದ್ದರೂ ನಿಮ್ಮ ಆಸ್ತಿ ಮೌಲ್ಯವನ್ನು ಹೆಚ್ಚಿಸಿ ನಿಮಗೆ ನೆರವಾಗಿದ್ದೇನೆ. ಆ ಮೂಲಕ ನಿಮ್ಮ ಬದುಕಿನಲ್ಲಿ ಬದಲಾವಣೆ ತಂದಿದ್ದೇನೆ. ಇನ್ನು ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣಕ್ಕೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ದೆಹಲಿಗೆ ಕಳುಹಿಸಲಾಗಿದೆ. ಕೇಂದ್ರ ಗೃಹ ಸಚಿವಾಲಯದಿಂದ ಇಂಟೆಲಿಜೆನ್ಸ್ನವರು ವರದಿ ಕಳುಹಿಸುವುದು ಬಾಕಿ ಇದೆ. ಈ ವಿಚಾರವಾಗಿ ಕೇಂದ್ರ ಸಚಿವರು ಹಾಗೂ ಪ್ರಧಾನಮಂತ್ರಿಗಳಿಗೆ ಒಂದೆರಡು ದಿನಗಳಲ್ಲಿ ಪತ್ರ ಬರೆಯಲಿದ್ದೇನೆ. ನಂತರ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಅಧಿಕೃತವಾಗಿ ಘೋಷಣೆಯಾಗಲಿದೆ ಎಂದು ಹೇಳಿದರು. ಇದನ್ನೂ ಓದಿ: ಮೂರು ಹೊಸ ಹಸುಗಳನ್ನು ನಾನೇ ಕೊಡಿಸುತ್ತೇನೆ: ಜಮೀರ್
Advertisement
ರಾಮನಗರವನ್ನು ಜಿಲ್ಲಾ ಕೇಂದ್ರವಾಗಿಯೇ ಉಳಿಯಲಿದೆ. ಹೀಗಾಗಿ ನೀವು ನಿಮ್ಮ ಆಸ್ತಿ ಮಾರಿಕೊಳ್ಳಬೇಡಿ. ನಾವು ಬೆಂಗಳೂರಿನವರು, ನಮ್ಮ ಈ ಗುರುತನ್ನು ನಾವು ಯಾಕೆ ಬಿಟ್ಟುಕೊಡಬೇಕು? ಭವಿಷ್ಯದಲ್ಲಿ ನಿಮ್ಮ ಜಮೀನಿನ ಬೆಲೆ ಏನಾಗುತ್ತದೆ ಎಂದು ನೀವು ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಈ ವಿಚಾರವಾಗಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಬಹಳ ಟೀಕೆ ಟಿಪ್ಪಣಿ ಮಾಡುತ್ತಿದ್ದಾರೆ. ಹಾಗಿದ್ದರೆ ಇವರುಗಳು ತಮ್ಮ ಊರು ಬಿಟ್ಟು ಇಲ್ಲಿಗೆ ಬಂದು ಯಾಕೆ ನೂರಾರು ಎಕರೆ ಜಮೀನು ಖರೀದಿ ಮಾಡಿದ್ದಾರೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಕನ್ನಡತಿ, ಮದ್ದೂರಿನ ಸೊಸೆಗೆ ಮಿಸೆಸ್ ಇಂಡಿಯಾ ಕಿರೀಟ