– ಚಿರಂಜೀವಿ ಅವರ ಜೊತೆ ಡ್ಯಾನ್ಸ್ ಮಾಡೋಕೆ ಇಷ್ಟ ಎಂದ ಶಾಸಕ
ಚಿಕ್ಕಬಳ್ಳಾಪುರ: ಟಾಲಿವುಡ್‌ನಲ್ಲಿ ಮೆಗಾಸ್ಟಾರ್ ಚಿರಂಜೀವಿ (Chiranjeevi) ಜೊತೆ ನಟನೆಗೆ ತನಗೆ ಅವಕಾಶ ಸಿಕ್ಕಿರುವುದಾಗಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಹೇಳಿದರು.
ಚಿಕ್ಕಬಳ್ಳಾಪುರ ನಗರದಲ್ಲಿ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ನಾನು ಮೆಗಾಸ್ಟಾರ್ ಚಿರಂಜೀವಿಯವರ ದೊಡ್ಡ ಫ್ಯಾನ್. ಚಿರಂಜೀವಿ ಅವರಿಗೆ ನನ್ನ ಮೇಲೆ ವಿಶೇಷವಾದ ಪ್ರೀತಿ ಇದೆ. ನಾನು ಚಿರಂಜೀವಿ ಅವರ ಸಮುದಾಯದ ಹುಡುಗ, ಶಾಸಕನಾದಾಗಲೂ ಮನೆಗೆ ಕರೆಸಿದ್ದರು ಎಂದು ತಿಳಿಸಿದರು. ಇದನ್ನೂ ಓದಿ: ಕಿತ್ತೂರು ಪಟ್ಟಣ ಪಂಚಾಯಿತಿ ಬಿಜೆಪಿ ಸದಸ್ಯನ ಕಿಡ್ನ್ಯಾಪ್ – ಕಾಂಗ್ರೆಸ್ ಶಾಸಕನ ಆಪ್ತರ ವಿರುದ್ಧ ದೂರು
ಪವನ್ ಕಲ್ಯಾಣ್ ಅವರು ಗೆದ್ದಾಗ ನಾನು ಫೋನ್ ಮಾಡಿ ವಿಶ್ ಮಾಡಿದ್ದೆ. ನಟನೆಗೆ ಅವಕಾಶದ ಬಗ್ಗೆ ಚರ್ಚೆ ನಡೆದಿರೋದು ನಿಜ. ಸದ್ಯ ಚಿರಂಜೀವಿ ಅವರು ವಿಶ್ವಾಂಬರ ಚಿತ್ರದಲ್ಲಿ ಈಗ ನಟನೆ ಮಾಡುತ್ತಿದ್ದಾರೆ. ಇದಾದ ನಂತರ ಮುಂದಿನ ಚಿತ್ರದಲ್ಲಿ ಅವಕಾಶದ ಬಗ್ಗೆ ಚರ್ಚೆ ನಡೆದಿದೆ. ಯಾವ ಪಾತ್ರ ಏನು ಎಂಬುದು ಮುಂದಿನ ದಿನಗಳಲ್ಲಿ ಅವರೇ ತಿಳಿಸಲಿದ್ದಾರೆ ಎಂದರು.
ನನಗೆ ಚಿರಂಜೀವಿ ಅವರ ಜೊತೆ ಡ್ಯಾನ್ಸ್ ಮಾಡಬೇಕು ಎಂಬುದು ಆಸೆ. ಒಂದು ಸಣ್ಣ ಸ್ಟೆಪ್ ಹಾಕಲು ಅವಕಾಶ ಸಿಕ್ರೂ ಅದು ನನ್ನ ಸೌಭಾಗ್ಯ. ನಾನು ರಾಜಕಾರಣದಲ್ಲಿ ಕೆಲವರನ್ನ ಡ್ಯಾನ್ಸ್ ಮಾಡಿಸಿದ್ದೀನಿ. ಆದರೆ ಚಿರಂಜೀವಿ ಅವರ ಜೊತೆ ಡ್ಯಾನ್ಸ್ ಮಾಡಿದ್ರೆ ಅದು ನನಗೆ ಖುಷಿ ಅಂತಾ ಪರೋಕ್ಷವಾಗಿ ಸಂಸದ ಸುಧಾಕರ್‌ಗೆ ಟಾಂಗ್ ಕೊಟ್ಟರು. ಇದನ್ನೂ ಓದಿ: ದ್ವೇಷದ ಪೋಸ್ಟ್ – ವಿಜಯೇಂದ್ರ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ