ಪಣಜಿ: ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ (Nana Patekar) ನಿಧನಕ್ಕೆ ಗೋವಾ (Goa) ಸಿಎಂ ಪ್ರಮೋದ್ ಸಾವಂತ್ (Pramod Sawant) ಸಂತಾಪ ಸೂಚಿಸಿದ್ದಾರೆ. ನಾನೊಬ್ಬ ಒಳ್ಳೆಯ ಸ್ನೇಹಿತನನ್ನು ಕಳೆದುಕೊಂಡಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ಪಾಟೇಕರ್ ಅವರೊಂದಿಗಿನ ತಮ್ಮ ಒಡನಾಟವನ್ನು ನೆನಪಿಸಿಕೊಂಡರು. ಅವರು ಗೋವಾಗೆ ಬಂದಾಗಲೆಲ್ಲಾ ತಪ್ಪದೇ ನನಗೆ ಕರೆ ಮಾಡುತ್ತಿದ್ದರು. ಭಾರತೀಯ ಚಿತ್ರರಂಗದ ಶ್ರೇಷ್ಠ ನಟರಲ್ಲಿ ಅವರು ಒಬ್ಬರಾಗಿದ್ದರು. ಅಲ್ಲದೇ ಸಮಾಜ ಸೇವಕರಾಗಿದ್ದರು. ಗೋವಾದೊಂದಿಗೆ ಆಳವಾದ ಸಂಬಂಧ ಹೊಂದಿದ್ದರು. ಅವರ ಅಗಲಿಕೆಯಿಂದ ತೀವ್ರ ದುಃಖವಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ನಿಧನ
ʻನಾನಾ ಪಾಟೇಕರ್ ಫೌಂಡೇಶನ್’ ಮೂಲಕ ಅವರು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಗೋವಾದಲ್ಲಿ ಸಾಕಷ್ಟು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ರಾಜ್ಯದಲ್ಲಿ ತಮ್ಮ ಸಮಾಜ ಸೇವೆಯನ್ನು ವಿಸ್ತರಿಸಲು ಯೋಜಿಸುತ್ತಿದ್ದರು. ಅವರು ನಮ್ಮನ್ನು ಅಗಲಿದ್ದು ದುಃಖಕರ ಸಂಗತಿ ಎಂದು ಅವರು ಹೇಳಿದ್ದಾರೆ.
ಕೇವಲ ಎರಡು ದಿನಗಳ ಹಿಂದಷ್ಟೇ ಪಾಟೇಕರ್ ಅವರು ಯುವ ಕೊಂಕಣಿ ಕಲಾವಿದರೊಂದಿಗೆ ನೃತ್ಯ ಮಾಡುತ್ತಿದ್ದ ವಿಡಿಯೋವನ್ನು ನೋಡಿದ್ದನ್ನು ಅವರು ನೆನಪಿಸಿಕೊಂಡರು. ಇನ್ನೂ, ಈ ದುಃಖದ ಸಮಯದಲ್ಲಿ ನಾನು ಅವರ ಕುಟುಂಬದ ಜೊತೆ ನಿಲ್ಲುತ್ತೇನೆ ಎಂದು ನಟನ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ. ಇದನ್ನೂ ಓದಿ: ವಿಶ್ವನಾಥ್ ‘ನಾನಾ ಪಾಟೇಕರ್’ ಆಗಿದ್ದು ಹೇಗೆ? – ಹೆಸರಿನ ಹಿಂದಿದೆ ಬಾಲ್ಯದ ಅಪರೂಪದ ಕಥೆ

