ಹೈದರಾಬಾದ್: ಈಗಾಗಲೇ ಬಾಬರಿ ಮಸೀದಿಯನ್ನು ಕಳೆದುಕೊಂಡಿದ್ದೇವೆ. ಇನ್ನೊಂದು ಮಸೀದಿಯನ್ನು ಕಳೆದುಕೊಳ್ಳಲು ನಾನು ಬಯಸುವುದಿಲ್ಲ ಎಂದು ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಬೇಸರ ವ್ಯಕ್ತಪಡಿಸಿದ್ದಾರೆ.
ಜ್ಞಾನವಾಪಿ ಮಸೀದಿಯಲ್ಲಿ ಸರ್ವೇ ನಡೆಸುವುದಕ್ಕೆ ಕೋರ್ಟ್ ಅನುಮತಿ ನೀಡಿರುವ ಕುರಿತು ಮಾತನಾಡಿ, ನ್ಯಾಯಾಲಯದ ಆದೇಶವು ಪೂಜಾ ಸ್ಥಳಗಳ ಕಾಯ್ದೆ 1991ರ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮಥುರಾದ ಕೃಷ್ಣ ಜನ್ಮಭೂಮಿ, ಶಾಹಿ ಈದ್ಗಾ ಮಸೀದಿ ವಿವಾದ – 4 ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸಲು ಸೂಚನೆ
Advertisement
Advertisement
ಇದು ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಮತ್ತು ಮಸೀದಿ ಸಮಿತಿಯು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಬಹುದು ಎಂದು ತಿಳಿಸಿದ್ದಾರೆ.
Advertisement
1947, ಆಗಸ್ಟ್ 15ರ ಧಾರ್ಮಿಕ ಸ್ಥಳಗಳ ಸ್ವರೂಪವನ್ನು ಬದಲಾಯಿಸಲು ಪ್ರಯತ್ನಿಸುವ ಯಾವುದೇ ವ್ಯಕ್ತಿ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು 1991ರ ಕಾಯ್ದೆ ಸ್ಪಷ್ಟವಾಗಿ ಹೇಳುತ್ತದೆ. ಈ ಕಾಯ್ದೆಯಡಿ ಯೋಗಿ ಸರ್ಕಾರವು ಈ ಜನರ ವಿರುದ್ಧ ತಕ್ಷಣವೇ ಎಫ್ಐಆರ್ ಅನ್ನು ದಾಖಲಿಸಬೇಕು. ನ್ಯಾಯಾಲಯದಲ್ಲಿ ಅವರು ತಪ್ಪಿತಸ್ಥರೆಂದು ಸಾಬೀತಾದರೆ, ಅವರಿಗೆ 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು ಎಂದು ಓವೈಸಿ ತಿಳಿಸಿದ್ದಾರೆ. ಇದನ್ನೂ ಓದಿ: ನಾಳೆ ನೀವು ಕೋರ್ಟ್ ಚೇಂಬರ್ ಒಳಗೆ ಏನಿದೆ ಎಂದು ಕೇಳುತ್ತೀರಿ: ತಾಜ್ ಮಹಲ್ ಕುರಿತ ಅರ್ಜಿ ತಿರಸ್ಕರಿಸಿದ ಕೋರ್ಟ್
Advertisement
ನ್ಯಾಯಾಲಯದ ಆದೇಶವು, ಪೂಜಾ ಸ್ಥಳಗಳ ಕಾಯ್ದೆ 1991ರ ಸ್ಪಷ್ಟ ಉಲ್ಲಂಘನೆಯಾಗಿದೆ. ಇದು ಬಾಬರಿ ಮಸೀದಿ ಹಕ್ಕು ವಿವಾದದಲ್ಲಿ ನೀಡಲಾದ ಸುಪ್ರೀಂ ಕೋರ್ಟ್ ತೀರ್ಪಿನ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ.
ಆಗಸ್ಟ್ 15 ಮತ್ತು ಜನವರಿ 26 ರಂದು ಎಲ್ಲಾ ಮದರಸಾಗಳು ದೇಶಪ್ರೇಮದ ಬಗ್ಗೆ ಮಾತನಾಡುತ್ತವೆ. ಮದರಸಾಗಳಲ್ಲಿ ದೇಶಪ್ರೇಮ ಕಲಿಸಲಾಗುತ್ತಿದೆ. ನೀವು ಅವರನ್ನು ಅನುಮಾನದಿಂದ ನೋಡುತ್ತೀರಿ, ಅದಕ್ಕಾಗಿಯೇ ನೀವು ಅಂತಹ ಕಾನೂನುಗಳನ್ನು ಮಾಡುತ್ತಿದ್ದೀರಿ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಮೇ 17ರ ಒಳಗಡೆ ಜ್ಞಾನವಾಪಿ ಮಸೀದಿಯ ಸಮೀಕ್ಷೆ ನಡೆಸಿ: ಕೋರ್ಟ್
ಯೋಗಿ ಆದಿತ್ಯನಾಥ್, ಬಿಜೆಪಿಯವರು ನನಗೆ ದೇಶಭಕ್ತಿಯ ಪ್ರಮಾಣಪತ್ರ ನೀಡುವ ಅಗತ್ಯವಿಲ್ಲ. ದೇಶದ ಸ್ವಾತಂತ್ರ್ಯ ಹೋರಾಟ ನಡೆದಾಗ ಸಂಘಪರಿವಾರ ಇರಲಿಲ್ಲ. ಈ ಮದರಸಾಗಳು ಬ್ರಿಟಿಷರ ವಿರುದ್ಧ ಹೋರಾಡಿದ್ದವು ಎಂದು ತಿರುಗೇಟು ನೀಡಿದ್ದಾರೆ.