ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ (Ayodhya Ram Mandir) ಉದ್ಘಾಟನೆಗೆ ನನೆ ಆಹ್ವಾನ ನೀಡಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shiva Kumar) ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮ ಮಂದಿರ ಉದ್ಘಾಟನೆಗೆ ನಮ್ಮನ್ನ ಕರೆದಿಲ್ಲ, ನನ್ನನ್ನೂ ಆಹ್ವಾನಿಸಿಲ್ಲ. ಮುಖ್ಯಮಂತ್ರಿಗಳನ್ನ ಸಹ ಕರೆದಿಲ್ಲ. ನಾನು ಶಿವ ಭಕ್ತ, ಎಲ್ಲ ದೇವರುಗಳು ನನ್ನ ಹೃದಯದಲ್ಲಿದೆ. ನಮ್ಮ ಅಕ್ಕಿಯನ್ನ ಮಂತ್ರಾಕ್ಷತೆಗೆ ಉಪಯೋಗಿಸಿಕೊಳ್ತಿದ್ದಾರೆ, ಅನ್ನಭಾಗ್ಯ ಯೋಜನೆ ಅಕ್ಕಿ ಬಳಸ್ತಿದ್ದಾರೆ ಎಂದರು.
Advertisement
Advertisement
ಅರಿಶಿನ ಅಕ್ಕಿ ಸೇರಿಯೇ ಮಂತ್ರಾಕ್ಷತೆ. ನಮ್ಮ ಅನ್ನಭಾಗ್ಯ ಯೋಜನೆಯಿಂದಲೇ ಅಕ್ಷತೆ ಆಗುತ್ತಿದೆ. ಇದು ಸಂತಸದ ವಿಚಾರವಾಗಿದೆ. ಪಾಪ ನಮ್ಮ ಬಿಜೆಪಿ ಸ್ನೇಹಿತ ಬಸವರಾಜ್ ಬೊಮ್ಮಾಯಿಯವರು (Basavaraj Bommai) ಫುಡ್ ಸೆಕ್ಯುರಿಟಿ ಅಕ್ಟ್ ತಂದಿದ್ದು ಯಾರು ಎಂಬುದನ್ನೇ ಮರೆತಿದ್ದಾರೆ ಎಂದು ತಿರುಗೇಟು ನಿಡಿದ್ದಾರೆ. ಇದನ್ನೂ ಓದಿ: ರಮೇಶ್ ಜಾರಕಿಹೊಳಿ ವಿರುದ್ಧ ವಂಚನೆ ಪ್ರಕರಣ ದಾಖಲು
Advertisement
Advertisement
ಮನಮೋಹನ್ ಸಿಂಗ್ ಫುಡ್ ಅಕ್ಟ್ ತಂದಾಗ ಮೊದಲು ಅನ್ನ ಭಾಗ್ಯ ಪ್ರಾರಂಭಿಸಿದ್ದೇ ನಮ್ಮ ಸಿದ್ದರಾಮಯ್ಯ. ಬಿಜೆಪಿಯ ನನ್ನ ಫ್ರೆಂಡ್ ಬೊಮ್ಮಾಯಿ ಮರೆತಿದ್ದಾರೆ ಎಂದು ಟಾಂಗ್ ಕೊಟ್ಟರು.