ದೇಶದಾದ್ಯಂತ ಟೊಮ್ಯಾಟೋ (Tomato) ಬೆಲೆ ಏರಿ ಕೂತಿದೆ. ಇದು ಮಧ್ಯಮ ಮತ್ತು ಕೆಳಮಧ್ಯಮ ವರ್ಗಕ್ಕೆ ಮಾತ್ರ ತಲೆಬಿಸಿ ತಂದಿಲ್ಲ, ಶ್ರೀಮಂತರು ಕೂಡ ಟೊಮ್ಯಾಟೋ ಬಗ್ಗೆ ಮಾತನಾಡುವಂತಾಗಿದೆ. ಖಾಸಗಿ ವಾಹಿನಿಯೊಂದರ ಜೊತೆ ಮಾತನಾಡಿರುವ ಬಾಲಿವುಡ್ (Bollywood) ನಟ ಸುನೀಲ್ ಶೆಟ್ಟಿ (Sunil Shetty) ಟೊಮ್ಯಾಟೋ ಬೆಲೆ ಬಗ್ಗೆ ಮಾತನಾಡಿದ್ದಾರೆ.
ನನ್ನ ಮನೆಯಲ್ಲಿ ಯಾವಾಗಲೂ ನಾವು ತಾಜಾ ತರಕಾರಿಯನ್ನೇ ತಂದು ಬಳಸುತ್ತೇವೆ. ದಿನಕ್ಕೆ ಎರಡ್ಮೂರು ರೀತಿಯ ತರಕಾರಿಗಳನ್ನು ನನ್ನ ಪತ್ನಿ ಖರೀದಿಸುತ್ತಾರೆ. ಅದರಲ್ಲೂ ಇತ್ತೀಚೆಗೆ ಟೊಮ್ಯಾಟೋ ದರ ಗಗನಕ್ಕೇರಿದೆ. ಹಾಗಾಗಿ ನಾನು ಟೊಮ್ಯಾಟೋ ತಿನ್ನುವುದನ್ನು ಕಡಿಮೆ ಮಾಡಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ ರಾಧಿಕಾ ರಾವ್
ಟೊಮ್ಯಾಟೋ ದರ ಏರಿಕೆಯಾಗುತ್ತಿದ್ದಂತೆಯೇ ಹಲವರು ಹಲವು ರೀತಿಯ ಪ್ರಯೋಗಗಳನ್ನು ಅಡುಗೆಯಲ್ಲಿ ಮಾಡುತ್ತಿದ್ದಾರೆ. ಅಲ್ಲದೇ, ತಮ್ಮ ಮನೆಯಲ್ಲೇ ಟೊಮ್ಯಾಟೋ ಬೆಳೆಯುವುದು ಹೇಗೆ ಎನ್ನುವುದನ್ನು ನಟಿ ರಾಖಿ ಸಾವಂತ್ ಹೇಳಿದ್ದರು. ಹದಿನೈದು ದಿನದ ಒಳಗೆ ಟೊಮ್ಯಾಟೋ ಬೆಳೆಯುವುದು ಹೇಗೆ ಎನ್ನುವುದನ್ನು ತೋರಿಸಿಕೊಟ್ಟಿದ್ದರು. ಆ ವಿಡಿಯೋವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.
Web Stories