-ಯತ್ನಾಳ್‍ಗೂ ಈ ಪ್ರಕರಣಕ್ಕೂ ಏನು ಸಂಬಂಧ?
ಬೆಂಗಳೂರು: ಬಿಜೆಪಿಯವರು (BJP) ಮಾಡಿದ್ದ ಷಡ್ಯಂತ್ರದ ವಿರುದ್ಧ ನನಗೆ ಜಯ ಸಿಕ್ಕಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.
Advertisement
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಆಸ್ತಿ ಗಳಿಕೆ ಪ್ರಕರಣದ (Disproportionate assets case) ಸಂಬಂಧ ಸಿಬಿಐ (CBI) ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು. ಈ ವೇಳೆ, ನಾವೆಲ್ಲಾ ಕಷ್ಟ ಪಟ್ಟು ಶ್ರಮ ಪಟ್ಟು ರಾಜಕಾರಣ ಮಾಡಿಕೊಂಡು ಬಂದಿದ್ದೇವೆ. ನಮ್ಮ ಮೇಲೆ ಬಿಜೆಪಿ ಸರ್ಕಾರ ಸಾಕಷ್ಟು ಷಡ್ಯಂತ್ರ ಮಾಡಿದೆ. ಸಾವಿರಾರು ಕೇಸ್ ದಾಖಲಿಸಿದೆ ಎಂದು ಆರೋಪಿಸಿದ್ದಾರೆ.
Advertisement
ನಾನು ಏನೂ ತಪ್ಪು ಮಾಡಿಲ್ಲ ಎಂದು ಅಂದೇ ಹೇಳಿದ್ದೆ. ಈಗ ನನಗೆ ಜಯ ಸಿಕ್ಕಿದೆ. ನನ್ನ ಪರವಾಗಿ ನಿಂತ ಸರ್ಕಾರಕ್ಕೆ, ನನ್ನ ಪರ ವಾದ ಮಾಡಿದ ವಕೀಲರಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದಿದ್ದಾರೆ.
Advertisement
Advertisement
ಸಿಬಿಐನವರೆ ಈ ಪ್ರಕರಣಕ್ಕೆ ಅಷ್ಟು ತಲೆಕೆಡಿಸಿಕೊಂಡಿಲ್ಲ. ಯತ್ನಾಳ್‍ಗೂ ಈ ಪ್ರಕರಣಕ್ಕೂ ಏನು ಸಂಬಂಧ? ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಹೋಗಲಿ. ಅವರಿಗೂ ನ್ಯಾಯಾಲಯ, ನಮಗೂ ನ್ಯಾಯಾಲಯ ಇದೆ. ನಾನು ಸಾಯೋವರೆಗೂ ಈ ರೀತಿ ಕೇಸ್‍ಗಳನ್ನ ಎದುರಿಸಲೇಬೇಕು. ಅದು ಗೊತ್ತಿದೆ ಅವರು ನನ್ನ ಬಿಡಲ್ಲ ಎಲ್ಲವನ್ನೂ ಎದುರಿಸುತ್ತೇನೆ ಎಂದು ಅವರು ಹೇಳಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನು ಲೋಕಾಯುಕ್ತಕ್ಕೆ ನೀಡಿದ್ದನ್ನು ಪ್ರಶ್ನಿಸಿ ಸಿಬಿಐ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ. ಲೋಕಾಯುಕ್ತದಲ್ಲಿ ತನಿಖೆ ಮುಂದುವರೆಸಬಹುದು ಎಂದು ಕೋರ್ಟ್ ಆದೇಶದಲ್ಲಿ ತಿಳಿಸಿದೆ. ರಾಜ್ಯ ಸರ್ಕಾರ- ಸಿಬಿಐ ನಡುವಿನ ವಿವಾದ ಸುಪ್ರೀಂಕೋರ್ಟ್‍ನಲ್ಲಿ ಬಗೆಹರಿಯುವುದು ಸೂಕ್ತ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.