ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ವರುಣಾ ಕ್ಷೇತ್ರಕ್ಕೆ ಬಂದು ಕೇವಲ 20 ದಿನ ಆಯ್ತು. ನಾನು 37 ವರ್ಷಗಳಿಂದ ಪಕ್ಷಕ್ಕಾಗಿ ದುಡಿದಿದ್ದೇನೆ ಎಂದು ವರುಣಾ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಆಭ್ಯರ್ಥಿ ಬಸವರಾಜು ಹೇಳಿದ್ದಾರೆ. ಇದನ್ನೂ ಓದಿ: ಕೊನೆ ಘಳಿಗೆಯಲ್ಲಿ ಬಿಎಸ್‍ವೈಗೆ ಕರೆ ಮಾಡಿದ ಆ ನಾಯಕ ಯಾರು?
ವರುಣಾದಲ್ಲಿ ವಿಜಯೇಂದ್ರ ಅಭ್ಯರ್ಥಿಯಾಗಿ ಪ್ರಚಾರ ಮಾಡಿಲ್ಲ. ಪಕ್ಷದ ಪರವಾಗಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು ಅಷ್ಟೇ. ರಾಜ್ಯದ ಜನತೆ ನನಗೆ ಕೊನೆ ಕ್ಷಣದಲ್ಲಿ ಟಿಕೆಟ್ ಸಿಕ್ಕಿದೆ ಅಂತಾ ತಿಳಿದುಕೊಂಡಿರಬಹುದು. ಆದ್ರೆ ಹೈಕಮಾಂಡ್ ಈ ಮೊದಲೇ ನಾನೇ ವರುಣಾ ಕ್ಷೇತ್ರದ ಅಭ್ಯರ್ಥಿಯೆಂದು ಹೇಳಿತ್ತು ಎಂದು ತಿಳಿಸಿದರು. ಇದನ್ನೂ ಓದಿ: ನಿಮ್ಮ ಮಗನಿಗಿಂತ ನಮಗೆ ಪಕ್ಷವೇ ಮುಖ್ಯ, ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ: ಬಿಎಸ್‍ವೈಗೆ ಅಮಿತ್ ಶಾ ಸೂಚನೆ
ಯಡಿಯೂರಪ್ಪನವರು ಶಾಸಕರಾದ ಸಂದರ್ಭದಿಂದ ನಾವು ಕೆಲಸ ಮಾಡಿದ್ದೇನೆ. ಬಿಜೆಪಿಯ ಆಶೀರ್ವಾದ ನನ್ನ ಮೇಲಿದೆ. ನನಗೆ ಟಿಕೆಟ್ ನೀಡುವುದು ಎಲ್ಲ ನಾಯಕರ ತೀರ್ಮಾನವಾಗಿದ್ದು, ಕೇವಲ ಒಬ್ಬರು, ಇಬ್ಬರ ಹೆಸರು ಹೇಳೋದಕ್ಕೆ ಆಗಲ್ಲ ಅಂತಾ ಹೇಳಿದ್ರು. ಇದನ್ನೂ ಓದಿ: ಇದೊಂದು ಧರ್ಮಯುದ್ದ ಇದ್ದಂತೆ, ಪಕ್ಷಾತೀತವಾಗಿ ವಿಜಯೇಂದ್ರ ಬೆಂಬಲಿಸಿ:ಜಿಟಿ ದೇವೇಗೌಡ
20 ದಿನಗಳಿಂದ ವರುಣಾ ಕ್ಷೇತ್ರದಿಂದ ವಿಜಯೇಂದ್ರ ಸ್ಪರ್ಧೆ ಮಾಡ್ತಾರೆ ಅಂತಾ ಹೇಳಲಾಗುತ್ತಿತ್ತು. ಸೋಮವಾರ ವಿಜಯೇಂದ್ರ ಸಹ ನಾಮಪತ್ರ ಸಲ್ಲಿಸಲು ಮುಂದಾಗಿದ್ದ ಕೊನೆ ಕ್ಷಣದಲ್ಲಿ ನನ್ನ ಪುತ್ರ ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡಲ್ಲ ಅಂತಾ ನಂಜನಗೂಡಿನಲ್ಲಿ ನಡೆದ ಸಮಾವೇಶದಲ್ಲಿ ಬಿಎಸ್‍ವೈ ಹೇಳಿದ್ರು. ಇದನ್ನೂ ಓದಿ: ವಿಜಯೇಂದ್ರ ಸ್ಪರ್ಧೆ ಅನಿವಾರ್ಯ, ಟಿಕೆಟ್ ನೀಡುವಂತೆ ಹೈಕಮಾಂಡ್‍ಗೆ ಒತ್ತಾಯ: ಪ್ರತಾಪ್ ಸಿಂಹ
ಸದ್ಯ ವರುಣಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಪಡೆದಿರೋ ಬಸವರಾಜು ಅವರು ಕೇಂದ್ರ ಸಚಿವ ಅನಂತಕುಮಾರ್ ಮತ್ತು ಕೇಂದ್ರ ಬಿಜೆಪಿ ಸಂಘಟನಾ ಕಾರ್ಯದರ್ಶಿ ಸಂತೋಷ್ ಅವರ ಆಪ್ತ ಎನ್ನುವ ಮಾತು ಬಿಜೆಪಿ ವಲಯದಲ್ಲಿ ಈಗ ಹರಿದಾಡುತ್ತಿದೆ. ಇದನ್ನೂಓದಿ: ಬಿಎಸ್‍ವೈ ಪುತ್ರನಿಗೆ ವರುಣಾ ಟಿಕೆಟ್ ಕೈ ತಪ್ಪಿಸಿದ್ದು ಯಾರು?: ಕುದಿಮೌನ ತಾಳಿದ ಬಿಎಸ್‍ವೈ