ದಾವಣಗೆರೆ: ಸಿಎಂ ಸಿದ್ದರಾಮಯ್ಯರ (Siddaramaiah) ಅಧಿಕಾರವಧಿ ಅರ್ಧಕ್ಕೆ ಅಂತ ಯಾರೂ ಹೇಳಿಲ್ಲ ಎಂದು ಸಿಎಂ ಸಿದ್ದು ಪರ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಬ್ಯಾಟಿಂಗ್ ಮಾಡಿದ್ದಾರೆ.
ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯಲ್ಕಿರುವ ವಾಲ್ಮೀಕಿ ಮಠದಲ್ಲಿ ಮಾತನಾಡಿದ ಅವರು, ಸಿಎಂ ಆಗಿ ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರೆ ಎನ್ನುವ ವಿಶ್ವಾಸ ಇದೆ. ಅದು ಪಕ್ಷದ ತೀರ್ಮಾನಕ್ಕೆ ಬಿಟ್ಟ ವಿಚಾರ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪ್ರತಾಪ್ ಸಿಂಹಗೆ ತಲೆ ಕೆಟ್ಟಿದೆ, ಅವರದ್ದು ಚಿಲ್ಲರೆ ಮನಸ್ಥಿತಿ – ಎಂ.ಬಿ ಪಾಟೀಲ್ ಗುಡುಗು
Advertisement
Advertisement
ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ನೀಡದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅಕ್ಕಿ ಖರೀದಿ ಸಮಸ್ಯೆಯನ್ನು ಸರಿಪಡಿಸುತ್ತೇವೆ. ಬಿಜೆಪಿಯವರು ಪ್ರತಿಭಟನೆ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಅದು ಬಿಜೆಪಿಯವರಿಗೆ ಸಂಬಂದಪಟ್ಟ ವಿಚಾರವಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.
Advertisement
Advertisement
ಪ್ರಧಾನಿ ಮೋದಿ ಅವರು 15 ಲಕ್ಷ ಕೊಡ್ತೀನಿ ಅಂದ್ರು, ಅದು ಬರಲಿಲ್ಲ. ಅವರ 10 ಭರವಸೆಗಳು ಹಾಗೇ ಇವೆ. ನಮಗೆ ಸ್ವಲ್ಪ ಕಾಲಾವಕಾಶ ಬೇಕು. ಎಲ್ಲವನ್ನು ಸರಿ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮಹದೇವಪ್ಪಗೆ ಸಚಿವರಾಗಿ ಕೆಲಸ ಮಾಡೋದಕ್ಕಿಂತ ಬೇರೆಯದ್ದರ ಬಗ್ಗೆಯೇ ಆಸಕ್ತಿ ಜಾಸ್ತಿ: ಡಿಕೆ ಸುರೇಶ್ ಟಾಂಗ್
ಪಠ್ಯಪುಸ್ತಕ ಪರಿಷ್ಕರಣೆ ವಿಚಾರವಾಗಿ ಪ್ರತಿಕ್ರಿಯಿಸಿ, ಪಠ್ಯಪುಸ್ತಕ ಶಿಕ್ಷಣಕ್ಕೆ ವಿರುದ್ಧವಾಗಿದೆ. ಅದನ್ನು ಬದಲಾವಣೆ ಮಾಡ್ತೀವಿ ಎಂದು ಹೇಳಿದ್ದೆವು. ಅದನ್ನು ನಾವು ಬದಲಾವಣೆ ಮಾಡುತ್ತೇವೆ. ಇದರಲ್ಲಿ ಗೊಂದಲ ಇಲ್ಲ ಎಂದಿದ್ದಾರೆ.