ಬೆಂಗಳೂರು: ರಾಮನಗರವನ್ನು (Ramanagara) ಬೆಂಗಳೂರು ದಕ್ಷಿಣ ಜಿಲ್ಲೆ (Bengaluru South District) ಎಂದು ಹೇಗೆ ಬದಲಾಯಿಸಬೇಕು ಎನ್ನುವುದು ನನಗೆ ಗೊತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.
ರಿಯಲ್ ಎಸ್ಟೇಟ್‌ಗಾಗಿ (Real Estate) ರಾಮನಗರ ಹೆಸರನ್ನು ಬದಲಾಯಿಸಲಾಗಿದೆ ಎಂದು ಅಶ್ವತ್ಥನಾರಾಯಣ (Ashwath Narayana) ಹೇಳಿಕೆಗೆ ತಿರುಗೇಟು ನೀಡಿದ ಅವರು, ಇವರು ಬೆಂಗಳೂರಿಗೆ ಬಂದಿದ್ದು ಯಾಕೆ? ಕನಕಪುರದವರಿಗೆ, ರಾಮನಗರದವರಿಗೆ ಏನೂ ಬೇಡ್ವಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಬೆಟ್ಟಿಂಗ್ ಆಪ್ ಪ್ರಚಾರ – ದೇವರಕೊಂಡ, ಪ್ರಕಾಶ್ ರಾಜ್, ರಾಣಾ ಸೇರಿದಂತೆ 25 ಮಂದಿ ಮೇಲೆ ಕೇಸ್
ಬೆಂಗಳೂರು ದಕ್ಷಿಣ ಜಿಲ್ಲೆ ಹೇಗೆ ಮಾಡ್ಬೇಕು ನಮಗೆ ಗೊತ್ತು, ರಾಮನಗರ ಹೆಸರು ಬರಬಾರದು ಎಂದು ಯಾರನ್ನು ಭೇಟಿ ಮಾಡಿದ್ದಾರೆ ಎನ್ನುವುದು ಗೊತ್ತಿದೆ. ಸಂವಿಧಾನದಲ್ಲಿ ಯಾರನ್ನ ಕೇಳ್ಬೇಕು ಅಂತೇನಿಲ್ಲ. ರಾಮನಗರ ಜಿಲ್ಲೆಯ ಹೆಸರನ್ನು ನಾವು ಬದಲಾವಣೆ ಮಾಡುತ್ತೇವೆ ಎಂದರು.