ಚೆನ್ನೈ: ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಗೆ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಚಾಲನೆ ಸಿಕ್ಕಿದೆ. ಈ ವೇಳೆ ತಂದೆ ರಾಜೀವ್ ಗಾಂಧಿಯನ್ನು ಸ್ಮರಿಸಿಕೊಂಡ ರಾಹುಲ್ ಗಾಂಧಿ, ದ್ವೇಷ ಹಾಗೂ ವಿಭಜನೆ ರಾಜಕೀಯದ ಕಾರಣದಿಂದ ನಾನು ನನ್ನ ತಂದೆಯನ್ನು ಕಳೆದುಕೊಂಡೆ ಎಂದು ಹೇಳಿದರು.
ಭಾರತ್ ಜೋಡೋ ಆರಂಭಿಸುವುದಕ್ಕೂ ಮುನ್ನ ರಾಹುಲ್ ಗಾಂಧಿ ಶ್ರೀಪೆರಂಬೂರ್‌ನಲ್ಲಿರುವ ರಾಜೀವ್ ಗಾಂಧಿ ಸ್ಮಾರಕಕ್ಕೆ ಭೇಟಿ ನೀಡಿದ್ದರು. ಸ್ಮಾರಕದ ಆವರಣದಲ್ಲಿ ಗಿಡ ನೆಟ್ಟು, ತಂದೆಯನ್ನು ಸ್ಮರಿಸಿದರು. ಈ ವೇಳೆ ರಾಹುಲ್‌ಗೆ ಡಿಕೆಶಿ, ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಅಳಗಿರಿ ಸಾಥ್ ನೀಡಿದರು.
Advertisement
Advertisement
ಇದರ ಫೋಟೋಗಳನ್ನು ಟ್ವೀಟ್ ಮಾಡಿದ ರಾಹುಲ್ ಗಾಂಧಿ, ದ್ವೇಷ ಮತ್ತು ವಿಭಜನೆ ರಾಜಕೀಯದ ಕಾರಣ ನಾನು ನನ್ನ ತಂದೆಯನ್ನು ಕಳೆದುಕೊಂಡೆ. ಈಗ ನಾನು ನನ್ನ ದೇಶವನ್ನು ಕಳೆದುಕೊಳ್ಳಲು ಬಯಸುತ್ತಿಲ್ಲ. ಪ್ರೀತಿ ದ್ವೇಷವನ್ನು ಜಯಿಸುತ್ತದೆ. ಆಸೆ ಭಯವನ್ನು ಸೋಲಿಸುತ್ತದೆ. ನಾವೆಲ್ಲಾ ಒಗ್ಗಟ್ಟಾಗಿ ಇದ್ದರೆ ಏನು ಬೇಕಿದ್ದರೂ ಮಾಡಬಹುದು ಎಂದರು. ಇದನ್ನೂ ಓದಿ: ಇಂದು 606 ಕೇಸ್ – 6 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ
Advertisement
I lost my father to the politics of hate and division. I will not lose my beloved country to it too.
Love will conquer hate. Hope will defeat fear. Together, we will overcome. pic.twitter.com/ODTmwirBHR
— Rahul Gandhi (@RahulGandhi) September 7, 2022
Advertisement
ಭಾರತ್ ಜೋಡೋ ಯಾತ್ರೆಯನ್ನು ಉದ್ಘಾಟಿಸಿದ ಬಳಿಕ ಗಾಂಧಿ ಸ್ಮಾರಕಕ್ಕೆ ನಮಿಸಿದ ರಾಹುಲ್ ಗಾಂಧಿ ಬಳಿಕ ನಡೆದ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ದೇಶ ವಿಭಜನೆ ರಾಜಕೀಯ, ಮತೋನ್ಮಾದ, ನಿರುದ್ಯೋಗ, ಹಣದುಬ್ಬರ, ಅಸಮಾನತೆ ವಿರುದ್ಧ ದನಿ ಎತ್ತುವುದು, ಇದರ ವಿರುದ್ಧ ದೇಶದ ಜನರನ್ನೂ ಒಗ್ಗೂಡಿಸುವುದು ಈ ಯಾತ್ರೆಯ ಉದ್ದೇಶವಾಗಿದೆ ಎಂದರು.
ಇಂದಿನ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಗಾಂಧಿ, ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್, ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಭೂಪೇಶ್ ಭಘಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿ ಹಲವು ಗಣ್ಯರು ಪಾಲ್ಗೊಂಡಿದ್ದರು. ಇದನ್ನೂ ಓದಿ: ಬೆಂಗಳೂರಲ್ಲಿ ಮಳೆ ಹಾವಳಿ – ಕಾಣೆಯಾಗಿದ್ದಾರೆಂದು ಸಚಿವರು, ಸಂಸದರ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಈ ಸುದೀರ್ಘ ಯಾತ್ರೆ ಕಾಶ್ಮೀರದವರೆಗೂ ಎಂದರೆ 3,750 ಕಿ.ಮೀ ದೂರ ಸಾಗಲಿದೆ. ಈ ಯಾತ್ರೆ 12 ರಾಜ್ಯಗಳಲ್ಲಿ 150 ದಿನ ನಡೆಯಲಿದೆ. ನಿತ್ಯ 25 ಕಿ.ಮೀ ಈ ಪಾದಯಾತ್ರೆ ನಡೆಯಲಿದೆ.