ರಾಮನಗರ: ಎರಡು ಬಾರಿ ನಾನು ಚುನಾವಣೆಯಲ್ಲಿ ಸೋತಿದ್ದೇನೆ. ನಾನು ಏನು ತಪ್ಪು ಮಾಡಿದ್ದೇನೆ ಗೊತ್ತಿಲ್ಲ. ಮಾಜಿ ಪ್ರಧಾನಿ ಮತ್ತು ಮಾಜಿ ಮುಖ್ಯಮಂತ್ರಿ ಮಗನಾಗಿ ಹುಟ್ಟಿರುವುದೇ ನನ್ನ ದುರಾದೃಷ್ಟನೋ ಗೊತ್ತಿಲ್ಲ ಎಂದು ಪ್ರಚಾರದ ವೇಳೆ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಕಣ್ಣೀರು ಹಾಕಿದ್ದಾರೆ.
ತಾಲೂಕಿನ ಕನ್ನಮಂಗಲ ಗ್ರಾಮದ ಪ್ರಚಾರ ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿ ಭಾವುಕರಾದರು. ಈ ಚುನಾವಣೆಯಲ್ಲಿ ನಾನು ಕಣ್ಣೀರು ಹಾಕಬಾರದು ಅಂದುಕೊಂಡಿದ್ದೆ. ಆದರೆ ಸಾಕಷ್ಟು ನೋವುಗಳಿವೆ. ನಾನು ಚುನಾವಣೆಯಲ್ಲೂ ಪೆಟ್ಟು ತಿಂದಿದ್ದೇನೆ. ಜನ ನನ್ನ ಪರವಾಗಿ ಮತ ಹಾಕಿದ್ದಾರೆ. ಆದರೆ ರಾಜಕೀಯ ಷಡ್ಯಂತ್ರಕ್ಕೆ ನಾನು ಬಲಿಯಾಗಿದ್ದೇನೆ. ಬಹಳ ನೋವಿನಲ್ಲಿ ಇದ್ದೇನೆ. ಇವತ್ತು ಪಕ್ಷದ ಕಾರ್ಯಕರ್ತರಿಗೆ ಬೆಲೆ ಕೊಡಬೇಕೆಂದು ಈ ಚುನಾವಣೆಯಲ್ಲಿ ನಿಂತಿದ್ದೇನೆ. ದಯವಿಟ್ಟು ಈ ಬಾರಿ ಈ ಯುವಕನನ್ನು ಗೆಲ್ಲಿಸಿ ಎಂದು ಎಂದು ಮನವಿ ಮಾಡಿದರು. ಇದನ್ನೂ ಓದಿ: ಸೇನಾ ವಾಪಸಾತಿ ಬಳಿಕ ಗಡಿಯಲ್ಲಿ ದೀಪಾವಳಿ ಸಿಹಿ ಹಂಚಿಕೊಂಡ ಭಾರತ-ಚೀನಾ ಸೈನಿಕರು
ಕಳೆದ ಭಾರಿ ಲೋಕಸಭೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕಹಿ ಘಟನೆಯನ್ನು ನೆನೆಸಿಕೊಂಡು ನನ್ನ ಮೂಲಕ ಉತ್ತರ ಕೊಡಬೇಕು ಎಂಬುದು ಕಾರ್ಯಕರ್ತರ ಭಾವನೆಯಾಗಿತ್ತು. ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಏನಾಗಿತ್ತು ಎಂದು ಎಲ್ಲರಿಗೂ ಗೊತ್ತು. ಆಗ ನಾನು ದೇವೇಗೌಡರಿಗೆ ಸಾಹೇಬರಿಗೆ ಮನವಿ ಮಾಡಿದೆ. ಪ್ರಾದೇಶಿಕ ಪಕ್ಷ ಕಟ್ಟುವುದೇ ಕಷ್ಟ ಇದೆ, ರೈತ ಪರವಾಗಿ ಕಾಳಜಿ ಇಟ್ಟುಕೊಂಡು ಈ ಪಕ್ಷವನ್ನು ಕಟ್ಟಿದ್ದಾರೆ. ನಂತರ ಕುಮಾರಣ್ಣ ಅವರು ಅಧಿಕಾರ ಇರಲಿ, ಇಲ್ಲದೇ ಇರಲಿ ರೈತರ ಪರವಾಗಿ ನಿರಂತರವಾಗಿ ಸಾಲಮನ್ನಾ ಮಾಡಿದ್ದಾರೆ. ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ ಎಂದರು. ಇದನ್ನೂ ಓದಿ: ಗ್ಯಾರಂಟಿ ಯೋಜನೆ ಕೊಡಲು ಆಗದ ಕಾಂಗ್ರೆಸ್ ಸರ್ಕಾರ ಯೂಟರ್ನ್ ಸರ್ಕಾರ: ಛಲವಾದಿ ನಾರಾಯಣಸ್ವಾಮಿ