ದಾವಣಗೆರೆ: ಕಾರ್ಲ್ ಮಾರ್ಕ್ಸ್ ನಗರದಲ್ಲಿ ನಡೆದಿದ್ದ `ಐ ಲವ್ ಮಹಮ್ಮದ್’ ಬ್ಯಾನರ್ ಗಲಾಟೆ (I Love Muhammad Banner Controversy) ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸೆ.24 ರಂದು ಕಾರ್ಲ್ ಮಾರ್ಕ್ಸ್ ನಗರದಲ್ಲಿ ಬ್ಯಾನರ್ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಕೋಮಿನ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಹಿಂದೂಗಳ ಮನೆ ಮೇಲೆ ಕಲ್ಲು ತೂರಾಟ ನಡೆದಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ನೂರು ಮಂದಿಯ ವಿರುದ್ಧ 3 ಎಫ್‍ಐಆರ್ ದಾಖಲಾಗಿತ್ತು. ಎರಡೂ ಕಡೆಯವರಿಂದ 8 ಮಂದಿಯನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ತಂಡಗಳನ್ನು ರಚನೆ ಮಾಡಿದ್ದು, ಇನ್ನೂಳಿದವರ ಬಂಧನಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ: ‘ಐ ಲವ್ ಮಹಮ್ಮದೀಯ’ ಎಂಬ ಫ್ಲೆಕ್ಸ್ ಹಾಕಿದ್ದಕ್ಕೆ ಗಲಾಟೆ – ಮನೆಗಳನ್ನು ಟಾರ್ಗೆಟ್ ಮಾಡಿ ಕಲ್ಲು ತೂರಾಟ
ಪೊಲೀಸರು ಸಾಮಾಜಿಕ ಜಾಲತಾಣದ ಬಗ್ಗೆ ನಿಗಾ ಇಟ್ಟಿದ್ದು, ಸಮಾಜದಲ್ಲಿ ಅಶಾಂತಿ ಮೂಡಿಸಲು ಸುಳ್ಳು ಸುದ್ದಿ ಹರಡಿಸದರೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ಕಾರ್ಲ್ ಮಾಕ್ರ್ಸ್ ನಗರದಲ್ಲಿ ನಡೆದ ಘಟನೆ ಬಗ್ಗೆ ವದಂತಿಗಳನ್ನು ಹರಡಿದರೆ ಕ್ರಮಕೈಗೊಳ್ಳಲು ಮುಂದಾಗಿದ್ದಾರೆ. ಜಿಲ್ಲೆಯಲ್ಲಿ ಶಾಂತಿ ಕಾಪಾಡುವಂತೆ ಎಸ್‍ಪಿ ಉಮಾ ಪ್ರಶಾಂತ್ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಯುಪಿಯಲ್ಲಿ ‘ಐ ಲವ್ ಮುಹಮ್ಮದ್’ ವಿವಾದ ಉಲ್ಬಣ – ಪ್ರತಿಭಟನೆ ವೇಳೆ ಕಲ್ಲೆಸೆತ, ಪೊಲೀಸರಿಂದ ಲಾಠಿಚಾರ್ಜ್

