ನವದೆಹಲಿ: ವಿರೋಧ ಪಕ್ಷಗಳ ಒಕ್ಕೂಟ INDIA ರಚನೆ ಮಾಡಿದ್ದು ನಾನು, ಅದಕ್ಕೆ ಹೆಸರು ಸೂಚಿಸಿದ್ದು ನಾನು, ದೇಶದಲ್ಲಿರುವ ಇಂಡಿಯಾ ಮೈತ್ರಿಕೂಟ ಪಶ್ಚಿಮ ಬಂಗಾಳದಲ್ಲಿಲ್ಲ, ಕಾಂಗ್ರೆಸ್ ಮತ್ತು ಸಿಪಿಎಂ ಬಿಜೆಪಿ ಪರವಾಗಿ ಕೆಲಸ ಮಾಡುತ್ತಿವೆ. ನೀವೂ ಬಿಜೆಪಿ ಸೋಲಿಸಬೇಕಾದರೆ ಟಿಎಂಸಿಗೆ ಮತ ನೀಡಬೇಕು ಎಂದು ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
Advertisement
ಮುರ್ಷಿದಾಬಾದ್ನಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಂಗಾಳದಲ್ಲಿ TMC ಯಾರ ಜೊತೆಗೂ ಮೈತ್ರಿ ಮಾಡಿಕೊಂಡಿಲ್ಲ. ಇಲ್ಲಿರುವ ಕಾಂಗ್ರೆಸ್ ಮತ್ತು ಟಿಎಂಸಿ ನಾಯಕರು ಬಿಜೆಪಿ ನಾಯಕರ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಇಂಡಿಯಾ ಒಕ್ಕೂಟ ನಾನೇ ಕಾರಣಿಭೂತರಾದರೂ ಬಂಗಾಳದಲ್ಲ ಈ ಮೈತ್ರಿ ಅಸ್ತಿತ್ವದಲ್ಲಿಲ್ಲ. ಹೀಗಾಗಿ ಬಿಜೆಪಿ ಸೋಲಿಸಲು ನಮಗೆ ಮತ ನೀಡಿದ ಎಂದು ಮನವಿ ಮಾಡಿದರು. ಇದನ್ನೂ ಓದಿ: ಪಶ್ಚಿಮ ಬಂಗಾಳ – ರಾಮನವಮಿ ಶೋಭಾಯಾತ್ರೆಯ ವೇಳೆ ಬಾಂಬ್ ಸ್ಫೋಟ, ಕಲ್ಲು ತೂರಾಟ
Advertisement
Advertisement
ರಾಜ್ಯದಲ್ಲಿ ರಾಮನವಮಿ (Ramanavami) ಆಚರಣೆಯ ಸಂದರ್ಭದಲ್ಲಿ ಬಿಜೆಪಿ (BJP) ಹಿಂಸಾಚಾರವನ್ನು ಪ್ರಚೋದಿಸುತ್ತಿದೆ ಎಂದು ಮಮತಾ ಬ್ಯಾನರ್ಜಿ (Mamta Banerjee) ಆರೋಪಿಸಿದರು. ಬಿಜೆಪಿಯು ಮಮತಾ ಬ್ಯಾನರ್ಜಿ ಹೇಳಿಕೆಗೆ ತಿರುಗೇಟು ನೀಡಿದೆ. ಮುರ್ಷಿದಾಬಾದ್ ಜಿಲ್ಲೆಯಲ್ಲಿ ರಾಮನವಮಿ ಆಚರಣೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರಕ್ಕೆ ಮಮತಾ ಬ್ಯಾನರ್ಜಿಯನ್ನು ಹೊಣೆಗಾರರನ್ನಾಗಿಸುವ ಮೂಲಕ ಬಂಗಾಳಿ ಹಿಂದೂಗಳನ್ನು ರಕ್ಷಿಸುವಲ್ಲಿ ವಿಫಲವಾದ ಕಾರಣಕ್ಕೆ ಆಕೆಯನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಹೇಳಿದೆ.