– 2ನೇ ಭಾಷೆಯಾಗಿ ಹಿಂದಿ ಕಲಿಯಲು ವಿನಂತಿಸಿದ್ದೆ
ನವದೆಹಲಿ: ಹಿಂದಿ ಹೇರಿಕೆಯ ಕುರಿತ ಹೇಳಿಕೆಯನ್ನು ನಾನು ನೀಡಿಲ್ಲ. ಮಾತೃ ಭಾಷೆ ನಂತರ 2ನೇ ಭಾಷೆಯಾಗಿ ಹಿಂದಿ ಬಳಸಲು ತಿಳಿಸಿದ್ದೇನೆ. ಕೆಲವರು ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಎಂದಿಗೂ ಇತರ ಪ್ರಾದೇಶಿಕ ಭಾಷೆಗಳ ಮೇಲೆ ಹಿಂದಿ ಹೇರುವ ಕುರಿತು ಹೇಳಿಕೆ ನೀಡಿಲ್ಲ. ಆಯಾ ರಾಜ್ಯಗಳ ಮಾತೃಭಾಷೆಯ ನಂತರ ಹಿಂದಿಯನ್ನು 2ನೇ ಭಾಷೆಯಾಗಿ ಕಲಿಯಬೇಕೆಂದು ಮಾತ್ರ ವಿನಂತಿಸಿದ್ದೇನೆ ಎಂದು ತಿಳಿಸಿದ್ದಾರೆ.
Advertisement
ಅಲ್ಲದೆ ನಾನೇ ಹಿಂದಿಯೇತರ ರಾಜ್ಯ ಗುಜರಾತ್‍ನಿಂದ ಬಂದವನು. ಕೆಲವರು ಈ ವಿಚಾರದಲ್ಲಿ ರಾಜಕೀಯ ಮಾಡಲು ಯತ್ನಿಸುತ್ತಿದ್ದಾರೆ. ಇದೇ ಅವರ ಆಯ್ಕೆಯಾಗಿದೆ ಎಂದು ಆರೋಪಿಸಿದ್ದಾರೆ.
Advertisement
Union Home Minister Amit Shah: I never asked for imposing Hindi over other regional languages&had only requested for learning Hindi as the 2nd language after one’s mother tongue. I myself come from a non-Hindi state of Gujarat. If some people want to do politics, its their choice pic.twitter.com/JXS3VFTKUl
— ANI (@ANI) September 18, 2019
Advertisement
ಅಮಿತ್ ಶಾ ಅವರ ಏಕಭಾಷಾ ಸೂತ್ರದ ಹೇಳಿಕೆ ಕುರಿತು ದಕ್ಷಿಣ ಭಾರತದ ರಾಜ್ಯಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಅಲ್ಲದೆ ಅವರ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಹಿಂದಿಯೇತರ ರಾಜ್ಯಗಳಲ್ಲಿ ಭಾಷೆಯನ್ನು ಹೇರಲು ಈ ಹಿಂದೆ ಸಾಕಷ್ಟು ಬಾರಿ ಪ್ರಯತ್ನ ಮಾಡಲಾಗಿದೆ ಆದರೂ ಅದು ಸಾಧ್ಯವಾಗಿಲ್ಲ. ಇದೀಗ ಏಕ ಭಾಷಾ ಸೂತ್ರವನ್ನು ಅಮಿತ್ ಶಾ ಮತ್ತೊಮ್ಮೆ ಉಚ್ಛರಿಸಿದ್ದರು.
Advertisement
`ಹಿಂದಿ ದಿವಸ್’ ಆಚರಣೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 14ರಂದು ಅಮಿತ್ ಶಾ ಅವರು ದೆಹಲಿಯಲ್ಲಿ ಮಾತನಾಡಿ, ಈ ದೇಶದ ವಿಶೇಷತೆ ಅಂದರೆ ಭಾಷೆ. ಜಗತ್ತಿನ ಯಾವುದೇ ಭಾಷೆಯ ಜೊತೆ ಹೋಲಿಸಿ ನೋಡಿದಾಗ ನಮ್ಮ ಭಾಷೆಯ ವ್ಯಾಪಕತೆ, ಸಮೃದ್ಧತೆಯೇ ಸರ್ವಶ್ರೇಷ್ಠ ಎಂದಿದ್ದರು. ಅಲ್ಲದೇ ಭಾಷೆಗಳು ಮತ್ತು ಉಪಭಾಷೆಗಳ ವೈವಿಧ್ಯತೆಯು ನಮ್ಮ ರಾಷ್ಟ್ರದ ಶಕ್ತಿ. ಆದರೆ, ನಮ್ಮ ರಾಷ್ಟ್ರವು ಒಂದೇ ಭಾಷೆಯನ್ನು ಹೊಂದುವ ಅವಶ್ಯಕತೆಯಿದೆ. ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಹಿಂದಿಯನ್ನು `ರಾಜ್ ಭಾಷಾ’ ಎಂದು ಕರೆದು ಸ್ವೀಕರಿಸಿದ್ದರು. ಮಾತೃ ಭಾಷೆಯ ಜೊತೆಗೆ ಹಿಂದಿ ಭಾಷೆಯನ್ನು ಹೆಚ್ಚಾಗಿ ಬಳಸಿ ಎಂದಿದ್ದರು ಎಂದು ಹೇಳಿದ್ದರು.
हमारे देश की सभी भाषाओं की व्यापकता और समृद्धता विश्व की किसी भी भाषा से बहुत अधिक है।
मैं देशवासियों से आह्वान करता हूं कि आप अपने बच्चों से, अपने सहकर्मियों से अपनी भाषा में बात कीजिए क्योंकि अगर हम ही अपनी भाषाओं को छोड़ देंगे तो उन्हें लंबे समय तक जीवित कैसे रखा जायेगा। pic.twitter.com/J6JbaN1JJn
— Amit Shah (@AmitShah) September 14, 2019
ಭಾರತವನ್ನು ಒಂದುಗೂಡಿಸುವ ಸಾಮಥ್ರ್ಯ ಹಿಂದಿ ಭಾಷೆಗೆ ಇದೆ. ಭಾರತವೂ ವಿಭಿನ್ನ ಭಾಷೆಗಳ ದೇಶ. ಪ್ರತಿ ಭಾಷೆಗೂ ತನ್ನದೇ ಮಹತ್ವವಿದೆ. ಆದರೆ ಜಾಗತಿಕವಾಗಿ ಭಾರತದ ಅಸ್ಮಿತೆ ಆಗುವ ಭಾಷೆಯ ಅಗತ್ಯವಿದೆ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದರು. ಶಾ ಅವರ ಈ ಹೇಳಿಗೆ ಬಿಜೆಪಿ ಕಾರ್ಯಾಧ್ಯಕ್ಷ ಜೆಪಿ ನಡ್ಡಾ ಕೂಡ ದನಿಗೂಡಿಸಿದ್ದರು.
ಈ ಬಗ್ಗೆ ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ, ಭಾರತೀಯ ಸಂವಿಧಾನ ಅಂಗೀಕರಿಸಿದ ಭಾಷೆಗಳಲ್ಲಿ ಯಾವುದೇ ತಾರತಮ್ಯ ಸಲ್ಲದು. ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಅಧಿಕೃತ ಭಾಷೆ ಮತ್ತು ಕನ್ನಡ ಭಾಷಾ ಸ್ವಾಭಿಮಾನಕ್ಕೆ ಧಕ್ಕೆ ತರುವ ಯಾವ ಪ್ರಯತ್ನವನ್ನೂ ನಮ್ಮ ಸರ್ಕಾರ ಸಹಿಸುವುದಿಲ್ಲ. ನಮ್ಮ ದೇಶದಲ್ಲಿನ ಎಲ್ಲ ಅಧಿಕೃತ ಭಾಷೆಗಳು ಸಮಾನವಾಗಿವೆ. ಅದೇ ರೀತಿ ಕರ್ನಾಟಕದಲ್ಲಿಯೂ ಕನ್ನಡ ಪ್ರಮುಖ ಭಾಷೆಯಾಗಿದೆ. ಕನ್ನಡದ ಮಹತ್ವ ಹಾಗೂ ಅಸ್ಮಿತೆಯ ವಿಚಾರದಲ್ಲಿ ನಾವು ಎಂದಿಗೂ ರಾಜಿಯಾಗುವುದಿಲ್ಲ. ಅಲ್ಲದೆ, ಕನ್ನಡ ಹಾಗೂ ರಾಜ್ಯದ ಸಂಸ್ಕೃತಿಯನ್ನು ಬೆಳೆಸಲು ಕಟಿಬದ್ಧರಾಗಿದ್ದೇವೆ ಎಂದು ಅಮಿತ್ ಶಾ ಹೇಳಿಕೆಗೆ ಕುಟುಕ್ಕಿದ್ದರು.
ಭಾರತೀಯ ಸಂವಿಧಾನ ಅಂಗೀಕರಿಸಿದ ಭಾಷೆಗಳಲ್ಲಿ ಯಾವುದೇ ತಾರತಮ್ಯ ಸಲ್ಲದು. ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಅಧಿಕೃತ ಭಾಷೆ ಮತ್ತು ಕನ್ನಡ ಭಾಷಾ ಸ್ವಾಭಿಮಾನಕ್ಕೆ ಧಕ್ಕೆ ತರುವ ಯಾವ ಪ್ರಯತ್ನವನ್ನೂ ನಮ್ಮ ಸರ್ಕಾರ ಸಹಿಸುವುದಿಲ್ಲ.#Kannada
— CM of Karnataka (@CMofKarnataka) September 16, 2019
ಈ ಕುರಿತು ನಟ-ರಾಜಕಾರಣಿ ಕಮಲ್ ಹಾಸನ್ ಪ್ರತಿಕ್ರಿಯಿಸಿ, ಭಾರತ ಗಣತಂತ್ರವಾದಾಗಲೇ ವೈವಿಧ್ಯತೆಯಲ್ಲಿ ಏಖತೆಯಿಂದ ಕೂಡಿದೆ ಎಂದು ಪ್ರಮಾಣೀಕರಿಸಲಾಗಿದೆ. ಇದೀಗ ಯಾವುದೇ ಶಾ, ಸುಲ್ತಾನ್ ಅಥವಾ ಸಾಮ್ರಾಟ್ ಇದನ್ನು ಹುಸಿಗೊಳಿಸಬಾರದು ಎಂದು ಸೋಮವಾರ ಪ್ರತಿಕ್ರಿಯಿಸಿದ್ದರು.