ತಿರುವನಂತಪುರಂ: ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ (BJP-JDS Alliance) ಕೇರಳ ನಾಯಕರು ಒಪ್ಪಿಕೊಂಡಿದ್ದಾರೆ ಎಂಬುದಾಗಿ ನಾನು ಹೇಳಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು (HD Deve Gowda) ಸ್ಪಷ್ಟನೆ ನೀಡಿದ್ದಾರೆ.
There is some confusion about my statement on the CPM. My Communist friends do not seem to have followed what I said nor the context in which I said. I never said the CPM in Kerala supports the BJP-JDS alliance. I only said my party unit in Kerala is getting along with 1/2
— H D Deve Gowda (@H_D_Devegowda) October 20, 2023
Advertisement
ಕೇರಳ ನಾಯಕರು ಕರ್ನಾಟಕದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಗೆ ಸಹಮತ ಸೂಚಿಸಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿರುವುದಾಗಿ ಕೇಳಿಬಂದಿತ್ತು. ಆದ್ರೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ದೇವೇಗೌಡರ ಹೇಳಿಕೆ ಸುಳ್ಳು ಮತ್ತು ಅಸಂಬದ್ಧ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೇ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ದೇವೇಗೌಡರು ಬಿಜೆಪಿ-ಜೆಡಿಎಸ್ ಮೈತ್ರಿಗೆ ಕೇರಳ ನಾಯಕರು ಒಪ್ಪಿಕೊಂಡಿದ್ದಾರೆ ಎಂಬುದಾಗಿ ನಾನು ಹೇಳಿಲ್ಲವೆಂದು ಸ್ಪಷ್ಟನೆ ನೀಡಿದ್ದಾರೆ.
Advertisement
the LDF government as things within my party units outside Karnataka remain unresolved after our alliance with the BJP. I wish CPM leaders had chosen their words better or had sought clarification @cpimspeak @pinarayivijayan @bjp4india @sitaramyechury 2/2
— H D Deve Gowda (@H_D_Devegowda) October 20, 2023
Advertisement
ಸಿಪಿಎಂ ಕುರಿತ ನನ್ನ ಹೇಳಿಕೆಯ ಬಗ್ಗೆ ಕೆಲವು ಗೊಂದಲಗಳಿವೆ. ನನ್ನ ಕಮ್ಯುನಿಸ್ಟ್ ಸ್ನೇಹಿತರು ನಾನು ಹೇಳಿದ್ದನ್ನು ಅಥವಾ ನಾನು ಹೇಳಿದ ಸಂದರ್ಭವನ್ನು ತಪ್ಪಾಗಿ ಗ್ರಹಿಸಿದ್ದಾರೆ. ಕೇರಳದ CPM ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಬೆಂಬಲಿಸುತ್ತದೆ ಎಂದು ನಾನು ಹೇಳಿಲ್ಲ. ಕೇರಳದಲ್ಲಿ ನನ್ನ ಪಕ್ಷದ ಘಟಕವು 1/2 ರೊಂದಿಗೆ ಒಪ್ಪಿಕೊಂಡಿದೆ ಎಂದು ಹೇಳಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ದೇವೇಗೌಡರ ಹೇಳಿಕೆ ಸುಳ್ಳು: ಕೇರಳ ಸಿಎಂ
Advertisement
ಕೇರಳ ಸಿಎಂ ಹೇಳಿದ್ದೇನು?
ಪಿಣರಾಯಿ ವಿಜಯನ್ (Pinarayi Vijayan), ಬಿಜೆಪಿ-ಜೆಡಿಎಸ್ ಮೈತ್ರಿಗೆ ಕೇರಳ ನಾಯಕರು ಒಪ್ಪಿಕೊಂಡಿದ್ದಾರೆ ಎಂಬ ದೇವೇಗೌಡರ ಹೇಳಿಕೆ ಸುಳ್ಳು ಮತ್ತು ಅಸಂಬದ್ಧ. ಅವರು ತಮ್ಮ ರಾಜಕೀಯ ಮೇಲಾಟಗಳನ್ನು ಸಮರ್ಥಿಸಿಕೊಳ್ಳಲು ಸುಳ್ಳು ಹೇಳುತ್ತಿದ್ದಾರೆ. ದೇವೇಗೌಡರು ತಮ್ಮ ಪುತ್ರ ಕುಮಾರಸ್ವಾಮಿಗೆ ಮುಖ್ಯಮಂತ್ರಿ ಗಾದಿಯನ್ನು ಕೊಡಿಸಲು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ತಮ್ಮ ಪಕ್ಷದ ಸಿದ್ಧಾಂತಕ್ಕೆ ದ್ರೋಹ ಬಗೆದಿದ್ದಾರೆ ಎಂದು ಆರೋಪಿಸಿದ್ದರು. ಇದನ್ನೂ ಓದಿ: Cash for Query – ಪಾಸ್‌ವರ್ಡ್ ಶೇರ್ ಆಗಿತ್ತು: ಸಂಸದೆ ಮೊಯಿತ್ರಾ ಜೊತೆ ನಂಟು ಒಪ್ಪಿಕೊಂಡ ಉದ್ಯಮಿ
ಕೇರಳದಲ್ಲಿ ಸಿಪಿಐ(ಎಂ) ನೇತೃತ್ವದ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್‌ಗೆ (ಎಲ್‌ಡಿಎಫ್) ಜೆಡಿಎಸ್ ದೀರ್ಘಕಾಲದ ಮಿತ್ರಪಕ್ಷವಾಗಿದೆ. ರಾಷ್ಟ್ರೀಯ ನಾಯಕತ್ವವು ವಿಭಿನ್ನ ನಿಲುವು ಪ್ರಕಟಿಸಿದಾಗಲೂ ಎಲ್‌ಡಿಎಫ್‌ಗೆ ತಮ್ಮ ಬದ್ಧತೆ ಉಳಿಸಿಕೊಂಡಿದೆ. ಆದ್ರೆ ಜೆಡಿಎಸ್‌ನ ಆಂತರಿಕ ವಿಚಾರದಲ್ಲಿ ತಾನಾಗಲಿ, ಸಿಪಿಐ(ಎಂ) ಆಗಲಿ ಹಸ್ತಕ್ಷೇಪ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಇದನ್ನೂ ಓದಿ: ಮೈಸೂರಿನಲ್ಲೂ ಮೆಟ್ರೋ ವಿಸ್ತರಣೆ, ರಾಜ್ಯಕ್ಕೆ 1200 ಎಲೆಕ್ಟ್ರಿಕ್ ಬಸ್: ಮೋದಿ ಭರವಸೆ
Web Stories