ನವದೆಹಲಿ: ಡೇರಾ ಸಚ್ಛಾಸೌಧದ (Dera Sacha Sauda) ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ಸಿಂಗ್ಗೆ (Gurmeet Ram Rahim) 40 ದಿನಗಳ ಪೆರೋಲ್ ಮಂಜೂರಾಗಿದ್ದು, ಜೈಲಿನಿಂದ ಹೊರಬಂದು ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ.
ಆಶ್ರಮದಲ್ಲಿ ಇಬ್ಬರು ಮಹಿಳಾ ಅನುಯಾಯಿಗಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರ್ಮಿತ್ ಸಿಂಗ್ಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಸಿಂಗ್ಗೆ ಮೂರು ದಿನಗಳ ಹಿಂದೆ ಪೆರೋಲ್ ಮಂಜೂರು ಮಾಡಲಾಗಿತ್ತು. ಇದನ್ನೂ ಓದಿ: ಹೈದರಾಬಾದ್ ವಿವಿ ಕ್ಯಾಂಪಸ್ನಲ್ಲಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ – ತನಿಖೆಗೆ ಆದೇಶ
Advertisement
Advertisement
ಜಾಮೀನು ಅರ್ಜಿಯಲ್ಲಿ ರಾಮ್ ರಹೀಮ್, ಜನವರಿ 25 ರಂದು ಮಾಜಿ ಡೇರಾ ಮುಖ್ಯಸ್ಥ ಷಾ ಸತ್ನಾಮ್ ಸಿಂಗ್ ಅವರ ಜನ್ಮ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಅವಕಾಶಕ್ಕೆ ಕೋರಿದ್ದರು.
Advertisement
ಸಿಂಗ್ ಕೇಕ್ ಕತ್ತರಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. “ಐದು ವರ್ಷಗಳ ನಂತರ ಈ ರೀತಿ ಆಚರಿಸಲು ಅವಕಾಶ ಸಿಕ್ಕಿದೆ. ಹಾಗಾಗಿ ಕನಿಷ್ಠ ಐದು ಕೇಕ್ಗಳನ್ನಾದರೂ ಕತ್ತರಿಸಬೇಕು. ಇದು ಮೊದಲ ಕೇಕ್” ಎಂದು ವೀಡಿಯೋ ಸಿಂಗ್ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಸ್ಪೈಸ್ ಜೆಟ್ ಗಗನ ಸಖಿಯೊಂದಿಗೆ ಅಸಭ್ಯ ವರ್ತನೆ – ಪ್ರಯಾಣಿಕ ಅರೆಸ್ಟ್
Advertisement
ಸಿಂಗ್ ಕತ್ತಿಯಿಂದ ಕೇಕ್ ಕತ್ತರಿಸಿರುವುದು ಚರ್ಚೆಗೆ ಗ್ರಾಸವಾಗಿದೆ. ಶಸ್ತ್ರಾಸ್ತ್ರಗಳ ಕಾಯಿದೆಯ ಅಡಿಯಲ್ಲಿ ಶಸ್ತ್ರಾಸ್ತ್ರಗಳ ಸಾರ್ವಜನಿಕ ಪ್ರದರ್ಶನ (ಕತ್ತಿಯಿಂದ ಕೇಕ್ ಕತ್ತರಿಸುವುದು) ನಿಷೇಧಿಸಲಾಗಿದೆ.
ಕಳೆದ 14 ತಿಂಗಳಲ್ಲಿ ಇದು ನಾಲ್ಕನೇ ಬಾರಿ ಮತ್ತು ಮೂರು ತಿಂಗಳೊಳಗೆ ಎರಡನೇ ಬಾರಿಗೆ ರಾಮ್ ರಹೀಮ್ಗೆ ಪೆರೋಲ್ ನೀಡಲಾಗಿದೆ. ಇದಕ್ಕೂ ಮೊದಲು, ಹರಿಯಾಣ ಪಂಚಾಯತ್ ಚುನಾವಣೆ ಮತ್ತು ಆದಂಪುರ ವಿಧಾನಸಭಾ ಉಪಚುನಾವಣೆಗೆ ಮುಂಚಿತವಾಗಿ ಅವರನ್ನು ಅಕ್ಟೋಬರ್ 2022 ರಲ್ಲಿ 40 ದಿನಗಳ ಕಾಲ ಪೆರೋಲ್ ಮೇಲೆ ಬಿಡುಗಡೆ ಮಾಡಲಾಯಿತು. ಇದನ್ನೂ ಓದಿ: ಗಣರಾಜ್ಯೋತ್ಸವಕ್ಕೆ ಒಂದೇ ವಾರದಲ್ಲಿ ಕರ್ನಾಟಕದ ಟ್ಯಾಬ್ಲೋ ರೆಡಿ
ಇಬ್ಬರು ಮಹಿಳಾ ಅನುಯಾಯಿಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ 2017ರ ಆಗಸ್ಟ್ನಲ್ಲಿ ಪಂಚಕುಲದ ವಿಶೇಷ ಸಿಬಿಐ ನ್ಯಾಯಾಲಯ ಆತನಿಗೆ ಶಿಕ್ಷೆ ವಿಧಿಸಿತ್ತು. 2003 ರಲ್ಲಿ ಪಂಜಾಬ್ ಮತ್ತು ಹರಿಯಾಣದ ಹೈಕೋರ್ಟ್ ನೀಡಿದ ಆದೇಶದ ಮೇರೆಗೆ ಸಿಬಿಐ ಪ್ರಕರಣವನ್ನು ದಾಖಲಿಸಿಕೊಂಡಿತ್ತು. ಈ ಹಿಂದೆ ಕುರುಕ್ಷೇತ್ರದ ಪೊಲೀಸ್ ಠಾಣೆ ಸದರ್ನಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆಯನ್ನು ವಹಿಸಿಕೊಂಡಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k