ಬೆಂಗಳೂರು: ದಿನನಿತ್ಯ ಓಡಾಡುವ ಕಾರು ಬದಲಾಗಿರುವ ಕಾರಣ ಸೈಡ್ ಸ್ಟೆಪ್ ಇಲ್ಲದೆ ಕಾಲು ಜಾರಿ ಹಿಂದಕ್ಕೆ ಬೀಳಲು ಆಗಿದ್ದೆ. ಗಾಬರಿ ಪಡುವಂತಹದ್ದೇನಿಲ್ಲ, ನಾನು ಆರೋಗ್ಯವಾಗಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಟ್ವೀಟ್‍ನಲ್ಲಿ ತಿಳಿಸಿದ್ದಾರೆ.
ಈ ವಿಚಾರವನ್ನು ಅತಿ ರಂಜಿತವಾಗಿ ವರದಿ ಮಾಡಿ ಜನ ಗಾಬರಿ ಪಡುವಂತೆ ಮಾಡಬೇಡಿ ಎಂದು ಸಿದ್ದು ಸುದ್ದಿಗಾರರಿಗೆ ವಿನಂತಿ ಮಾಡಿದ್ದಾರೆ.
ಗಾಬರಿ ಪಡುವಂತಹದ್ದೇನಿಲ್ಲ, ಗಟ್ಟಿಮುಟ್ಟಾಗಿದ್ದೇನೆ.
ನಿತ್ಯ ಅಡ್ಡಾಡುವ ಕಾರು ಬದಲಾಗಿರುವ ಕಾರಣ ಸೈಡ್ ಸ್ಟೆಪ್ ಇಲ್ಲದ ಕಾರಿನಲ್ಲಿ ಕಾಲು ಜಾರಿ ಹಿಂದಕ್ಕೆ ಮುಗ್ಗರಿಸಿದ್ದೆ.
ಈಗ ಆರಾಮಾಗಿದ್ದೇನೆ.
ಇದನ್ನು ಅತಿರಂಜಿತ ರೀತಿಯಲ್ಲಿ ವರದಿಮಾಡಿ ಜನ ಗಾಬರಿ ಪಡುವಂತೆ ಮಾಡಬೇಡಿ ಎಂದು ಮಾಧ್ಯಮ ಮಿತ್ರರಲ್ಲಿ ವಿನಂತಿ.
— Siddaramaiah (@siddaramaiah) April 29, 2023
ವಿಧಾನಸಭಾ ಚುನಾವಣೆ (Karnataka Election) ಹಿನ್ನೆಲೆ ಕುಡ್ಲಿಗಿಯಲ್ಲಿ (Kudligi) ಕಾಂಗ್ರೆಸ್ (Congress) ಅಭ್ಯರ್ಥಿ ಡಾ.ಎನ್.ಟಿ ಶ್ರೀನಿವಾಸ್ ಅವರ ಪರವಾಗಿ ಪ್ರಚಾರಕ್ಕೆ ಶನಿವಾರ ಹೆಲಿಕಾಪ್ಟರ್ ಮೂಲಕ ಆಗಮಿಸಿದ್ದರು. ಈ ವೇಳೆ ಅವರು ಕಾರು ಹತ್ತುವಾಗ ಕುಸಿದು ಬಿದ್ದರು. ಅಲ್ಲೇ ಇದ್ದ ವೈದ್ಯರು ಅವರ ಕೈಹಿಡಿದು ಕಾರಿನಲ್ಲಿ ಕೂರಿಸಿದ್ದರು.
ಬಳಿಕ ಕಾರಿನೊಳಗೆ ಕೂರಿಸಿ ಗ್ಲೂಕೋಸ್ ನೀಡಿದರು. ಗ್ಲೂಕೋಸ್ ಕುಡಿದ ಬಳಿಕ ಚೇತರಿಸಿಕೊಂಡ ಸಿದ್ದರಾಮಯ್ಯ ಜನರತ್ತ ಕೈ ಬೀಸಿ ಕಾರ್ಯಕ್ರಮಕ್ಕೆ ತೆರಳಿದ್ದರು.