– ನನ್ನ ಮಾತಿಗೆ ಈಗಲೂ ನಾನು ಬದ್ಧ
– ಬಿಜೆಪಿಯವರು ನನ್ನ ಮಾತನ್ನು ತಿರುಚಿದ್ದಾರೆ
ನವದೆಹಲಿ: ಪ್ರತ್ಯೇಕ ರಾಷ್ಟ್ರದ ಕೂಗು ಎತ್ತುತ್ತಿದ್ದಂತೆಯೇ ಸಂಸದ ಡಿಕೆ ಸುರೇಶ್ (DK Suresh) ಭಾರೀ ಚರ್ಚೆಗೀಡಾದರು. ಈ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಸಂಸದರು ನನ್ನ ಹೇಳಿಕೆಗೆ ಈಗಲೂ ನಾನು ಬದ್ಧ ಎಂದಿದ್ದಾರೆ.
A Proud Indian & proud Kannadiga!
ದಕ್ಷಿಣ ರಾಜ್ಯಗಳು ಅದರಲ್ಲಿಯೂ ವಿಶೇಷವಾಗಿ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತುವುದು ನನ್ನ ಧರ್ಮ.
ಕೇಂದ್ರ ಸರ್ಕಾರ ರಾಜ್ಯದ ಮೇಲೆ ತೋರಿಸುತ್ತಿರುವ ಮಲತಾಯಿ ಧೋರಣೆಯನ್ನು ಪ್ರಶ್ನೆ ಮಾಡುವ ಹಕ್ಕು ಎಲ್ಲರಿಗೂ ಇದೆ. 1/4#Budget2024
— DK Suresh (@DKSureshINC) February 1, 2024
Advertisement
ದೆಹಲಿಯಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನಾನು ಭಾರತೀಯ, ನಾನೊಬ್ಬ ಕನ್ನಡಿಗ. ಕರ್ನಾಟಕಕ್ಕೆ ಆದ ಅನ್ಯಾಯ ಪ್ರಶ್ನಿಸುವ ಹಕ್ಕು ನನಗೆ ಇದೆ. ಸಂಸತ್‍ನಲ್ಲೂ ಪ್ರಶ್ನಿಸುತ್ತೇನೆ, ಹೊರಗೂ ಮಾತನಾಡುತ್ತೇನೆ. ದೇಶದ್ರೋಹಿ ಎನ್ನುವವರು ರಾಜ್ಯಕ್ಕೆ ತಂದ ಅನುದಾನ ಎಷ್ಟು ಎಂದು ತೋರಿಸಲಿ ಅಂತಾ ಸವಾಲೆಸೆದರು.
Advertisement
ಈ ಅನ್ಯಾಯ ಹೀಗೆ ಮುಂದುವರೆದರೆ, ಪ್ರತ್ಯೇಕದ ಕೂಗು ಈಗಾಗಲೇ ಎಲ್ಲ ಕಡೆ ಬಂದಿದೆ ಎಂದು ನಾನು ಹೇಳಿದ್ದೇನೆ.
ಭಾರತೀಯ ಜನತಾ ಪಕ್ಷದವರು ನನ್ನ ಹೇಳಿಕೆಯನ್ನು ತಿರುಚುವುದರಲ್ಲಿ ನಿಸ್ಸೀಮರು.
ನಮ್ಮ ರಾಜ್ಯ ಕೇಂದ್ರದ ಬೊಕ್ಕಸಕ್ಕೆ ಅತಿ ಹೆಚ್ಚು ಕೊಡುಗೆ ನೀಡುವ ರಾಜ್ಯಗಳಲ್ಲಿ ಒಂದಾಗಿದೆ. ಅದಕ್ಕೆ ಪ್ರತಿಯಾಗಿ ನಾವು ಪಡೆದುಕೊಂಡ ಅನುದಾನ, 2/4
— DK Suresh (@DKSureshINC) February 1, 2024
Advertisement
ನೆಲ, ಜಲ, ಭಾಷೆ ಬಗ್ಗೆ ಧ್ವನಿ ಎತ್ತಿದ್ದೇನೆ. ನಮ್ಮನ್ನು ಅತಂತ್ರ ಸ್ಥಿತಿಯಲ್ಲಿ ಇಟ್ಟಿದ್ದಾರೆ. ಕರ್ನಾಟಕ ಕೇಂದ್ರಕ್ಕೆ ಕೊಡುವುದು ಸಿಂಹಪಾಲು, ನಮ್ಮ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ. ಅವರಿಗೆ ಬೇಕಾದ ರಾಜ್ಯಗಳಿಗೆ ಹೆಚ್ಚು ಹಣ ನೀಡುತ್ತಿದ್ದಾರೆ. ಜನರ ಭಾವನೆ ಏನು ಅನ್ನೋದನ್ನು ಹೇಳಿದ್ದೇನೆ. ಬಿಜೆಪಿಯವರು ದೇಶಕ್ಕೆ ಏನು ಕೊಟ್ಟಿದ್ದೇವೆ, ಬಜೆಟ್‍ನಲ್ಲಿ ಏನಿದೆ ಅನೋದನ್ನು ಹೇಳುತ್ತಿಲ್ಲ. ಆದರೆ ನನ್ನ ಹೇಳಿಕೆಯನ್ನು ತಿರುಚಿ ಬಿಜೆಪಿಯವರು ಮಾತಾಡ್ತಿದ್ದಾರೆ ಎಂದರು. ಇದನ್ನೂ ಓದಿ: ಪ್ರತ್ಯೇಕ ರಾಷ್ಟ್ರದ ಕೂಗು ಎತ್ತಿದ ಸಂಸದ ಡಿಕೆ ಸುರೇಶ್
Advertisement
ತಮಿಳುನಾಡಿನಲ್ಲಿ ಪ್ರತ್ಯೇಕ ದೇಶದ ಕೂಗು ಶುರುವಾಗಿದೆ. ಕರ್ನಾಟಕದಲ್ಲಿ ಶುರುವಾಗುವುದಕ್ಕೂ ಮುನ್ನ ಬಿಜೆಪಿ ಎಚ್ಚೆತ್ತುಕೊಳ್ಳಬೇಕು. ನನ್ನ ವಿರುದ್ಧ ಬಿಜೆಪಿ ದೂರು ನೀಡಿದರೂ ಹೆದರುವುದಿಲ್ಲ. ಕನ್ನಡದ ಅಸ್ಮಿತೆಗಾಗಿ ಎಲ್ಲದಕ್ಕೂ ಸಿದ್ಧ. ಈ ವಿಚಾರದಲ್ಲಿ ಬಿಜೆಪಿ ಬೇಕಾದರೆ ರಾಜಕೀಯ ಮಾಡಿಕೊಳ್ಳಲಿ. ನಾನು ಕರ್ನಾಟಕದ ಪರವಾಗಿ ಮಾತನಾಡಿದ್ದೇನೆ ಅಷ್ಟೇ ಎಂದು ಸ್ಪಷ್ಟನೆ ನೀಡಿದರು.
ನಮ್ಮ ನಾಡಿನ ಭಾಷೆ ಉಳಿಸಿಕೊಳ್ಳಲು ನಾಮಫಲಕಗಳನ್ನು ಕನ್ನಡದಲ್ಲಿ ಕಡ್ಡಾಯ ಮಾಡಿದರೆ, ಅದನ್ನು ಬದಲಾಯಿಸಲು ಸುಗ್ರೀವಾಜ್ಞೆಗಳನ್ನೂ ಇವರು ರಾತ್ರೋ ರಾತ್ರಿ ತರುತ್ತಾರೆ.
ದೇಶಭಕ್ತಿ, ಐಕ್ಯತೆ ಮತ್ತು ಸಮಗ್ರತೆ ಬಗ್ಗೆ ಬೋಗಸ್ ಜನತಾ ಪಾರ್ಟಿಯವರಿಂದ ಕಲಿಯುವ ದುಸ್ಥಿತಿ ನಮಗೆ ಬಂದಿಲ್ಲ, ಬರುವುದೂ ಇಲ್ಲ.
ಜೈ ಹಿಂದ್! ಜೈ ಕರ್ನಾಟಕ ಮಾತೆ!#DKSuresh
— DK Suresh (@DKSureshINC) February 1, 2024
ಸಂಸದರು ಹೇಳಿದ್ದೇನು..?: ಇಂದಿನ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ್ದ ಡಿಕೆ ಸುರೇಶ್, ಇಂದಿನ ಬಜೆಟ್‍ನಲ್ಲಿ ಹೊಸತೇನು ಇಲ್ಲ. ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ. ಇಂದು ನಮ್ಮ ಗ್ಯಾರಂಟಿಗಳನ್ನು ವಿರೋಧ ಮಾಡಿದಂತವರು ಗ್ಯಾರಂಟಿ ಹೆಸರಿನಲ್ಲಿ ಚುನಾವಣೆಗೆ ಹೊರಟಿದ್ದಾರೆ. ದಕ್ಷಿಣ ಭಾರತದ ಹಣವನ್ನ ಉತ್ತರ ಭಾರತಕ್ಕೆ ಬಿಡುತ್ತಿದ್ದಾರೆ. ಇದರಿಂದ ನಮಗೆ ಆರ್ಥಿಕ ತೊಂದರೆಯಾಗುತ್ತಿದೆ. ಹೀಗೆ ಮುಂದುವರಿದರೆ ಪ್ರತ್ಯೇಕ ದೇಶ ಕೇಳಬೇಕಾಗುತ್ತದೆ ಎಂದು ಹೇಳಿದ್ದರು. ಸಂಸದರ ಈ ಹೇಳಿಕೆ ಭಾರೀ ಚರ್ಚೆಗೀಡಾಗಿದ್ದು, ಬಿಜೆಪಿಯವರು ಡಿಕೆ ಸುರೇಶ್ ವಿರುದ್ಧ ಕಿಡಿಕಾರಿದ್ದಾರೆ.