ಮೈಸೂರು: ಮುಡಾ (MUDA Scam) ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಹೈಕೋರ್ಟ್ ನಕಾರ ಹಿನ್ನೆಲೆಯಲ್ಲಿ ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುವ ನಿರ್ಧಾರದಿಂದ ದೂರುದಾರ ಸ್ನೇಹಮಹಿ ಕೃಷ್ಣ (Snehamayi Krishna) ಹಿಂದೆ ಸರಿದಿದ್ದಾರೆ. ಜನ ಪ್ರತಿನಿಧಿ ನ್ಯಾಯಾಲಯದಲ್ಲಿ ತಾನೇ ಕೇಸ್ ವಾದಿಸಲು ಸ್ನೇಹಮಹಿ ಕೃಷ್ಣ ಮುಂದಾಗಿದ್ದಾರೆ.
ಈ ಬಗ್ಗೆ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಉಚ್ಚ ನ್ಯಾಯಾಲಯವು ನನ್ನ ಅರ್ಜಿಗೆ ಸಂಬಂಧಿಸಿದಂತೆ ನೀಡಿರುವ ತೀರ್ಪಿನ ಅಂಶಗಳನ್ನು ಓದಿದ್ದೇನೆ. ನನ್ನ ಬಳಿ ಇರುವ ಸಾಕ್ಷ್ಯಾಧಾರಗಳನ್ನು ಮತ್ತೊಮ್ಮೆ ಪರಿಶೀಲನೆ ನಡೆಸಿದ್ದೇನೆ. ನನ್ನ ಇದುವರೆಗಿನ ಕಾನೂನು ಹೋರಾಟದ ಅನುಭವವನ್ನು ಆಧರಿಸಿ ಈ ನಿರ್ಧಾರಕ್ಕೆ ಬಂದಿದ್ದೇನೆ. ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಲು ಸದ್ಯ ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲ್ಲ. ಲೋಕಾಯುಕ್ತ ಅಧಿಕಾರಿಗಳು ಏನೇ ವರದಿ ಸಲ್ಲಿಸಿದರೂ ಸರಿ. ನನ್ನ ಬಳಿ ಇರುವ ಸಾಕ್ಷ್ಯಾಧಾರಗಳನ್ನು ಆಧರಿಸಿ ಹೋರಾಡುತ್ತೇನೆ ಎಂದರು. ಇದನ್ನೂ ಓದಿ: Bengaluru | ಏರ್ ಶೋ ಹಿನ್ನೆಲೆ ಟ್ರಾಫಿಕ್ ಜಾಮ್ ಬಿಸಿ – ಕಿಲೋಮೀಟರ್‌ಗಟ್ಟಲೆ ನಿಂತ ವಾಹನಗಳು
Advertisement
Advertisement
ನಾನು ಮಾಡಿರುವ ಆರೋಪವನ್ನು ಸಾಬೀತು ಪಡಿಸಿ, ಆರೋಪಿತರಿಗೆ ಶಿಕ್ಷೆ ಕೊಡಿಸಬಹುದು ಎಂಬ ವಿಶ್ವಾಸ ಮೂಡಿದೆ. ಖುದ್ದಾಗಿ ನಾನೇ ಮಾನ್ಯ ನ್ಯಾಯಾಲಯಕ್ಕೆ ಸಾಕ್ಷಾಧಾರಗಳನ್ನು ಒದಗಿಸಿ, ವಾದ ಮಂಡನೆ ಮಾಡುವೆ. ನಾನು ಓದಿರುವುದು 10ನೇ ತರಗತಿ. ಜ್ಞಾನದ ಮುಂದೆ ಯಾವುದೂ ಇಲ್ಲ. ನಾನು ಪ್ರತಿನಿತ್ಯ ಪುಸ್ತಕಗಳನ್ನ ಓದಿ ಸಾಕಷ್ಟು ತಿಳಿದುಕೊಂಡಿದ್ದೇನೆ. ನಾನು ಮಾಡಿರುವ ಆರೋಪವನ್ನು ಸಾಬೀತು ಪಡಿಸಿ, ಆದಷ್ಟು ಬೇಗ ಆರೋಪಿಗಳಿಗೆ ಶಿಕ್ಷೆ ಕೊಡಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ದೇಶದ ವಿವಿಧ ನಗರಗಳ ಮೆಟ್ರೋ ದರಕ್ಕಿಂತಲೂ ಬೆಂಗಳೂರು ಮೆಟ್ರೋ ದರವೇ ದುಬಾರಿ!
Advertisement