ಬೆಂಗಳೂರು: ಆದಾಯ ತೆರಿಗೆ ವಂಚನೆ ಪ್ರಕರಣ ಕುರಿತು ಜಲಸಂಪನ್ಮೂಲ ಹಾಗೂ ವೈದ್ಯಕೀಯ ಸಚಿವ ಡಿ.ಕೆ ಶಿವಕುಮಾರ್ ಅವರಿಗೆ ಜೈಲಾ ಅಥವಾ ಬೇಲಾ ಎಂಬುದು ಇಂದು ನಿರ್ಧಾರವಾಗುತ್ತದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆಶಿ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಕೋರ್ಟ್ ಗೆ ಹಾಜರಾಗಲಿದ್ದಾರೆ. ಆದಾಯ ತೆರಿಗೆ ವಂಚನೆ ಆರೋಪದಡಿ ಐಟಿ, ಡಿಕೆಶಿ ವಿರುದ್ಧ 4ನೇ ದೂರು ದಾಖಲಿಸಿತ್ತು. ಈ ಹಿನ್ನೆಲೆಯಲ್ಲಿ ಆರ್ಥಿಕ ಅಪರಾಧಗಳ ನ್ಯಾಯಾಧಿಕರಣ ಡಿಕೆಶಿಗೆ ಸಮನ್ಸ್ ನೀಡಿತ್ತು. ಹೀಗಾಗಿ ಕೋರ್ಟ್ ಸಮನ್ಸ್ ನೀಡಿರೋ ಹಿನ್ನೆಲೆಯಲ್ಲಿ ಅವರು ಇಂದು ಕೋರ್ಟ್ ಗೆ ಹಾಜರಾಗಲೇಬೇಕಾಗಿದೆ. ಕೋರ್ಟ್ ಗೆ ಹಾಜರಾಗಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ. ಇದನ್ನೂ ಓದಿ:ರಾಜ್ಯದ ಪವರ್ ಫುಲ್ ಸಚಿವರ ಗುಟ್ಟು ರಟ್ಟು – ಐಟಿ ಇಲಾಖೆ ಡಿಕೆಶಿ ಮೇಲೆ ಕೇಸ್ ಹಾಕಿದ್ದು ಯಾಕೆ?
ಡಿಕೆಶಿ ಜೊತೆ ಅವರ ಆಪ್ತರಾದ ಸುನಿಲ್ ಕುಮಾರ್ ಶರ್ಮ, ಆಂಜನೇಯ ಹನುಮಂತಯ್ಯಗೂ ಕೋರ್ಟ್ ಸಮನ್ಸ್ ನೀಡಿತ್ತು. ಹೀಗಾಗಿ ಎಲ್ಲರೂ ಕೋರ್ಟ್ ಗೆ ಹಾಜರಾಗಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ ಎಂಬುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ಐಟಿಯ 108 ಪ್ರಶ್ನೆಗಳಿಗೆ ಉತ್ತರಿಸಿದ ಡಿಕೆಶಿ: ಚಿಂದಿಯಾದ ಪತ್ರದಲ್ಲಿ ಏನಿತ್ತು?