ಕ್ಯಾನ್ಬೆರಾ: ಟಿ20 ವಿಶ್ವಕಪ್ (T20 WorldCup) ಅಭ್ಯಾಸ ಪಂದ್ಯದಲ್ಲಿ ಅಬ್ಬರಿಸುತ್ತಿದ್ದ ಟೀಂ ಇಂಡಿಯಾ (Team India) ಆರಂಭಿಕ ಕನ್ನಡಿಗೆ ಕೆ.ಎಲ್.ರಾಹುಲ್ (KL Rahul) ಇದೀಗ ಫಾರ್ಮ್ ಕಳೆದುಕೊಂಡಿದ್ದು, ಬಾರೀ ಟೀಕೆಗಳಿಗೆ ಗುರಿಯಾಗಿದ್ದಾರೆ.
ಕಳೆದ ಮೂರು ಪಂದ್ಯಗಳಲ್ಲಿ ಕೇವಲ 34 ಎಸೆತಗಳನ್ನು ಎದುರಿಸಿರುವ ರಾಹುಲ್ 22 ರನ್‌ಗಳನ್ನಷ್ಟೇ ಗಳಿಸಿದ್ದಾರೆ. ರಾಹುಲ್ ಕಳಪೆ ಪ್ರದರ್ಶನ ನೀಡಿದ್ದಕ್ಕೆ ಟೀಂ ಇಂಡಿಯಾದ ಅಭಿಮಾನಿಗಳು (Team India Fans) ರಾಹುಲ್ ವಿರುದ್ಧ ಮುಗಿಬಿದ್ದಿದ್ದಾರೆ. ಆದರೆ ಕೆ.ಎಲ್.ರಾಹುಲ್ ಅವರಿಗೆ ಬೆಂಬಲ ವ್ಯಕ್ತಪಡಿಸಿರುವ ಟೀಂ ಇಂಡಿಯಾ ಕೋಚ್ ರಾಹುಲ್ ಡ್ರಾವಿಡ್ (Rahul Dravid) ಸಂದರ್ಶನವೊಂದರಲ್ಲಿ ಮನಬಿಚ್ಚಿ ಮಾತನಾಡಿದ್ದಾರೆ. ಇದನ್ನೂ ಓದಿ: ವಿಶ್ವಕಪ್ ಗೆಲ್ಲಲು ಭಾರತ ಬಂದಿದೆ, ನಾವಲ್ಲ – ಭಾರತವನ್ನು ಸೋಲಿಸುತ್ತೇವೆ ಎಂದ ಹಸನ್
Advertisement
Advertisement
`ನನ್ನ ಪ್ರಕಾರ ಕೆ.ಎಲ್ ರಾಹುಲ್ (KL Rahul) ಅವರೊಬ್ಬ ಅತ್ಯದ್ಭುತ ಕ್ರಿಕೆಟಿಗ. ಅವರು ಈಗಾಗಲೇ ತಮ್ಮ ಸಾಮರ್ಥ್ಯವೇನು ಎಂಬುದನ್ನು ಸಾಬೀತು ಮಾಡಿದ್ದಾರೆ. ಅವರು ತುಂಬಾ ಚೆನ್ನಾಗಿ ಆಡಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ (T20 Cricket) ಈ ರೀತಿ ಆಗುವುದು ಸಹಜ, ಏಕೆಂದರೆ ಅಗ್ರಕ್ರಮಾಂಕದ ಬ್ಯಾಟರ್‌ಗಳ ಸವಾಲು ಸುಲಭವಾಗಿರುವುದಿಲ್ಲ. ಈ ಟೂರ್ನಿಯು ಸಾಕಷ್ಟು ಸವಾಲಿನಿಂದ ಕೂಡಿದೆ. ಅವರು ಅಭ್ಯಾಸ ಪಂದ್ಯದಲ್ಲಿ ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್ ಅವರಂತಹ ಬೌಲರ್‌ಗಳೆದುರು ಅದ್ಭುತ ಆಟವಾಡಿದ್ದಾರೆ. ಅಭ್ಯಾಸ ಪಂದ್ಯದಲ್ಲಿ 60-70 ರನ್ ಬಾರಿಸಿದ್ದರು. ಮುಂದಿನ ಕೆಲ ಪಂದ್ಯಗಳಲ್ಲಿ ಅವರು ಫಾರ್ಮ್‌ಗೆ ಮರಳುವ ವಿಶ್ವಾಸವಿದೆ ಎಂದು ರಾಹುಲ್ ದ್ರಾವಿಡ್ ಹೇಳಿದ್ದಾರೆ. ಇದನ್ನೂ ಓದಿ: ನಾನ್ ಸ್ಟ್ರೈಕರ್ ರನೌಟ್‍ನಿಂದ ಪಾರಾಗಲು ಹೊಸ ಐಡಿಯಾ ಹುಡುಕಿದ ಗ್ಲೆನ್ ಫಿಲಿಪ್ಸ್
Advertisement
Advertisement
ನಮಗೆ ಅವರ ಸಾಮರ್ಥ್ಯವೇನು ಅನ್ನೋದರ ಅರಿವಿದೆ. ಈ ರೀತಿಯ ವಾತಾವರಣಕ್ಕೆ ಅವರು ತುಂಬಾ ಚೆನ್ನಾಗಿ ಹೊಂದಿಕೊಳ್ಳುತ್ತಾರೆ. ಅವರು ಫಾರ್ಮ್‌ಗೆ ಬಂದು ಅಬ್ಬರಿಸೋದನ್ನ ಎದುರು ನೋಡ್ತಿದ್ದೇವೆ. ಮುಂದಿನ ದಿನಗಳಲ್ಲಿ ರಾಹುಲ್ ಅಬ್ಬರಿಸೋದನ್ನ ನೀವು ನೋಡ್ತಿರಾ ಎಂದು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.
ಕೆ.ಎಲ್ ರಾಹುಲ್ ಬಗ್ಗೆ ಹೊರಗಡೆ ಏನು ಮಾತನಾಡುತ್ತಾರೆಂಬ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ನಮ್ಮ ಆಟಗಾರರ ಬಗ್ಗೆ ನಮಗೆ ನಂಬಿಕೆ ಇದೆ. ನಮ್ಮ ಮನಸಿನಲ್ಲೂ ಅನೇಕ ಉಪಾಯಗಳಿವೆ. ಆಟಗಾರ ಎಂದ ಮೇಲೆ ಏರಿಳಿತಗಳು ಇದ್ದೇ ಇರುತ್ತವೆ ಎಂಬುದನ್ನು ನಾವು ಅರ್ಥ ಮಾಡಿಕೊಂಡಿದ್ದೇವೆ. ಎಲ್ಲಾ ಆಟಗಾರರ ಗುಣಮಟ್ಟದ ಬಗ್ಗೆ ನಮಗೆ ತಿಳಿದಿದೆ. ಹಾಗಾಗಿ ಎಲ್ಲರನ್ನೂ ಬೆಂಬಲಿಸುತ್ತೇವೆ. ಹಾಗೆಯೇ ಇಂತಹ ಪರಿಸ್ತಿತಿಯಲ್ಲಿ ರಾಹುಲ್‌ಗೆ ಸ್ವಲ್ಪ ವಿರಾಮ ನೀಡುತ್ತೇವೆ ಎಂದು ಹೇಳಿದ್ದಾರೆ.