ಬೆಂಗಳೂರು: ಧರ್ಮಸ್ಥಳ (Dharmasthala) ಮೂಲದ ವಿದ್ಯಾರ್ಥಿನಿ ಆಕಾಂಕ್ಷ (Akanksha) ಪಂಜಾಬ್ ನಲ್ಲಿ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ. ಆಕಾಂಕ್ಷ ನಿಗೂಢ ಸಾವಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸೂಕ್ತ ತನಿಖೆ ನಡೆಸುಂತೆ ನಾನು ಪಂಜಾಬ್ (Punjab) ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ತಿಳಿಸಿದ್ದಾರೆ.
ಆಕಾಂಕ್ಷ ಸಾವಿನ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಇದೊಂದು ಅಸಹಜ ಸಾವು ಎಂಬುದು ಮೇಲ್ನೋಟಕ್ಕೆ ಎದ್ದು ಕಾಣುತ್ತದೆ. ಉಪನ್ಯಾಸಕ ಮ್ಯಾಥ್ಯೂ ಅವರ ಕಿರುಕುಳದಿಂದ ಆಕಾಂಕ್ಷ ಸಾವಿಗೀಡಾಗಿದ್ದಾರೆ ಎಂದು ಅವರ ಕುಟುಂಬ ವರ್ಗದವರು ಆರೋಪಿಸಿದ್ದಾರೆ. ಪ್ರಕರಣ ಕುರಿತು ನಾನು ರಾಜ್ಯ ಮುಖ್ಯಕಾರ್ಯದರ್ಶಿಯವರೊಂದಿಗೆ ಚರ್ಚೆ ನಡೆಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಏರೋಸ್ಪೇಸ್ ಎಂಜಿನಿಯರ್ ಸಾವು ಕೇಸ್‌ಗೆ ಟ್ವಿಸ್ಟ್ – 2 ಮಕ್ಕಳ ತಂದೆಯೊಂದಿಗೆ ಪ್ರೇಮ ವೈಫಲ್ಯ
ಧರ್ಮಸ್ಥಳ ಮೂಲದ ವಿದ್ಯಾರ್ಥಿನಿ ಆಕಾಂಕ್ಷ ಪಂಜಾಬ್ ನಲ್ಲಿ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ. ಇದೊಂದು ಅಸಹಜ ಸಾವು ಎಂಬುದು ಮೇಲ್ನೋಟಕ್ಕೆ ಎದ್ದು ಕಾಣುತ್ತದೆ. ಉಪನ್ಯಾಸಕ ಮ್ಯಾಥ್ಯೂ ಅವರ ಕಿರುಕುಳದಿಂದ ಆಕಾಂಕ್ಷ ಸಾವಿಗೀಡಾಗಿದ್ದಾರೆ ಎಂದು ಅವರ ಕುಟುಂಬ ವರ್ಗದವರು ಆರೋಪಿಸಿದ್ದಾರೆ. ಆಕಾಂಕ್ಷ ನಿಗೂಡ ಸಾವಿಗೆ ನ್ಯಾಯ ಒದಗಿಸುವ…
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) May 19, 2025
ಪಂಜಾಬ್ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಆಕಾಂಕ್ಷ ಮೃತದೇಹವನ್ನು ಕುಟುಂಬ ವರ್ಗದವರಿಗೆ ಹಸ್ತಾಂತರಿಸುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಸೂಚನೆ ನೀಡಿದ್ದೇನೆ. ಅಲ್ಲದೇ ಆಕಾಂಕ್ಷ ನಿಗೂಡ ಸಾವಿನ ಕುರಿತು ಸೂಕ್ತ ತನಿಖೆ ನಡೆಸುವ ನಿಟ್ಟಿನಲ್ಲಿ ಪಂಜಾಬ್ ಸರ್ಕಾರದ ಮುಖ್ಯಕಾರ್ಯದರ್ಶಿ ಅವರೊಂದಿಗೆ ಮಾತನಾಡುವಂತೆ ಸೂಚಿಸಿದ್ದೇನೆ. ಈ ನಿಟ್ಟಿನಲ್ಲಿ ಪಂಜಾಬ್ ಸರ್ಕಾರದ ಮುಖ್ಯ ಕಾರ್ಯದರ್ಶಿಯವರೊಂದಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಚರ್ಚೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.
ಪಂಜಾಬ್‌ನ ಜಲಂಧರ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಆಕಾಂಕ್ಷ ಅವರ ಕುಟುಂಬದ ಬೆಂಬಲಕ್ಕೆ ರಾಜ್ಯ ಸರ್ಕಾರ ನಿಲ್ಲಲಿದ್ದು, ಸರ್ಕಾರದಿಂದ ಅಗತ್ಯ ಸಹಕಾರ ಕಲ್ಪಿಸಲಾಗುವುದು ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.
ಏನಿದು ಪ್ರಕರಣ?
ಧರ್ಮಸ್ಥಳದ ಬೊಳಿಯೂರು ನಿವಾಸಿ ಆಕಾಂಕ್ಷ ಎಸ್ ನಾಯರ್ 6 ತಿಂಗಳ ಹಿಂದೆ ದೆಹಲಿಯ ಸ್ಪೈಸ್ ಜೆಟ್ ಏರೋಸ್ಪೇಸ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದಳು. ಹೆಚ್ಚಿನ ತರಬೇತಿಗೆ ಜರ್ಮನಿಗೆ ತೆರಳಲು ತಯಾರಿ ನಡೆಡಸಿದ್ದ ಆಕಾಂಕ್ಷ ಕೆಲವು ಶೈಕ್ಷಣಿಕ ದಾಖಲೆಗಳನ್ನು ಶುಕ್ರವಾರ ಪಂಜಾಬ್‌ನ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಗೆ ತೆರಳಿದ್ದಳು. ಬಳಿಕ ಕಾಲೇಜಿನ ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಳು. ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪ್ರೇಮ ವೈಫಲ್ಯದಿಂದ (Love Failure) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಈ ಸಂಬಂಧ ಆತ್ಮಹತ್ಯೆಗೆ ಪ್ರೇರಣೆ ಆರೋಪದ ಮೇಲೆ ಯುನಿವರ್ಸಿಟಿಯ ಪ್ರೊಫೆಸರ್ ಮ್ಯಾಥ್ಯೂ ವಿರುದ್ಧ ಪಂಜಾಬ್‌ನ ಜಲಂಧರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಾಲೇಜಿನ ನಾಲ್ಕನೇ ಮಹಡಿಯಿಂದ ಬಿದ್ದು ಏರೋಸ್ಪೇಸ್ ಎಂಜಿನಿಯರ್ ಸಾವು