ಬೆಂಗಳೂರು: ಹಿರೇಕೆರೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಸಿ ಪಾಟೀಲ್ ಅವರು ಇದೀಗ ಸಚಿವ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಗಮವೂ ಬೇಡ, ಮಂಡಳಿಗಳೂ ಬೇಡ. ಕೊಡುವುದಾದ್ರೆ ಮಂತ್ರಿ ಸ್ಥಾನ ಕೊಡಲಿ. ಇಲ್ಲವೆಂದಲ್ಲಿ ಪಕ್ಷದ ಕಾರ್ಯಕರ್ತರಾಗಿ ಕೆಲಸ ಮಾಡುತ್ತೇನೆ ಅಂತ ಹೇಳಿದ್ದಾರೆ.
Advertisement
ಆಷಾಢ ಮಾಸದಲ್ಲಿ ಯಾರೂ ಒಳ್ಳೆ ಕೆಲಸ ಮಾಡಲ್ಲ. ಹೀಗಾಗಿ ಸಂಪುಟ ವಿಸ್ತರಣೆ ಮುಂದೆ ಹೋಗಿದೆ. ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಅಂದ್ರು.
Advertisement
ಗದಗ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಲಿಂಗಾಯತ ಸಮೂದಾಯದಿಂದ ನಾನೊಬ್ಬನೇ ಕಾಂಗ್ರೆಸ್ ನಿಂದ ಗೆದ್ದಿದ್ದೇನೆ. ಲಿಂಗಾಯತ ವೀರಶೈವ ಸಮಾಜಕ್ಕೆ ಮಂತ್ರಿ ಮಂಡಲದಲ್ಲಿ ಅವಕಾಶ ನೀಡಿಲ್ಲ. ಹೀಗಾಗಿ ನನ್ನನ್ನು ಸಂಪುಟ ವಿಸ್ತರಣೆಯಲ್ಲಿ ಪರಿಗಣಿಸಬೇಕು ಅಂತ ಅವರು ಹೇಳಿದ್ದಾರೆ.
Advertisement
ಮಾಜಿ ಸ್ಪೀಕರ್ ಕೋಳಿವಾಡ ಅವರು ವಿಧಾನಸಭೆಯ ಪೀಠೋಪಕರಣಗಳನ್ನ ಖಾಸಗಿ ಮನೆಯಲ್ಲಿ ಇಟ್ಟುಕೊಂಡಿರೋದು ಸರಿಯಲ್ಲ. ಯಾರೇ ತಪ್ಪು ಮಾಡಿದರು ತಪ್ಪೇ. ನನಗೆ ಈ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ನಿಜವಾಗಿದ್ರೆ ಅದು ಸರಿಯಲ್ಲ ಅಂತ ಅವರು ತಿಳಿಸಿದ್ರು.
Advertisement