ಕಲಬುರಗಿ: ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಂದ ಕಿರುಕುಳಕ್ಕೊಳಗಾಗಿರುವುದಾಗಿ ಆರೋಪಿಸಿ ಬಿಜೆಪಿ (BJP) ಕಾರ್ಯಕರ್ತ (Activist) ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಚಿಂಚೋಳಿ (Chincholi) ತಾಲೂಕಿನ ಶಿರೋಳ್ಳಿ ಗ್ರಾಮದಲ್ಲಿ ನಡೆದಿದೆ.
ಶಿವಕುಮಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತ. ನನ್ನ ಸಂಬಂಧಿ ನರಸಪ್ಪ ಎಂಬವರ ಹೊಲಕ್ಕೆ ಹೋಗಿ ಕೈ ಕಾರ್ಯಕರ್ತರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ಕಾಂಗ್ರೆಸ್ (Congress) ಕಾರ್ಯಕರ್ತರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದೇನೆ ಎಂದು ಆತ್ಮಹತ್ಯೆಗೂ ಮುನ್ನ ಶಿವಕುಮಾರ್ ಮೂರು ಆಡಿಯೋದಲ್ಲಿ ಹೇಳಿದ್ದಾರೆ. ಇದನ್ನೂ ಓದಿ: ಯಾವುದೇ ಅಪರಾಧ ಮಾಡಿಲ್ಲ, ಹಾಗಾಗಿ ಟ್ರಬಲ್ ಇಲ್ಲ: ಡಿಕೆ ಸುರೇಶ್
Advertisement
Advertisement
ಆತ್ಮಹತ್ಯೆಗೂ ಮುನ್ನ ಮೂರು ಆಡಿಯೋ (Audio) ರೆಕಾರ್ಡ್ ಮಾಡಿರುವ ಶಿವಕುಮಾರ್ ತನ್ನ ಸಾವಿಗೆ ಸಚಿವ ಶರಣಪ್ರಕಾಶ್ ಪಾಟೀಲ್ ನೇರ ಕಾರಣ ಎಂದು ಆರೋಪಿಸಿದ್ದಾರೆ. ನಾನು ಹಿಂದೂ ಹುಲಿಯಾಗಿದ್ದೇನೆ, ಹಿಂದೂ ಹುಲಿಯಾಗಿಯೇ ಸಾಯುತ್ತೇನೆ. ಹಿಂದೂ ಧರ್ಮದ ಬಗ್ಗೆ ಎಲ್ಲಿಯೂ ಮಾತನಾಡಬಾರದು. ಮಾತಾಡಿದರೆ ಇವರಿಗೆ ಬೆಂಕಿ ಬಿಳುತ್ತದೆ. ಹಾಗಾಗಿ ನನ್ನ ಸಾವಿಗೆ ಕಾಂಗ್ರೆಸ್ ಕಾರ್ಯಕರ್ತರು, ಸಚಿವ ಶರಣಪ್ರಕಾಶ್ ಪಾಟೀಲ್ (Sharanprakash Patil) ಕಾರಣ ಎಂದು ಆರೋಪಿಸಿ ಆಡಿಯೋ ರೆಕಾರ್ಡ್ ಮಾಡಿ ಕಳುಹಿಸಿದ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಜೆಡಿಎಸ್‌ನಿಂದ ಸಿಎಂ ಇಬ್ರಾಹಿಂ ಉಚ್ಛಾಟನೆ
Advertisement
Web Stories