– ಜೈಲಿನಲ್ಲಿದ್ದರೂ ದೆಹಲಿ ಜನರದ್ದೇ ಚಿಂತೆ – ಸಚಿವೆ ಅತಿಶಿ ಭಾವುಕ
ನವದೆಹಲಿ: ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ (Delhi Liquor Policy Case) ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಇಡಿ ಕಸ್ಟಡಿಯಲ್ಲಿದ್ದುಕೊಂಡೇ ಮೊದಲ ಸರ್ಕಾರಿ ಆದೇಶ ಹೊರಡಿಸಿದ್ದಾರೆ ಎಂದು ಎಎಪಿ ಪಕ್ಷದ ಮೂಲಗಳು ತಿಳಿಸಿವೆ.
ಈ ಮೂಲಕ ಅರವಿಂದ್ ಕೇಜ್ರಿವಾಲ್ ಇ.ಡಿ ಬಂಧನದಲ್ಲಿದ್ದುಕೊಂಡೇ ಆಡಳಿತ ನಡೆಸುತ್ತಿದ್ದಾರೆ ಅನ್ನೋದು ಸ್ಪಷ್ಟವಾಗಿದೆ. ಇದು ರಾಷ್ಟ್ರ ರಾಜಧಾನಿಯ ನೀರು ಸರಬರಾಜಿಗೆ ಸಂಬಂಧಿಸಿದ ಆದೇಶವಾಗಿದೆ. ಜಲ ಸಂಪನ್ಮೂಲ ಸಚಿವೆಯೂ ಆಗಿರುವ ಅತಿಶಿ ಅವರಿಗೆ ಟಿಪ್ಪಣಿ ಮೂಲಕ ತಿಳಿಸಿದ್ದಾರೆ. ಅತಿಶಿ (Atishi) ಅವರಿಂದು ಆದೇಶವನ್ನು ಪ್ರಕಟಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
Advertisement
Advertisement
ನನ್ನ ಕಣ್ಣಲ್ಲಿ ನೀರು ತರಿಸಿದೆ:
ಇಡಿ ಬಂಧನದಲ್ಲಿರುವ ಸಿಎಂ ಜೈಲಿನಲ್ಲಿದ್ದುಕೊಂಡೇ ಸರ್ಕಾರಿ ಆದೇಶ ಹೊರಡಿಸುವ ಬಗ್ಗೆ ಸಚಿವೆ ಅತಿಶಿ ಮಾಹಿತಿ ನೀಡಿದ್ದಾರೆ. ಇದು ನನ್ನ ಕಣ್ಣಲ್ಲಿ ನೀರು ತರಿಸಿದೆ. ಬಂಧನಕ್ಕೊಳಗಾದ ವ್ಯಕ್ತಿ ಈ ಕಷ್ಟದ ಸಮಯದಲ್ಲೂ ತಮ್ಮ ಕುರಿತು ಆಲೋಚಿಸದೇ, ದೆಹಲಿ ಜನರು ಮತ್ತು ಅವರ ಸಮಸ್ಯೆಗಳ ಬಗ್ಗೆ ಮಾತ್ರ ಯೋಚಿಸುತ್ತಿದ್ದಾರೆ ಎಂದು ಭಾವುಕರಾಗಿದ್ದಾರೆ. ಇದನ್ನೂ ಓದಿ: ಮೋದಿ ವಿರುದ್ಧ ಅಜಯ್ ರೈ ಸ್ಪರ್ಧೆ – ಕಾಂಗ್ರೆಸ್‌ನ ನಾಲ್ಕನೇ ಪಟ್ಟಿ ರಿಲೀಸ್
Advertisement
Advertisement
ದೆಹಲಿಯ ಕೆಲವು ಭಾಗಗಳಲ್ಲಿ ಜನರು ನೀರು ಮತ್ತು ಒಳಚರಂಡಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದರಿಂದ ನಾನು ಚಿಂತಿತನಾಗಿದ್ದೇನೆ. ನಾನು ಜೈಲಿನಲ್ಲಿದ್ದೇನೆ ಎಂಬ ಕಾರಣಕ್ಕೆ ಜನರಿಗೆ ತೊಂದರೆ ಆಗಬಾರದು. ನೀರಿನ ಕೊರತೆ ಇರುವ ಸ್ಥಳಗಳಲ್ಲಿ ಟ್ಯಾಂಕರ್ ವ್ಯವಸ್ಥೆ ಮಾಡಿ ಜನರಿಗೆ ಯಾವುದೇ ಸಮಸ್ಯೆಯಾಗದಂತೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು. ಅಗತ್ಯವಿದ್ದರೆ ರಾಜ್ಯಪಾಲರಾದ ವಿ.ಕೆ ಸಕ್ಷೇನಾ ಅವರ ಸಹಾಯ ಪಡೆಯುವಂತೆ ತಮ್ಮ ನಿರ್ದೇಶನದಲ್ಲಿ ತಿಳಿಸಿರುವುದಾಗಿ ಅತಿಶಿ ಹೇಳಿದ್ದಾರೆ.
ದೆಹಲಿ ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು. ಮಾರ್ಚ್ 22 ರಂದು ನ್ಯಾಯಾಲಯವು ಕೇಜ್ರಿವಾಲ್ ಅವರಿಗೆ ಮಾ.28ರ ವರೆಗೆ ಇ.ಡಿ ವಶಕ್ಕೆ ನೀಡಿದೆ.
ಜಾರಿ ನಿರ್ದೇಶನಾಲಯ ಬಂಧಿಸಿರುವುದನ್ನು ಪ್ರಶ್ನಿಸಿ ಕೇಜ್ರಿವಾಲ್ ಅವರು ಶನಿವಾರ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದ್ರೆ ಹೋಳಿ ರಜೆಯ ಕಾರಣ ನ್ಯಾಯಾಲಯವು 27ಕ್ಕೂ ಈ ಅರ್ಜಿ ವಿಚಾರಣೆ ನಡೆಸುವ ಸಾಧ್ಯತೆ ಕಡಿಮೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ನಾಲ್ವರು ಭಯೋತ್ಪಾದಕರ ಬಂಧನ – ಅಪಾರ ಶಸ್ತ್ರಾಸ್ತ್ರ ವಶ