ಬೆಂಗಳೂರು: ಸಿಎಂ ಆಗಿ ನಾನೇ ಮುಂದುವರೆಯುತ್ತೇನೆ ಇದರಲ್ಲಿ ಯಾವುದೇ ಅನುಮಾನವೇ ಬೇಡ ಎಂದು ಸಿಎಂ ಸ್ಥಾನದ ಆಕಾಂಕ್ಷಿಗಳಿಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಕೌಂಟರ್ ಕೊಟ್ಟಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಸಿಎಂ ಸ್ಥಾನದ ಬಗ್ಗೆ ಹಲವು ಸಚಿವರ ಹೇಳಿಕೆಗಳನ್ನು ಗಮನದಲ್ಲಿಟ್ಟುಕೊಂಡು ಮತ್ತು ಸಿಎಂ ಸ್ಥಾನದ ಚರ್ಚೆ ಬಗ್ಗೆ ಕೆಲ ಕಾಂಗ್ರೆಸ್ ನಾಯಕರಿಂದ ಹೈಕಮಾಂಡ್‌ಗೆ ಪತ್ರ ಬರೆದಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು.ಇದನ್ನೂ ಓದಿ: ಯಾವುದೇ ಬೆಂಬಲವನ್ನು ನೀಡಿಲ್ಲ- ಪಿ.ಟಿ.ಉಷಾ ವಿರುದ್ಧ ಫೋಟೋ ಕ್ಲಿಕ್ಕಿಸಿದ ಬಗ್ಗೆ ಫೋಗಟ್ ಕಿಡಿ
ಯಾರೂ ಕೂಡಾ ಸಿಎಂ ಆಗ್ತೀವಿ ಅಂತಾ ಹೇಳಿಕೆ ಕೊಟ್ಟಿಲ್ಲ. ಕುರ್ಚಿನೇ ಖಾಲಿ ಇಲ್ಲ. ಸಿಎಂ ಆಗ್ತೀವಿ ಅಂತಾ ಯಾಕೆ ಹೇಳ್ತಾರೆ. ಅವರೆಲ್ಲರೂ ಸಿದ್ದರಾಮಯ್ಯನವರೇ ಮುಂದುವರೆಯುತ್ತಾರೆ ಅಂತಾ ಹೇಳುತ್ತಿದ್ದಾರೆ. ಸಿದ್ದರಾಮಯ್ಯನವರು ಸೂಚಿಸಿದರೆ ಸಿಎಂ ಆಗ್ತೀವಿ ಎಂಬ ಕೆಲವರ ಹೇಳಿಕೆಗಳಿಗೆ ತಿರುಗೇಟು ಕೊಟ್ಟಿದ್ದಾರೆ.
ಸಿಎಂ ಸ್ಥಾನ ಖಾಲಿ ಆದರೆ ಅಲ್ಲವಾ? ಇನ್ನು ಸೂಚನೆ ಯಾಕೆ ಕೊಡ್ತಾರೆ? ಯಾವುದೇ ಡೌಟ್ ಇಲ್ಲ. ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.ಇದನ್ನೂ ಓದಿ: ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ: ಸಿದ್ದರಾಮಯ್ಯ