ಪಾಟ್ನಾ: ಒಂದು ಸೆಕೆಂಡ್‌ನಲ್ಲಿ ನಿನ್ನನ್ನು ಭಯೋತ್ಪಾದಕನೆಂದು ಘೋಷಿಸುತ್ತೇನೆ ಎಂದು ಶಿಕ್ಷಕರೊಬ್ಬರಿಗೆ (Teacher) ಬಿಹಾರ (Bihar) ಪೊಲೀಸ್ ಅಧಿಕಾರಿ ಬೆದರಿಕೆ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ಭಾರೀ ವೈರಲ್ ಆಗಿದೆ.
ರಾಜಧಾನಿ ಪಾಟ್ನಾದಿಂದ (Patna) ಸುಮಾರು 165 ಕಿ.ಮೀ ದೂರದಲ್ಲಿರುವ ಜಮುಯಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಶಿಕ್ಷಕರೊಬ್ಬರು ವಿವಾದವನ್ನು ಬಗೆಹರಿಸಿಕೊಳ್ಳುವ ಸಲುವಾಗಿ ತಮ್ಮ ಕುಟುಂಬದೊಂದಿಗೆ ಜಮುಯಿ (Jamui) ಪೊಲೀಸ್ ಠಾಣೆಗೆ ಭೇಟಿ ನೀಡಿದ್ದರು. ಆದರೆ ಮೂರು ದಿನ ತಡವಾಗಿ ಬಂದಿದ್ದರಿಂದ ರಾಜೇಶ್ ಶರಣ್ ಎಂಬ ಪೊಲೀಸ್ ಅಧಿಕಾರಿ ಕೋಪಗೊಂಡು ಶಿಕ್ಷರಿಗೆ ಮತ್ತು ಆತನ ಕುಟುಂಬದವರಿಗೆ ಬೆದರಿಕೆ (Threat) ಹಾಕಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಅಲ್ಲದೇ ಪೊಲೀಸ್ ಅಧಿಕಾರಿಯ ಸುತ್ತಲೂ ಜನರಿದ್ದರೂ ಸಹ ಯಾರೂ ಮಧ್ಯಪ್ರವೇಶ ಮಾಡಿ ಮಾತನಾಡಲಿಲ್ಲ. ಇದನ್ನೂ ಓದಿ: ಪಾಕಿಸ್ತಾನಕ್ಕೆ ಗುಪ್ತ ಮಾಹಿತಿ ರವಾನೆ – ರಕ್ಷಣಾ ಸಂಸ್ಥೆಯ ವಿಜ್ಞಾನಿ ಅರೆಸ್ಟ್
ಶಿಕ್ಷಕ ತಡವಾಗಿ ಬರಲು ಕಾರಣ ಏನೆಂದು ಹೇಳಲು ಹೊರಟಾಗ, ಹೆಚ್ಚು ಮಾತನಾಡಬೇಡಿ. ಜನರನ್ನು ಭಯೋತ್ಪಾದಕರು ಎಂದು ಘೋಷಿಸುವುದು ನಮ್ಮ ಕೆಲಸ. ಒಂದು ಸೆಕೆಂಡಿನಲ್ಲಿ ನಿನ್ನನ್ನು ಭಯೋತ್ಪಾದಕ ಎಂದು ಘೋಷಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ತೀವ್ರ ವಿರೋಧ ವ್ಯಕ್ತವಾಗಿದೆ. ಈ ಕುರಿತು ಜಮುಯಿ ಪೊಲೀಸರು ತನಿಖೆಗೆ ಆದೇಶಿಸಿದ್ದಾರೆ. ಇದನ್ನೂ ಓದಿ: ಮಣಿಪುರ ಧಗಧಗ – ಪರಿಸ್ಥಿತಿ ಕೈಮೀರಿದರೆ ಕಂಡಲ್ಲಿ ಗುಂಡು ಹಾರಿಸಿ: ಸರ್ಕಾರ ಆದೇಶ