ಬೆಂಗಳೂರು: ಸಾವಿರಾರು ಕೋಟಿ ರೂ. ಬೆಲೆ ಬಾಳುವ ಸರ್ಕಾರದ ಆಸ್ತಿಯನ್ನು ನುಂಗುವ ಮಹಾ ಹುನ್ನಾರವನ್ನು ಬಿಜೆಪಿ(BJP) ಮಾಡುತ್ತಿದೆ. ಸದನಲ್ಲಿ ಹಗರಣ ಬಿಚ್ಚಿಡುತ್ತೇನೆ ಅಂತ ಮಾಜಿ ಸಿಎಂ ಕುಮಾರಸ್ವಾಮಿ(Kumaraswamy) ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ನಡೆದ ಜೆಡಿಎಸ್(JDS) ಶಾಸಕಾಂಗ ಪಕ್ಷದ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಭ್ರಷ್ಟಾಚಾರದ(Corruption) ಬಗ್ಗೆ ದಾಖಲೆಗಳನ್ನು ಕೊಡಿ ಎಂದು ಪದೇಪದೇ ನನ್ನನ್ನು ಕೆಣಕಿದ್ದಾರೆ. ಸಾವಿರಾರು ಕೋಟಿ ರೂ. ಬೆಲೆ ಬಾಳುವ ಸರ್ಕಾರಿ ಆಸ್ತಿಯನ್ನು ಅಕ್ರಮವಾಗಿ ಪರಭಾರೆ ಮಾಡಲು ಹೊರಟ ಅತಿದೊಡ್ಡ ಅಕ್ರಮದ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ತಿಳಿಸಿದರು.
Advertisement
Advertisement
ಸದನದಲ್ಲಿ ಈ ವಿಚಾರದ ಬಗ್ಗೆ ಚರ್ಚೆ ಮಾಡಲು ಕಾಂಗ್ರೆಸ್ ಪಕ್ಷ ಸಹಕರಿಸಬೇಕು. ಈ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಜನರಿಗೆ ಗೊತ್ತಾಗಬೇಕು. ನಾನು ಈ ದಾಖಲೆಗಳನ್ನು ಬಿಡುಗಡೆ ಮಾಡುತ್ತಿರುವುದು ಈ ಸರ್ಕಾರದ ಹಗರಣಗಳ ಒಂದು ಸ್ಯಾಂಪಲ್ ಮಾತ್ರ. ಇದನ್ನು ಬಿಜೆಪಿಯವರು ಅರಗಿಸಿಕೊಳ್ಳಲಿ ಸಾಕು ಎಂದು ಕುಮಾರಸ್ವಾಮಿ ಗುಡುಗಿದರು. ಇದನ್ನೂ ಓದಿ: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ- ಬಾಲಕಿಯರೇ ಮೇಲುಗೈ
Advertisement
ಇತ್ತೀಚೆಗೆ ನಾನು ಸದನದ ಕಲಾಪದಲ್ಲಿ ದೊಡ್ಡ ಮಟ್ಟದ ಚರ್ಚೆಯಲ್ಲಿ ಪಾಲ್ಗೊಂಡಿಲ್ಲ. ಯಾವುದಾದರೂ ಮುಖ್ಯ ವಿಚಾರ ಇದ್ದಾಗ ಭಾಗಿಯಾಗಿದ್ದೇನೆ. ನಾನು ಭಾಗಿಯಾದಾಗ ದಾಖಲೆ ಸಮೇತ ಮಾತನಾಡಿದ್ದೇನೆ. ಒಂದಿಷ್ಟು ಜನ ಹೇಳುತ್ತಿದ್ದಾರೆ. ಸದನದಲ್ಲಿ ಕುಮಾರಸ್ವಾಮಿ ಏನು ಮಾತಾಡಿ ಬಿಟ್ಟಾರು ಅಂತ. ಸುಖಾಸುಮ್ಮನೆ ಯಾರದೋ ಬಳಿ ನಾನು ಪಾಠ ಹೇಳಿಸಿಕೊಳ್ಳಬೇಕಿದೆ. ಒಂದಿಷ್ಟು ದಾಖಲೆಗಳನ್ನು ನಾನು ಸ್ಯಾಂಪಲ್ ಆಗಿ ಬಹಿರಂಗ ಮಾಡುತ್ತೇನೆ. ಇದನ್ನು ಒಂದು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇನೆ. ಸಾರ್ವಜನಿಕ ಆಸ್ತಿಯನ್ನು ಹಣಕ್ಕೋಸ್ಕರ ಮಾರಾಟಕ್ಕೆ ಇಡುತ್ತಿದ್ದಾರೆ. ಇದಕ್ಕೆ ತಡೆ ಹಾಕಬೇಕಿದೆ ಎಂದು ಅವರು ಹೇಳಿದರು.
Advertisement
ರಾಜ್ಯದಲ್ಲಿ ಭ್ರಷ್ಟಾಚಾರ ಯಾವ ರೀತಿ ಇದೆ ಎನ್ನುವುದು ನಾಡಿನ ಜನತೆಗೆ ಹಾಗೂ ಪ್ರಧಾನಿ ಮೋದಿ ಅವರಿಗೂ ಗೊತ್ತಾಗಲಿ. ಅದಕ್ಕೇ ಎಲ್ಲದಕ್ಕೂ ದಾಖಲೆ ಇಟ್ಟು ಮಾತನಾಡುತ್ತೇನೆ. ಇದು ಭಾರೀ ಹಗರಣ. ಸರ್ಕಾರಕ್ಕೆ ಬರಬೇಕಾದ 8-10 ಸಾವಿರ ಕೋಟಿ ರೂ. ಕಬಳಿಸುವ ಹುನ್ನಾರ ನಡೆದಿದೆ. 1957ನೇ ಇಸವಿಯಿಂದ ವಿಷಯ ಇದೆ. ಈ ಸರ್ಕಾರಿ ಆಸ್ತಿಗೆ 2008-09ರಲ್ಲೇ 5 ಸಾವಿರ ಕೋಟಿ ಅಂತ ಅಂದಾಜು ಕಟ್ಟಿದ್ದರು. ಆದರೆ, ಈ ಬಗ್ಗೆ ಸರ್ಕಾರ ಮಾಡಿರುವ ಆದೇಶ ದಿಗ್ಭ್ರಮೆ ಉಂಟು ಮಾಡುವ ರೀತಿಯಲ್ಲಿದೆ ಎಂದು ಕುಮಾರಸ್ವಾಮಿ ತಿಳಿಸಿದರು. ಇದನ್ನೂ ಓದಿ: ಸದನದ ಸಮಯ ಹಾಳು ಮಾಡಲಾರೆ: ಹೆಚ್‌ಡಿಕೆ