ಭುವನೇಶ್ವರ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕಳೆದ ಕೆಲವು ದಿನಗಳಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇದ್ದಾರೆ. ಈ ಸಂಬಂಧ ಒಡಿಶಾ ರಾಜಧಾನಿ ಭುವನೇಶ್ವರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಪಷ್ಟನೆ ನೀಡಿದ್ದಾರೆ.
ನರೇಂದ್ರ ಮೋದಿ ಅವರು ಮುಂದಿನ ಅವಧಿಗೆ ಪ್ರಧಾನಿ ಆಗುವುದಿಲ್ಲ ಅಂತ ಸಾಬೀತು ಮಾಡುತ್ತಿದ್ದೇನೆ. ಈ ನಿಟ್ಟಿನಲ್ಲಿ ಹೋರಾಡುತ್ತಿದ್ದೇನೆಯೇ ಹೊರತು ಅವರನ್ನು ದ್ವೇಷಿಸುತ್ತಿಲ್ಲ. ಅವರು ನನ್ನನ್ನು ಒಪ್ಪುವುದಿಲ್ಲ. ನಾನು ಅವರನ್ನು ಒಪ್ಪುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ನನ್ನನ್ನು ದ್ವೇಷಿಸುವಾಗ ಅವರನ್ನು ತಬ್ಬಿಕೊಳ್ಳಬೇಕು ಅಂತ ಅನಿಸುತ್ತದೆ. ಮೋದಿ ಅವರು ಕಾಂಗ್ರೆಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಅವರ ನಡೆ ನನಗೆ ಅರ್ಥವಾಗಿದೆ. ಆದರೂ ನಾವು ಅವರ ಮೇಲೆ ಕೋಪ ಮಾಡಿಕೊಳ್ಳುವುದಿಲ್ಲ ಎಂದು ಕುಟುಕಿದರು.
ಬಿಜೆಪಿ ಹಾಗೂ ಅದಕ್ಕೆ ಸಿದ್ಧಾಂತಗಳ ನೀಡಿದ ಆರ್‍ಎಸ್‍ಎಸ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಿಂದನೆ ಎಂಬ ದೊಡ್ಡ ಉಡುಗೊರೆ ಕೊಟ್ಟಿದೆ. ಬಿಜೆಪಿಯಿಂದ ನಾನು ಪಡೆದ ಅತ್ಯಂತ ದೊಡ್ಡ ಗಿಫ್ಟ್ ಎಂದರೆ ಅದು ನಿಂದನೆ ಎಂದು ವ್ಯಂಗ್ಯವಾಡಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಆರ್‍ಎಸ್‍ಎಸ್ ಅಧೀನದಲ್ಲಿದೆ. ಅವರು ಹೇಳಿದಂತೆ ಬಿಜೆಪಿ ನಾಯಕರು ಕೇಳುತ್ತಾರೆ ಎಂದ ಅವರು, ಮೋದಿ ಅವರು ಸರ್ಕಾರಿ ಸಂಸ್ಥೆಗಳನ್ನು ತಮ್ಮ ಅಧೀನದಲ್ಲಿ ಇಟ್ಟುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ದೂರಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv