ಬೆಂಗಳೂರು: ನಾಗಮಂಗಲದಲ್ಲಿ (Nagamangala) ಕೆಎಸ್‌ಆರ್‌ಟಿಸಿ ಚಾಲಕ (KSRTC Driver) ಆತ್ಮಹತ್ಯೆಗೆ ಯತ್ನಿಸಿದ್ದು ಯಾವ ಕಾರಣಕ್ಕೆ ಎಂಬ ಬಗ್ಗೆ ಮಾಹಿತಿ ಇಲ್ಲ. ವರ್ಗಾವಣೆ (Transfer) ಯಾವ ಕಾರಣಕ್ಕೆ ಎಂಬ ಮಾಹಿತಿ ತರಿಸಿಕೊಳ್ಳುತ್ತೇನೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಹೇಳಿಕೆ ನೀಡಿದ್ದಾರೆ.
ಮಂಡ್ಯ (Mandya) ಜಿಲ್ಲೆಯ ನಾಗಮಂಗಲ ಬಸ್ ಡಿಪೋದ ಚಾಲಕ ಜಗದೀಶ್, ಸಚಿವ ಚಲುವರಾಯಸ್ವಾಮಿ ಸೂಚನೆಯಂತೆ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ತೀವ್ರ ಅಸ್ವಸ್ಥರಾಗಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ರಾಮಲಿಂಗಾ ರೆಡ್ಡಿ, ಯಾವ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಮಾಹಿತಿಯಿಲ್ಲ. ಯಾರಾದ್ರೂ ಕಂಡಕ್ಟರ್, ಡ್ರೈವರ್ ವರ್ಗಾವಣೆಗೆ ನಮ್ಮವರೆಗೂ ಬರುತ್ತಾರಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: KSRTC ನೌಕರ ಆತ್ಮಹತ್ಯೆಗೆ ಪ್ರಯತ್ನಿಸಿದ್ದಕ್ಕೂ ಸರ್ಕಾರಕ್ಕೂ ಸಂಬಂಧವಿಲ್ಲ – ಚಲುವರಾಯಸ್ವಾಮಿ ಸ್ಪಷ್ಟನೆ
ಘಟನೆಯ ಕುರಿತು ಎಂಡಿ ಬೆಳಗ್ಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ವರ್ಗಾವಣೆ ಯಾವ ಕಾರಣಕ್ಕೆ ಎಂಬ ಮಾಹಿತಿಯನ್ನು ತರಿಸಿಕೊಳ್ಳುತ್ತೇನೆ. ಸಚಿವ ಚಲುವರಾಯಸ್ವಾಮಿ (Chaluvarayaswamy) ಒತ್ತಡ ಇತ್ತಾ ಎನ್ನುವುದರ ಬಗ್ಗೆ ಮಾಹಿತಿ ಇಲ್ಲ. ಡೆತ್‌ನೋಟ್ ಬರೆದಿದ್ದಾರೆ ಅಂತಾ ಮಾಹಿತಿ ಕೊಟ್ಟಿದ್ದಾರೆ. ಆತ್ಮಹತ್ಯೆ ಯತ್ನದ ನಂತರ ಚಿಕಿತ್ಸೆ ನಡೆಯುತ್ತಿದೆ. ಯಾರು ಒತ್ತಡ ಹಾಕಿದರು, ವರ್ಗಾವಣೆಗೆ ಕಾರಣ ಏನು ಎನ್ನುವ ಬಗ್ಗೆ ಮಾಹಿತಿ ತರಿಸಿಕೊಳ್ಳುತ್ತೇನೆ ಎಂದರು. ಇದನ್ನೂ ಓದಿ: ಸರ್ಕಾರ ರಾಜಕೀಯ ತೆವಲಿಗಾಗಿ ಜೀವದ ಜೊತೆ ಚೆಲ್ಲಾಟವಾಡ್ತಿದೆ – KSRTC ನೌಕರನ ಆರೋಗ್ಯ ವಿಚಾರಿಸಿದ ಮಾಜಿ ಸಿಎಂ
Web Stories