Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನಾನು ಗುತ್ತಿಗೆದಾರರಿಂದ ಕಮಿಷನ್ ಕೇಳಿದ್ದು ಸಾಬೀತು ಪಡಿಸಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಡಿಕೆಶಿ

Public TV
Last updated: August 11, 2023 7:39 pm
Public TV
Share
3 Min Read
d.k.shivakumar
SHARE

ಬೆಂಗಳೂರು: ನಾನು ಗುತ್ತಿಗೆದಾರರಿಂದ ಕಮಿಷನ್ ಕೇಳಿದ್ದು ಸಾಬೀತು ಪಡಿಸಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar) ಹೇಳಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, ಬೊಮ್ಮಾಯಿ ಅವರು ಸಿಎಂ ಆಗಿದ್ದಾಗ ಯಾಕೆ ಗುತ್ತಿಗೆದಾರರ ಬಿಲ್ ಪಾವತಿ ಮಾಡಲಿಲ್ಲ? ಗುತ್ತಿಗೆದಾರರ ಬಿಲ್ ವಿಚಾರವಾಗಿ ಬೊಮ್ಮಾಯಿ, ಅಶೋಕ್ ಸೇರಿದಂತೆ ವಿರೋಧ ಪಕ್ಷದ ನಾಯಕರು ಮಾತನಾಡುತ್ತಿದ್ದಾರೆ. ನಿಮ್ಮ ಸರ್ಕಾರ ಇದ್ದಾಗ ಗುತ್ತಿಗೆದಾರರ ಬಿಲ್ ಪಾವತಿ ಮಾಡಲಿಲ್ಲ ಯಾಕೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸೋಲಿನ ಹತಾಶೆಯಿಂದ ಬಿಜೆಪಿಯಿಂದ ಕಮಿಷನ್ ಆರೋಪ: ಹೆಚ್.ಸಿ ಮಹದೇವಪ್ಪ

BASAVBARAJ BOMMAI

ಬೊಮ್ಮಾಯಿ ಅವರಿಗಾಗಲಿ, ಅಶೋಕ್ ಅವರಿಗಾಗಲಿ ಅವರ ಸರ್ಕಾರದಲ್ಲಿ ಗುತ್ತಿಗೆದಾರರ ಬಿಲ್ ಪಾವತಿ ಮಾಡಲು ಯಾರು ಅಡ್ಡಿ ಮಾಡಿದ್ದರು? ಅವರ ಬಳಿ ಹಣ ಇರಲಿಲ್ಲವೇ? ಕೆಲಸ ಸರಿ ಇರಲಿಲ್ಲವೇ? ಈ ಪ್ರಶ್ನೆಗೆ ಬಿಜೆಪಿ ನಾಯಕರು ಮೊದಲು ಉತ್ತರ ನೀಡಲಿ. ಉಳಿದಂತೆ ಗುತ್ತಿಗೆದಾರರಿಗೆ ನಾನು ಉತ್ತರ ನೀಡುತ್ತೇನೆ. ನಮ್ಮ ಸರ್ಕಾರ ಬಂದ ನಂತರ ಮುಖ್ಯಮಂತ್ರಿಗಳು, ಕೆಂಪಣ್ಣ ಅವರ ದೂರಿನ ಆಧಾರದ ಮೇಲೆ ಕೆಲಸ ಆಗಿದೆಯೇ ಇಲ್ಲವೇ ಎಂದು ನೈಜತೆ ಪರಿಶೀಲನೆ ಮಾಡಿ ಎಂದು ತಿಳಿಸಿದರು. ಇನ್ನು ಬಿಜೆಪಿ ನಾಯಕರು ಕೂಡ ಸದನದಲ್ಲಿ ಗುತ್ತಿಗೆ ಕಾಮಗಾರಿಗಳಲ್ಲಿ ಆಗಿರುವ ಅಕ್ರಮಗಳ ಬಗ್ಗೆ ತನಿಖೆ ಮಾಡಿ ಎಂದು ನಮ್ರತೆಯಿಂದ ಮನವಿ ಮಾಡಿದ್ದರು. ಹೀಗಾಗಿ ನಾವು ತನಿಖಾ ಸಮಿತಿ ರಚನೆ ಮಾಡಿದ್ದೇವೆ. ಕಾಮಗಾರಿಗಳ ಕೆಲಸ ಆಗಿದೆಯೇ ಇಲ್ಲವೇ ಎಂದು ಪರಿಶೀಲನೆ ಮಾಡಲು ಸಮಿತಿಗೆ ಸೂಚಿಸಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಮೂರ್ನಾಲ್ಕು ವರ್ಷಗಳಿಂದ ಬಿಲ್ ಪಾವತಿ ಆಗದಿದ್ದಾಗ ಸುಮ್ಮನಿದ್ದವರು, ಈಗ ತನಿಖೆ ಮುಗಿಯುವವರೆಗೂ ಕಾಯಲು ಯಾಕೆ ಸಿದ್ಧರಿಲ್ಲ? ಯಾಕೆ ಈ ಪರಿಯ ಆತುರ? ಏನಿದರ ಹಿಂದಿನ ಮರ್ಮ? ಇನ್ನು 10-15% ಕಮಿಷನ್ ಕೇಳುತ್ತಿದ್ದಾರೆ ಎಂಬ ಆರೋಪ ಮಾಡಲಾಗಿದೆ. ಈ ಕಮಿಷನ್ ಯಾರು ಕೇಳಿದ್ದಾರೆ? ಡಿ.ಕೆ. ಶಿವಕುಮಾರ್ ಕೇಳಿದ್ದಾನಾ? ಸಿದ್ದರಾಮಯ್ಯ ಕೇಳಿದ್ದಾರಾ? ಮಂತ್ರಿಗಳು, ಶಾಸಕರು ಕೇಳಿದ್ದಾರಾ? ಅಧಿಕಾರಿಗಳು ಕೇಳಿದ್ದಾರಾ ಎಂದು ಹೇಳಲಿ ಎಂದು ಆರೋಪಗಳಿಗೆ ತಿರುಗೇಟು ಕೊಟ್ಟಿದ್ದಾರೆ. ಇದನ್ನೂ ಓದಿ: ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಬೆಂಕಿ – ಪಾಲಿಕೆ ಸಿಬ್ಬಂದಿ ಸೇರಿ 9 ಮಂದಿಗೆ ಗಾಯ

kempanna

ನಾನು ಯಾರ ಬಳಿಯಾದರು ಕಮಿಷನ್ ಕೇಳಿದ್ದರೆ ಇಂದೇ ರಾಜಕಾರಣದಿಂದ ನಿವೃತ್ತಿಯಾಗುತ್ತೇನೆ. ನಾನು ಕೇಳಿಲ್ಲವಾದರೆ ಬೊಮ್ಮಾಯಿ, ಅಶೋಕ್ ರಾಜಕೀಯ ನಿವೃತ್ತಿ ಘೋಷಣೆ ಮಾಡುತ್ತಾರಾ? ನಾನು ಅವರ ಸ್ಥಾನ ಹಾಗೂ ಹಿರಿತನಕ್ಕೆ ಗೌರವ ನೀಡಬೇಕು ನೀಡುತ್ತೇನೆ. ಅಶೋಕ್ ಏನೆಲ್ಲಾ ಮಾತನಾಡಿದ್ದಾರೆ ಎಂಬುದು ಗೊತ್ತಿದೆ. ನನಗೆ ನನ್ನದೇ ಆದ ವ್ಯಕ್ತಿತ್ವ ಇದೆ. ತನಿಖೆ ಒಂದೆರಡು ಕಡೆ ಮಾತ್ರ ಮಾಡುವುದಿಲ್ಲ. ಎಲ್ಲ ಕಡೆ ಮಾಡಲಾಗುತ್ತದೆ. ಕೆಲಸ ಮಾಡಿದ್ದರೆ ಬಿಲ್ ಪಾವತಿ ಆಗಲಿದೆ. ಈಗ ಒಂದೆರಡು ತಿಂಗಳು ಕಾಯಲು ಆಗುವುದಿಲ್ಲವೇ? ಗುತ್ತಿಗೆದಾರರು ನೇಣು ಹಾಕಿಕೊಳ್ಳುವುದು ಬೇಡ. ದಯಾ ಮರಣ ಕೇಳುವುದೂ ಬೇಡ. ಅವರ ಹಿಂದೆ ಯಾರಿದ್ದಾರೆ ಎಂದು ಗೊತ್ತಿದೆ. ಪ್ರಜಾಪ್ರಭುತ್ವದಲ್ಲಿ ಇಂತಹ ಆರೋಪ ಪ್ರತ್ಯಾರೋಪ ಸಹಜ. ಗುತ್ತಿಗೆದಾರರು ರಾಜ್ಯಪಾಲರು, ಅಶೋಕ್, ಕುಮಾರಸ್ವಾಮಿ ಎಲ್ಲರನ್ನೂ ಕೇಳುತ್ತಿದ್ದಾರೆ. ನಾನು ಅಧಿಕಾರಿಗಳ ಬಳಿ ಮಾಹಿತಿ ಕೇಳಿದ್ದೇನೆ. ಕಮಿಷನ್ ವಿಚಾರದಲ್ಲಿ ಶಾಂಗ್ರಿಲಾ ಹೋಟೆಲ್‌ನಲ್ಲಿ ಮೀಟಿಂಗ್ ಮಾಡಿದ್ದು, ನಿಮ್ಮ ಪರವಾಗಿ ಅಧಿಕಾರಿಯೊಬ್ಬರು ಬಂದು ಕಮಿಷನ್ ಕೇಳುತ್ತಿದ್ದಾರೆ ಎಂದು ಕೆಂಪಣ್ಣ ಹೇಳಿದ್ದಾರಲ್ಲ ಎಂದು ಗಮನ ಸೆಳೆದಾಗ, “ಕೆಂಪಣ್ಣ ಅವರು ಗೌರವಯುತ ವ್ಯಕ್ತಿ. ನೀವು ಹೇಳಿದ್ದಕ್ಕೆ ನಾನು ಅವರ ಬಗ್ಗೆ ಮಾತನಾಡುವುದಿಲ್ಲ. ಅವರ ಹೇಳಿಕೆ ಬಗ್ಗೆ ಗೊತ್ತಿಲ್ಲ. ಅವರಿಗೆ ಯಾವ ಅಧಿಕಾರಿ ಕೇಳಿದ್ದಾರೋ ಆ ಬಗ್ಗೆ ಒಂದು ಅಫಿಡವಿಟ್ ಹಾಗೂ ದೂರು ಸಲ್ಲಿಸಲು ಹೇಳಿ” ಎಂದಿದ್ದಾರೆ.

ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ನೀವು ಅಜ್ಜಯ್ಯನ ಮೇಲೆ ಆಣೆ ಪ್ರಮಾಣ ಮಾಡುವಂತೆ ಕೇಳಿದ್ದಾರೆ. ರಸ್ತೆಯಲ್ಲಿ ಹೋಗುವ ಯಾರದೋ ಮಾತಿಗೆಲ್ಲ ನಾನು ಉತ್ತರ ನೀಡುವುದಿಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಮಾತನಾಡಲಿ, ಉತ್ತರ ನೀಡುತ್ತೇನೆ. ಯಾರಿಗೆ ಏನು ಉತ್ತರ ನೀಡಬೇಕೊ ನೀಡುತ್ತೇನೆ ಎಂದು ತಿಳಿಸಿದ್ದಾರೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]


follow icon

TAGGED:commissioncontractorsd k shivakumarkempannaಕಮಿಷನ್ಕೆಂಪಣ್ಣಗುತ್ತಿಗೆದಾರರುಡಿ.ಕೆ. ಶಿವಕುಮಾರ್‌
Share This Article
Facebook Whatsapp Whatsapp Telegram

Cinema Updates

Kamal Haasan Karave Protest Film Chamber
ನಟ ಕಮಲ್ ಹಾಸನ್ ಕ್ಷಮೆಯಾಚನೆಗೆ ಆಗ್ರಹ – ಫಿಲಂ ಚೇಂಬರ್‌ಗೆ ಕರವೇ ಮುತ್ತಿಗೆ
27 minutes ago
Sa Ra Govindu
ಬಹಿರಂಗವಾಗಿ ಕ್ಷಮೆ ಕೇಳದಿದ್ರೆ ಕಮಲ್ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಕೊಡಲ್ಲ: ಸಾರಾ ಗೋವಿಂದು
5 hours ago
Chethan and Kamal hassan
ಕಮಲ್ ಹಾಸನ್ ಸಣ್ಣತನದ ಹೇಳಿಕೆ ನೀಡಿ, ಕನ್ನಡಿಗರಿಗೆ ಕ್ಷಮೆ ಕೇಳದೇ ಮೊಂಡುತನ: ಚೇತನ್
5 hours ago
Kamal Haasan Natural Star nani
ಕಮಲ್ ಹಾಸನ್ `ಕನ್ನಡ’ ವಿವಾದ – ಸಾಕು ಸರ್ ಎಂದ ನ್ಯಾಚುರಲ್ ಸ್ಟಾರ್
7 hours ago

You Might Also Like

tree falls in Charmady Ghat tourists just missed
Chikkamagaluru

ಕಾರು ಪಾಸ್ ಆಗ್ತಿದ್ದಂತೆ ಮುರಿದುಬಿದ್ದ ಬೃಹತ್‌ ಮರ – ಪ್ರವಾಸಿಗರು ಜಸ್ಟ್ ಮಿಸ್

Public TV
By Public TV
14 minutes ago
RCB 2 1
Cricket

RCBಗೆ ಮೂರು ಬಾರಿಯೂ ಫೈನಲ್‌ನಲ್ಲಿ ವಿರೋಚಿತ ಸೋಲು – ಹೇಗಿದೆ ರೋಚಕ ಇತಿಹಾಸ?

Public TV
By Public TV
14 minutes ago
mangaluru congress leaders
Dakshina Kannada

ಮಂಗಳೂರು| ಒತ್ತಡಕ್ಕೆ ಮಣಿದು ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಹಮೀದ್‌ ರಾಜೀನಾಮೆ ಘೋಷಣೆ

Public TV
By Public TV
32 minutes ago
Mangaluru Murder 1
Dakshina Kannada

ಮುಸ್ಲಿಂ ಯುವಕರ ಜೀವಕ್ಕೆ ಬೆಲೆಯೇ ಇಲ್ಲ, ಪೂರ್ವನಿಯೋಜಿತವಾಗಿ ಕೊಲೆ: ರಿಯಾಜ್ ಕಡಂಬು ಆಕ್ರೋಶ

Public TV
By Public TV
59 minutes ago
Gurjapura Bridge
Districts

ಮುಂಗಾರು ಅಬ್ಬರ, ಜಲಾಶಯಗಳು ಬಹುತೇಕ ಭರ್ತಿ – ಗುರ್ಜಾಪುರ ಬ್ಯಾರೇಜ್‌ನ 194 ಗೇಟ್ ಓಪನ್

Public TV
By Public TV
2 hours ago
Heart attack in Chhattisgarh Bagalkote soldier dies
Bagalkot

ಛತ್ತೀಸ್‌ಗಢದಲ್ಲಿ ಹೃದಯಾಘಾತ – ಬಾಗಲಕೋಟೆಯ ಯೋಧ ನಿಧನ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?