ಹಾವೇರಿ: ಹಿರೇಕೆರೂರು ರೈತರ ಕಡೆಯಿಂದ ಶಿವಾನಂದ ಪಾಟೀಲ್‍ಗೆ (Shivanand Patil) ಒಂದು ಕೋಟಿ ರೂ. ಕೊಡುತ್ತೇವೆ ಆತ್ಮಹತ್ಯೆ ಮಾಡಿಕೊಳ್ತಾರಾ? ಕೇಳಿ ಎಂದು ಮಾಜಿ ಸಚಿವ ಬಿ.ಸಿ ಪಾಟೀಲ್ (B.C Patil) ಕಿಡಿಕಾರಿದ್ದಾರೆ.
ಹಾವೇರಿ ಜಿಲ್ಲೆಯ ಹಿರೇಕೆರೂರು ಪಟ್ಟಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಈ ವೇಳೆ ರೈತರ ಆತ್ಮಹತ್ಯೆಯ ಬಗ್ಗೆ ಸಚಿವ ಶಿವಾನಂದ ಪಾಟೀಲ್ ಹಗುರವಾಗಿ ಮಾತನಾಡಿದ್ದಾರೆ. ಅವರನ್ನು ಕೂಡಲೇ ಸಚಿವ ಸ್ಥಾನದಿಂದ ವಜಾ ಮಾಡಬೇಕು. ಹಾವೇರಿ ಜಿಲ್ಲಾ ಉಸ್ತುವಾರಿ ಸ್ಥಾನದಿಂದ ಕಿತ್ತು ಹಾಕಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನಾನು 5 ಕೋಟಿ ರೂ. ಕೊಡ್ತೀನಿ ಕಾಂಗ್ರೆಸ್ ನಾಯಕರು ಆತ್ಮಹತ್ಯೆ ಮಾಡಿಕೊಳ್ತಾರಾ? ಯತ್ನಾಳ್ ಟಾಂಗ್
Advertisement
ಕಾಂಗ್ರೆಸ್ (Congress) ಸರ್ಕಾರ ರೈತ ಸಮುದಾಯವನ್ನು ಕಡೆಗಣಿಸಿದೆ. ಸಾಲು ಸಾಲು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಜಿಲ್ಲೆಯಲ್ಲಿ 18 ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೂ ಹಾವೇರಿ ಜಿಲ್ಲೆಯನ್ನು ಬರ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಿಲ್ಲ. ಕಳೆದ ಬಾರಿ ನಾವು ಈ ವೇಳೆಗಾಗಲೇ ರೈತರಿಗೆ ಸೌಲಭ್ಯಗಳನ್ನು ಕೊಟ್ಟಿದ್ದೆವು. ಅಡುಗೆ ಮಾಡಿಟ್ಟಿದ್ದೇವೆ ಆದರೆ ಅದನ್ನು ಜನರಿಗೆ ಬಡಿಸಲು ಆಗದಂತಹ ಸರ್ಕಾರ ಇದಾಗಿದೆ ಎಂದು ಕುಟುಕಿದ್ದಾರೆ.
Advertisement
Advertisement
ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ ಮಾಡಿದ ನೀರಾವರಿ ಯೋಜನೆಗಳನ್ನು ಕೂಡಾ ಜನರಿಗೆ ಈ ಸರ್ಕಾರ ತಲುಪಿಸುತ್ತಿಲ್ಲ. ವಿದ್ಯುತ್‍ಗೂ ಹೆಚ್ಚಿನ ದರ ವಿಧಿಸುತ್ತಿದ್ದಾರೆ. ಯಾವುದೇ ದರವನ್ನೂ ಸರ್ಕಾರ ಕಡಿಮೆ ಮಾಡುತ್ತಿಲ್ಲ. ಹಿರೇಕೆರೂರು ತಾಲೂಕಿನಲ್ಲಿ ಅಕ್ರಮವಾಗಿ ಎಂಆರ್‍ಪಿಗಿಂತ ಹೆಚ್ಚಿನ ದರದಲ್ಲಿ ಮದ್ಯ ಮಾರಾಟ ನಡೆಯುತ್ತಿದೆ. ಈ ಬಗ್ಗೆ ಸರ್ಕಾರ ಯಾವ ಕ್ರಮವನ್ನೂ ಕೈಗೊಳ್ಳುತ್ತಿಲ್ಲ ಎಂದು ದೂರಿದ್ದಾರೆ. ಈ ವೇಳೆ ಬಾರುಕೋಲನ್ನು ಬೀಸುವ ಮೂಲಕ ವಿನೂತನವಾಗಿ ಸರ್ಕಾರಕ್ಕೆ ಚಾಟಿ ಏಟು ಕೊಡುತ್ತಿದ್ದೇನೆ ಎಂದಿದ್ದಾರೆ.
Advertisement
ಆಪರೇಷನ್ ಹಸ್ತದ ವಿಚಾರವಾಗಿ, ಕಾಂಗ್ರೆಸ್‍ಗೆ ಹೋಗುವವರಿಗೆ ಲೋಕಸಭೆ ಚುನಾವಣೆ ಬಳಿಕ ಬಹಳ ಕಷ್ಟವಾಗಲಿದೆ. ಈಗಾಗಲೇ ಗೃಹ ಸಚಿವ ಜಿ.ಪರಮೇಶ್ವರ್ ಬಂದವರು ಲಾಸ್ಟ್ ಬೆಂಚ್‍ನಲ್ಲಿ ಕೂರಬೇಕು ಎಂದಿದ್ದಾರೆ. ಇದನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.
ಹಾವೇರಿ ಲೋಕಸಭಾ ಕ್ಷೇತ್ರದಿಂದ ಈಶ್ವರಪ್ಪ ಅವರ ಪುತ್ರನನ್ನು ಕಣಕ್ಕಿಳಿಸುವ ಬಗ್ಗೆ ಯಾರ ಬಳಿ ಮಾತನಾಡಬೇಕೋ ಅವರ ಬಳಿ ಮಾತನಾಡಿದ್ದೇನೆ ಎಂದಿದ್ದಾರೆ. ಆದರೆ ಈ ವಿಚಾರವಾಗಿ ನಮಗೆ ಯಾರು ಹೇಳಬೇಕೋ ಅವರು ಹೇಳಿಲ್ಲ. ಯಾರಿಗಾದರೂ ಟಿಕೆಟ್ ಕೊಡಲಿ, ಆದರೆ ಹಾವೇರಿ ಅಥವಾ ಗದಗ ಜಿಲ್ಲೆಯವರಿಗೇ ಟಿಕೆಟ್ ನೀಡಲಿ. ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಗೆಲ್ಲಿಸುವ ಕೆಲಸ ಒಗ್ಗಟ್ಟಾಗಿ ಮಾಡುತ್ತೇವೆ ಎಂದಿದ್ದಾರೆ.
ಶನಿವಾರ ಜಿಲ್ಲಾ ಕಾರ್ಯಕಾರಿಣಿ ಸಭೆ ಇದೆ. ಈ ಸಭೆಗೆ ಮಾಜಿ ಸಿಎಂ ಬೊಮ್ಮಾಯಿ ಅವರು ಕೂಡಾ ಬರಲಿದ್ದಾರೆ. ನಮ್ಮ ಉದ್ದೇಶ ಒಂದೇ ಹಾವೇರಿ ಲೋಕಸಭೆ ಕ್ಷೇತ್ರ ಗೆಲ್ಲಲೇ ಬೇಕು. ಈ ವಿಚಾರ ಇಟ್ಟುಕೊಂಡು ದುಡಿಯುತ್ತೇವೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಧರ್ಮದ ವಿಚಾರದಲ್ಲಿ ದ್ವೇಷ, ನೋವುಂಟು ಮಾಡಬಾರದು: ಯು.ಟಿ ಖಾದರ್
Web Stories