ಚಿಕ್ಕಬಳ್ಳಾಪುರ: ಕಳೆದ ಬಾರಿ 2019ರಲ್ಲಿ ಯಲಹಂಕ (Yalahanka) ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ (BJP) 45,000 ಮತಗಳ ಲೀಡ್ ದೊರೆತಿತ್ತು. ಈ ಬಾರಿ ಎನ್‌ಡಿಎಗೆ (NDA) 1 ಲಕ್ಷಕ್ಕೂ ಹೆಚ್ಚು ಮತಗಳ ಲೀಡ್ ಸಿಗಲಿದೆ ಎಂದು ಶಾಸಕ ಎಸ್‌ಆರ್ ವಿಶ್ವನಾಥ್ (SR Vishwanath) ವಿಶ್ವಾಸ ವ್ಯಕ್ತಪಡಿಸಿದರು.
ಯಲಹಂಕ ವಿಧಾನಸಭಾ ಕ್ಷೇತ್ರದ ತೋಟದಗುಡ್ಡಹಳ್ಳಿ, ಅಂಚೆಪಾಳ್ಯ ಮೊದಲಾದ ಕಡೆಗಳಲ್ಲಿ ಶಾಸಕ ಎಸ್‌ಆರ್ ವಿಶ್ವನಾಥ್ ಅವರೊಂದಿಗೆ ಡಾ.ಕೆ ಸುಧಾಕರ್ ಪ್ರಚಾರ ಮತ್ತು ಸಭೆ ನಡೆಸಿದರು. ಬಳಿಕ ಮಾತನಾಡಿದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ (Dr K Sudhakar), ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಂದಾದ ಬಳಿಕ ಕಾಂಗ್ರೆಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬ ಪರಿಸ್ಥಿತಿ ಉಂಟಾಗಿದೆ. 80% ರಷ್ಟು ಮತಗಳು ಬಿಜೆಪಿಗೆ ದೊರೆಯಲಿದೆ. ಆದರೆ ಕಾಂಗ್ರೆಸ್‌ಗೆ 20% ರಷ್ಟು ಮತಗಳು ದೊರೆಯುವುದು ಅನುಮಾನ. ಇದಕ್ಕೆ ಶಾಸಕರ ಅಭಿವೃದ್ಧಿ ಕಾರ್ಯಗಳೇ ಕಾರಣ ಎಂದರು. ಇದನ್ನೂ ಓದಿ: ರಾಜ್ಯದ ವಿವಿಧೆಡೆ ಮಳೆ ಅಬ್ಬರ; ಶಿವಮೊಗ್ಗ, ಬೀದರ್‌ನಲ್ಲಿ ವರುಣಾರ್ಭಟಕ್ಕೆ ಇಬ್ಬರು ಬಲಿ – ಇನ್ನೂ 3 ದಿನ ಮಳೆ ಮುನ್ಸೂಚನೆ
Advertisement
Advertisement
ಯಲಹಂಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸಂಘಟನೆ ಶಕ್ತಿಯುತವಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಸಮಾಗಮದಿಂದ ಇಲ್ಲಿ ಹೆಚ್ಚು ಲಾಭವಾಗಲಿದೆ ಎಂದು ಹೇಳಿದರು. ಇದನ್ನೂ ಓದಿ: ದುಬೈ ಬರೋ ಪ್ಲ್ಯಾನ್ ಇದ್ದರೆ ಮುಂದಕ್ಕೆ ಹಾಕಿ- ಭಾರತದ ರಾಯಭಾರಿ ಸೂಚನೆ
Advertisement