ಚಿಕ್ಕಬಳ್ಳಾಪುರ: ಜಿಲ್ಲೆಯ ವೈದ್ಯಕೀಯ ಕಾಲೇಜು ನಿರ್ಮಾಣ ವಿಚಾರದಲ್ಲಿ ಯಾವ ತನಿಖೆ ಬೇಕಾದರೂ ಮಾಡಿ. ಆದರೆ ಆದಷ್ಟು ಬೇಗ ಕಾಲೇಜು ಕಟ್ಟಡ ಹ್ಯಾಂಡ್ ಓವರ್ ಮಾಡಿಕೊಳ್ಳಿ. ಇಲ್ಲವಾದರೆ ನಾನು ಮೆಡಿಕಲ್ ಕಾಲೇಜು (Medical College) ಮುಂದೆಯೇ ಉಪವಾಸ ಸತ್ಯಾಗ್ರಹ ಮಾಡುತ್ತೇನೆ ಎಂದು ಮಾಜಿ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ (Dr. K Sudhakar) ಹೇಳಿದ್ದಾರೆ.
ಚಿಕ್ಕಬಳ್ಳಾಪುರ (Chikkaballapur) ನಗರದ ಗೃಹಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದರು. ಮಂತ್ರಿಗಳಾಗಿ ಎರಡು ತಿಂಗಳಾಗಿದೆ. ಜಿಲ್ಲಾಸ್ಪತ್ರೆಗೆ ಎಷ್ಟು ಬಾರಿ ಭೇಟಿ ಕೊಟ್ಟಿದ್ದೀರಿ. ಜಿಲ್ಲಾಸ್ಪತ್ರೆಯಲ್ಲಿ ಎಷ್ಟು ಐಸಿಯುಗಳಿವೆ ನಿಮಗೆ ಗೊತ್ತಾ. ನೀವು ಸಹ ವೈದ್ಯರಾಗಿದ್ದೀರಿ, ನಿಮಗೆ ಜವಾಬ್ದಾರಿ ಇಲ್ಲವಾ ಅಂತ ವಾಗ್ದಾಳಿ ನಡೆಸಿದರು.
Advertisement
Advertisement
ನಾನು ಬಹಳ ಗಲಾಟೆ ಮಾಡಿ ಮೆಡಿಕಲ್ ಕಾಲೇಜು ತಂದಿದ್ದೇನೆ. ಶೀಘ್ರದಲ್ಲೇ ಕಾಲೇಜು ಆರಂಭ ಮಾಡಿ. ನಮ್ಮ ಜಿಲ್ಲೆಯಲ್ಲಿ ಆದ ಕಟ್ಟೆ ರಾಜ್ಯದಲ್ಲಿ ಎಲ್ಲೂ ಆಗಿಲ್ಲ. ಹೀಗಾಗಿ ನಿಮಗೆ ಹೊಟ್ಟೆ ಉರಿನಾ..? ನಾವ್ ಮಾಡೋಕೆ ಅಗಿಲ್ಲ ಅಂತ ಹೊಟ್ಟೆ ಉರಿನಾ..? ಒಳ್ಳೆಯ ಕೆಲಸ ಮಾಡಿದ್ರೂ ಸಹಿಸಲ್ಲ. ಕಾಲೇಜು ಪ್ರಾರಂಭ ಮಾಡದಿದ್ದರೆ ನಾನು ಮೆಡಿಕಲ್ ಕಾಲೇಜು ಮುಂದೆಯೇ ಉಪವಾಸ ಸತ್ಯಾಗ್ರಹ ಮಾಡುತ್ತೇನೆ ಎಂದರು. ಇದನ್ನೂ ಓದಿ: ಪ್ರದೀಪ್ ಈಶ್ವರ್ ಕನಸಲ್ಲೂ ನಾನು ಬರ್ತೀನಿ: ಸುಧಾಕರ್
Advertisement
Advertisement
ಇದೇನು ಸಾಮ್ರಾಜ್ಯನಾ..? ರಾಜರ ಕಾಲ ಅಲ್ಲ. ಟಾರ್ಗೆಟ್ ಮಾಡಿದ್ದರಲ್ಲ ದ್ವೇಷದ ರಾಜಕಾರಣ ಮಾಡ್ತಿದ್ದರಲ್ಲ. ವೈಯಕ್ತಿಕವಾಗಿ ದ್ವೇಷ ಸಾಧಿಸೋದಾದರೆ ಮಾಡಿ. ಅದೇನು ಮಾಡಬೇಕೋ ಮಾಡಿ. ಕಾನೂನು ವ್ಯವಸ್ಥೆ ಇದೆ. ನಾನು ಹೆದರಿಕೊಳ್ಳೋದು ಇಲ್ಲ. ನನ್ನ ಜಿಲ್ಲೆಗೆ ಆದ ಅನ್ಯಾಯ ಸರಿಪಡಿಸಿ ಅಂತ ಆಗ್ರಹಿಸಿದರು.
Web Stories