– ಶಿಗ್ಗಾಂವಿ ಕಾಂಗ್ರೆಸ್ ಬಂಡಾಯ ಶಮನ
ಹುಬ್ಬಳ್ಳಿ: ನಾಳೆ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ಜೊತೆಗೆ ತೆರಳಿ ನಾಮಪತ್ರ (Nomination Paper) ವಾಪಸು ಪಡೆಯುತ್ತೇನೆ ಎಂದು ಶಿಗ್ಗಾಂವಿ (Shiggaon) ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಜ್ಜಂಪೀರ್ ಖಾದ್ರಿ (Ajjampir Khadri) ಹೇಳಿದ್ದಾರೆ.
Advertisement
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಯಕರು ನನ್ನ ಜೊತೆಗೆ ಮಾತನಾಡಿದ್ದಾರೆ. ಟಿಕೆಟ್ ಸಿಗದೇ ಇರುವ ಕಾರಣ ಅಸಮಾಧಾನ ಆಗಿದ್ದು ನಿಜ. ನಮ್ಮ ಅಭಿಮಾನಿಗಳು ನಾಮಪತ್ರ ಸಲ್ಲಿಕೆ ಮಾಡು ಅಂತ ಒತ್ತಾಯ ಮಾಡಿದ್ದರು. ಅದಕ್ಕೆ ನಾಮಪತ್ರ ಸಲ್ಲಿಕೆ ಮಾಡಿದ್ದೆ. ಆದರೆ ಸಿಎಂ, ಡಿಸಿಎಂ ನಮ್ಮ ಆಪ್ತರ ಜೊತೆಗೆ ಮಾತನಾಡಿದ್ದಾರೆ. ನಾನು ಸ್ಪರ್ಧೆ ಮಾಡಿದರೆ ಕಾಂಗ್ರೆಸ್ ಅಭ್ಯರ್ಥಿಗೆ ಹಿನ್ನಡೆಯಾಗುವ ಸಾಧ್ಯತೆಯಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರ ಸಲುವಾಗಿ ನಾನು ನಾಮಪತ್ರ ವಾಪಸು ಪಡೆಯುತ್ತಿದ್ದೇನೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಉಪಚುನಾವಣೆಗೆ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ – ಯತ್ನಾಳ್, ಪ್ರತಾಪ್ ಸಿಂಹ, ಯದುವೀರ್, ಸುಮಲತಾಗೆ ಕೊಕ್
Advertisement
Advertisement
ಇನ್ನೂ ಮುಂದೆ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡುವೆ. ಬಿಜೆಪಿ ಸೋಲಿಸಲು ಎಲ್ಲಾ ಪ್ರಯತ್ನ ಮಾಡುವೆ. ಈ ಬಾರಿ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: 500 ವರ್ಷಗಳಲ್ಲಿ ಮೊದಲ ಬಾರಿಗೆ ರಾಮ ಅಯೋಧ್ಯೆಯಲ್ಲಿ ದೀಪಾವಳಿ ಆಚರಿಸುತ್ತಿದ್ದಾನೆ – ಧನ್‌ತೇರಾಸ್‌ಗೆ ಮೋದಿ ಶುಭಾಶಯ
Advertisement
ತೀವ್ರ ಪೈಪೋಟಿ ನಡುವೆ ಶಿಗ್ಗಾಂವಿ ಕಾಂಗ್ರೆಸ್ ಟಿಕೆಟ್ ಯಾಸಿರ್ ಅಹ್ಮದ್ ಖಾನ್ ಪಠಾಣ್ ಪಾಲಾಯಿತು. ಪಠಾಣ್ ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ತನಗೆ ಟಿಕೆಟ್ ಸಿಗಲಿಲ್ಲ ಎಂದು ಅಜ್ಜಂಪೀರ್ ಮುನಿಸಿಕೊಂಡಿದ್ದರು. ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಇದನ್ನೂ ಓದಿ: ‘ಮೈತ್ರಿ’ ನಾಯಕರಿಗೆ ಡಿಕೆ ಬ್ರದರ್ಸ್ ಶಾಕ್ – ಚನ್ನಪಟ್ಟಣ ನಗರಸಭೆಯ 6 ಬಿಜೆಪಿ ಸದಸ್ಯರು ಕಾಂಗ್ರೆಸ್ ಸೇರ್ಪಡೆ
ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಕ್ಷೇತ್ರಗಳಿಗೆ ನವೆಂಬರ್ 13ರಂದು ಉಪಚುನಾವಣೆ ನಡೆಯಲಿದೆ. ಈಗಾಗಲೇ ಅಭ್ಯರ್ಥಿಗಳು ರೋಡ್ ಶೋ ನಡೆಸಿ ನಾಮಪತ್ರ ಸಲ್ಲಿಸಿದ್ದು, ಭರ್ಜರಿ ಮತಯಾಚನೆ ಮಾಡುತ್ತಿದ್ದಾರೆ. ಬುಧವಾರ (ಅ.30) ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಇದನ್ನೂ ಓದಿ: ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ; ದ್ವಿಚಕ್ರ ವಾಹನಗಳ ಪ್ರವೇಶಕ್ಕೆ ನಿರ್ಬಂಧ